ಪತ್ರಕರ್ತ ಮಂಜುನಾಥ ರಾವ್ ಸುಬ್ರಹ್ಮಣ್ಯ ನಿಧನ

ಸುಳ್ಯ: ಹಿರಿಯ ಪತ್ರಕರ್ತ, ಸುಬ್ರಹ್ಮಣ್ಯ ಗ್ರಾ.ಪಂ. ಮಾಜಿ ಉಪಾಧ್ಯಕ್ಷ, ಮಂಜುನಾಥ ರಾವ್ (55) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಸುಬ್ರಹ್ಮಣ್ಯ ಪತ್ರಕರ್ತರ ಸಂಘದ ಅಧ್ಯಕ್ಷರಾಗಿದ್ದರು. ಸುಬ್ರಹ್ಮಣ್ಯ ನಿವಾಸಿಯಾಗಿದ್ದ ಮಂಜುನಾಥ ರಾವ್ ಮೂಲತಃ ಬಂಟ್ವಾಳ ತಾಲೂಕಿನ ಕಡೆಶಿವಾಲದವರು. ವಿಜಯಕರ್ನಾಟಕ ದಿನಪತ್ರಿಕೆಯ ಸುಬ್ರಹ್ಮಣ್ಯ ವರದಿಗಾರರಾಗಿದ್ದರು. ವಿಶ್ವವಾಣಿ ಮತ್ತಿತರ ಪತ್ರಿಕೆಗಳಲ್ಲಿಯೂ ಕಾರ್ಯನಿರ್ವಹಿಸಿದ್ದರು.
ರಾಜಕಿಯ, ಸಾಮಾಜಿಕ ಕ್ಷೇತ್ರದಲ್ಲಿಯೂ ಸಕ್ರೀಯರಾಗಿದ್ದ ಅವರು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರು. ಸುಬ್ರಹ್ಮಣ್ಯದ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ, ಜೇಸಿಐ ಅಧ್ಯಕ್ಷರಾಗಿ, ರೋಟರಿ ಸದಸ್ಯರಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ ಕಡಬ ಸ.ಪ್ರೌ.ಶಾಲಾ ಉಪಪ್ರಾಂಶುಪಾಲೆ ವೇದಾವತಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.







