Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕ್ರೀಡಾಂಗಣದಲ್ಲಿ ವಿಐಪಿ ಸಂಸ್ಕೃತಿ...

ಕ್ರೀಡಾಂಗಣದಲ್ಲಿ ವಿಐಪಿ ಸಂಸ್ಕೃತಿ ತರವಲ್ಲ

ಡಾ. ಮಹೇಶ್ ಮೂರ್ತಿ, ತುಮಕೂರುಡಾ. ಮಹೇಶ್ ಮೂರ್ತಿ, ತುಮಕೂರು1 Jun 2022 12:05 AM IST
share

ಐಎಎಸ್, ಐಪಿಎಸ್ ಹಾಗೂ ರಾಜಕಾರಣಿಗಳ ವಿಐಪಿ ಸಂಸ್ಕೃತಿ ಎಲ್ಲರಿಗೂ ಗೊತ್ತಿರುವ ವಿಚಾರ. ತಮಗಿರುವ ಅಧಿಕಾರ ದುರ್ಬಳಕೆ ಮಾಡಿಕೊಂಡು ಹೆಚ್ಚಿನ ಅನುಕೂಲ ಪಡೆಯುವುದು ಅಥವಾ ತಮಗಿಂತ ಕೆಳಗಿನವರನ್ನು ತಮಗೆ ಬೇಕಾದ ಕೆಲಸಕ್ಕೆ ಬಳಸಿಕೊಳ್ಳುವುದನ್ನು ನಾವು ಆಗಾಗ ನೋಡುತ್ತಲೇ ಇದ್ದೇವೆ. ಈ ಘಟನೆಗಳು ಬಹಿರಂಗವಾದ ಮೇಲೆ, ಇಂತಹ ಸಂಸ್ಕೃತಿಗಳ ವಿರುದ್ಧ ದೊಡ್ಡ ಮಟ್ಟದ ವಿರೋಧವಾಗುತ್ತದೆ. ನಂತರದಲ್ಲಿ ಎಲ್ಲವೂ ಸ್ತಬ್ಧವಾಗುತ್ತದೆ.

ಈಗಲೂ ದಿಲ್ಲಿಯ ತ್ಯಾಗರಾಜ ಕ್ರೀಡಾಂಗಣ ಸಂಕೀರ್ಣದಲ್ಲಿ ಇಂತಹದ್ದೇ ಒಂದು ಘಟನೆ ನಡೆದಿದೆ. ದಿಲ್ಲಿ ಸರಕಾರದ ಐಎಎಸ್ ಅಧಿಕಾರಿಗಳಾದ ಸಂಜೀವ್ ಖಿರ್ವಾರ್ ಮತ್ತು ರಿಂಕು ದುಗ್ಗಾ ಅವರು ಈ ಕ್ರೀಡಾ ಸಂಕೀರ್ಣವನ್ನು ತಮ್ಮ ವಾಕಿಂಗ್ ಮತ್ತು ನಾಯಿಯ ಓಡಾಟಕ್ಕೆ ಬಳಸಿಕೊಂಡಿದ್ದಾರೆ. ಅದು ರಾತ್ರಿ 10ರವರೆಗೆ ನಡೆಯಬೇಕಾಗಿದ್ದ ಕ್ರೀಡಾ ತರಬೇತಿಯನ್ನು ಸಂಜೆ 7ಗಂಟೆಗೇ ಪೂರ್ಣಗೊಳಿಸಿ ಹೋಗುವಂತೆ ಕ್ರೀಡಾಪಟುಗಳಿಗೆ ಸೂಚಿಸಿ, ಬಳಿಕ ಇವರು ಟ್ರ್ಯಾಕ್ ಮೇಲೆಯೇ ನಾಯಿ ಹಿಡಿದುಕೊಂಡು ದಿನವೂ ವಾಕಿಂಗ್ ಮಾಡಿದ್ದಾರೆ. ಈ ಘಟನೆಯ ಬಗ್ಗೆ ವಿಶ್ಲೇಷಿಸಿ ಹೇಳುವುದಾದರೆ, ಇದೊಂದು ತೀರಾ ನಾಚಿಕೆಗೇಡಿನ ಕೃತ್ಯ. ದೇಶದಲ್ಲಿ ಕ್ರೀಡೆಗೆ ಸರಿಯಾದ ಮಾನ್ಯತೆ ಸಿಗುತ್ತಿಲ್ಲ. ಅವರ ತರಬೇತಿಗೂ ಸಾಕಷ್ಟು ಮೈದಾನ ಸಿಗುತ್ತಿಲ್ಲ. ಸಿಕ್ಕರೂ ಅಲ್ಲಿ ಮೂಲಭೂತ ಸೌಲಭ್ಯಗಳೇ ಇರುವುದಿಲ್ಲ ಎಂಬ ಆರೋಪಗಳು ಹಿಂದಿನಿಂದಲೂ ಕೇಳಿ ಬರುತ್ತಲೇ ಇದೆ. ಆದರೆ, ಎಲ್ಲ ವ್ಯವಸ್ಥೆ ಇರುವ ತ್ಯಾಗರಾಜ ಕ್ರೀಡಾ ಸಂಕೀರ್ಣವನ್ನು ಯಾರೋ ಒಬ್ಬರು ಐಎಎಸ್ ಅಧಿಕಾರಿಗಳು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡಿರುವುದು ಸಮಾಜ ಒಪ್ಪುವಂತಹ ಕೆಲಸ ಅಲ್ಲವೇ ಅಲ್ಲ.

ಸದ್ಯ ಕೇಂದ್ರ ಗೃಹ ಇಲಾಖೆ, ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಸಂಜೀವ್ ಖಿರ್ವಾರ್ ಮತ್ತು ರಿಂಕು ದುಗ್ಗಾ ದಂಪತಿಯನ್ನು ಕಡ್ಡಾಯ ವರ್ಗಾವಣೆ ಮಾಡಿದೆ. ಒಬ್ಬರನ್ನು ಲಡಾಖ್‌ಗೆ, ಮತ್ತೊಬ್ಬರನ್ನು ಅರುಣಾಚಲ ಪ್ರದೇಶಕ್ಕೆ ಕಳುಹಿಸಲಾಗಿದೆ. ಇದು ಶಿಕ್ಷೆಯ ವರ್ಗಾವಣೆ ಎಂದು ಹೇಳಬಹುದಾದರೂ, ಇವರಿಗೆ ನೀಡಿರುವ ಶಿಕ್ಷೆ ಮಾತ್ರ ಕಡಿಮೆಯೇ. ಇಲ್ಲಿ ಒಂದು ಗಮನಿಸಲೇಬೇಕಾದ ಸಂಗತಿಯೆಂದರೆ, ನಾವು ವಿಐಪಿಗಳು ಎಂಬ ಭಾವನೆಯೊಂದಿಗೆ ಸಾಮಾನ್ಯ ಜನರಿಗೆ ಇಲ್ಲದ ಸವಲತ್ತನ್ನು ಬಳಸಿಕೊಳ್ಳಲು ಹೋಗುವುದು ಸರಿಯಲ್ಲ. ಈ ವಿಚಾರದಲ್ಲಿ ನಾವು ಪಾಶ್ಚಾತ್ಯ ರಾಜಕಾರಣಿಗಳನ್ನು ನೋಡಿ ತಿಳಿದುಕೊಳ್ಳಬಹುದು. ಇಂದಿಗೂ ಬ್ರಿಟನ್‌ನಲ್ಲಿ ಅಧಿಕಾರಸ್ಥರು ಸಾಮಾನ್ಯರಂತೆಯೇ ಇರುತ್ತಾರೆ. ಸಮಯ ಸಿಕ್ಕಾಗ ಮೆಟ್ರೋದಲ್ಲಿ ಓಡಾಡುತ್ತಾರೆ. ಸಾರ್ವಜನಿಕ ಸಾರಿಗೆಯನ್ನು ಬಳಕೆ ಮಾಡುತ್ತಾರೆ. ನಮ್ಮ ದೇಶದಲ್ಲಿ ಇಂತಹ ಬೆಳವಣಿಗೆ ಕಷ್ಟವೆಂದು ಭಾವಿಸಿದರೂ, ಕಡೇ ಪಕ್ಷ ಜನರಿಗೆ ತೊಂದರೆಯಾಗದಂತೆ ಇರುವುದು ಅಧಿಕಾರಿಗಳು ಮತ್ತು ರಾಜಕಾರಣಿಗಳ ಕರ್ತವ್ಯವಾಗಿದೆ.

ಬಿಜೆಪಿ ಸಂಸ್ಕೃತಿ ಎಂದಾಕ್ಷಣ ನಮ್ಮ ದೇಶದಲ್ಲಿ ಮತ್ತೆ ಮತ್ತೆ ಹೆಚ್ಚಾಗಿ ಚರ್ಚೆಗೆ ಬರುವುದು ಝೀರೋ ಟ್ರಾಫಿಕ್ ಓಡಾಟ. ಸಮಯ ನಿಮಿತ್ತ ಮುಖ್ಯಮಂತ್ರಿ, ರಾಜ್ಯಪಾಲ, ಪ್ರಧಾನಿ, ರಾಷ್ಟ್ರಪತಿ, ಉಪರಾಷ್ಟ್ರಪತಿ ಸೇರಿದಂತೆ ಪ್ರಮುಖರಿಗೆ ಝೀರೋ ಟ್ರಾಫಿಕ್ ಕೊಡಲಾಗುತ್ತಿದೆ. ಆದರೆ, ಇಂತಹ ಹೊತ್ತಿನಲ್ಲೇ ಆ್ಯಂಬುಲೆನ್ಸ್‌ಗಳಿಗೂ ಅವಕಾಶ ಮಾಡಿಕೊಡದ ಹಲವಾರು ಪ್ರಕರಣಗಳು ನಮ್ಮ ಮುಂದಿವೆ. ಇಂತಹ ವಿಚಾರದಲ್ಲಿಯೂ ಸರಕಾರಗಳು, ಅಧಿಕಾರಿ ವರ್ಗ ಸೂಕ್ಷ್ಮಮತಿಗಳಾಗಬೇಕಾದದ್ದು ಅತ್ಯವಶ್ಯವಾಗಿದೆ.

share
ಡಾ. ಮಹೇಶ್ ಮೂರ್ತಿ, ತುಮಕೂರು
ಡಾ. ಮಹೇಶ್ ಮೂರ್ತಿ, ತುಮಕೂರು
Next Story
X