ರಾಜ್ಯಸಭೆ ಚುನಾವಣೆ: ಎಲ್ಲ ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

ಬೆಂಗಳೂರು, ಜೂ. 1: ಕರ್ನಾಟಕ ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಲ್ಲಿಸಲಾಗಿದ್ದ ಎಲ್ಲ ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದವಾಗಿದ್ದು, ಸ್ವೀಕೃತಗೊಂಡಿವೆ.
'ಸ್ವೀಕೃತವಾಗಿರುವ ಭಾರತೀಯ ಜನತಾ ಪಕ್ಷದ ಮೂವರು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಇಬ್ಬರು ಹಾಗೂ ಜಾತ್ಯತೀತ ಜನತಾದಳದ ಓರ್ವ ಅಭ್ಯರ್ಥಿ ನಾಮಪತ್ರಗಳೂ ಒಳಗೊಂಡಂತೆ ಎಲ್ಲ ಆರು ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಹಾಗೂ ಅಂಗೀಕೃತವಾಗಿವೆ' ಎಂದು ಚುನಾವಣಾಧಿಕಾರಿಗಳೂ ಆದ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ತಿಳಿಸಿದ್ದಾರೆ.
Next Story





