ಐಟಿಐ ಪ್ರವೇಶಾತಿ: ಅರ್ಜಿ ಆಹ್ವಾನ
ಉಡುಪಿ : ಬೈಂದೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಎನ್ಸಿವಿಟಿ ಸಂಯೋಜನೆ ಹೊಂದಿರುವ ಇಲೆಕ್ಟ್ರೀಷಿಯನ್ ಹಾಗೂ ಫಿಟ್ಟರ್ ವೃತ್ತಿಗಳಿಗೆ ಹಾಗೂ ಕರ್ನಾಟಕ ಸರ್ಕಾರದ ಉದ್ಯೋಗ ಯೋಜನೆಯ ಟಾಟಾ ಟೆಕ್ನಾಲಜೀಸ್ ಸಹಯೋಗದೊಂದಿಗೆ ಇಂಡಸ್ಟ್ರೀಯಲ್ ರೋಬೋಟಿಕ್ಸ್ ಹಾಗೂ ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನೀಷಿಯನ್ ಮತ್ತು ಮೆಕ್ಯಾನಿಕ್ ಎಲೆಕ್ಟ್ರೀಕ್ ಕೋರ್ಸ್ಗಳ ಪ್ರವೇಶಕ್ಕಾಗಿ ಎಸೆಸೆಲ್ಸಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬೈಂದೂರು ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.
Next Story