ಪೊಲೀಸರನ್ನು ನಿಂದಿಸಿದ ಪ್ರಕರಣ; ಮತ್ತೆ ಐದು ಮಂದಿ ಆರೋಪಿಗಳ ಬಂಧನ

ಮಂಗಳೂರು : ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪಾಯಕಾರಿಯಾಗಿ ವಾಹನ ಚಾಲನೆ, ಗಸ್ತಿನಲ್ಲಿದ್ದ ಪೊಲೀಸರ ಮೇಲೆ ವಾಹನ ಹತ್ತಿಸಲು ಯತ್ನ ಹಾಗೂ ಪೊಲೀಸರ ನಿಂದನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಐದು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸಫ್ವಾನ್ (26), ಅಬ್ದುಲ್ ಸಲಾಂ (23), ಮುಹಮ್ಮದ್ ಹುನೇಝ್ (23) ಮುಹಮ್ಮದ್ ಶಾಹಿಲ್ (23), ಮುಹಮ್ಮದ್ ಫಲಾಹ್ (20) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ಸಂಚರಿಸುತ್ತಾ ವೀಡಿಯೊ ಮಾಡಿಕೊಂಡು ತೆರಳುತ್ತಿದ್ದ ಆರು ಮಂದಿಯಲ್ಲಿ 5 ಆರೋಪಿಗಳು, ಕಾರು ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವರು ಕಣ್ಣೂರಿನಲ್ಲಿ ನಡೆದ ಎಸ್ಡಿಪಿಐ ಸಮಾವೇಶಕ್ಕೆ ಹೋಗುತ್ತಿದ್ದರು ಎಂದು ಪ್ರಕರಣದಲ್ಲಿ ದಾಖಲಾಗಿದೆ.
Next Story