ರಾಜ್ಯಸಭೆ ಚುನಾವಣೆ; ಸಿದ್ದರಾಮಯ್ಯ ನಮಗೆ ಬೆಂಬಲ ನೀಡುವ ವಿಶ್ವಾಸ ಇದೆ ಎಂದ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ

ಬೆಂಗಳೂರು: ರಾಜ್ಯಸಭೆಗೆ ಕರ್ನಾಟಕದ ವಿಧಾನಸಭೆ ಸದಸ್ಯರು ಆಯ್ಕೆ ಮಾಡಲಿರುವ ಅಭ್ಯರ್ಥಿಗಳ ಚುನಾವಣಾ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ಕಣಕ್ಕಿಳಿದಿದ್ದು, ಕಾಂಗ್ರೆಸ್ ನಿಂದ 2ನೇ ಅಭ್ಯರ್ಥಿಯಾಗಿ ಮನ್ಸೂರ್ ಖಾನ್ ಕಣಕ್ಕಿಳಿದಿದ್ದಾರೆ.
ಕಾಂಗ್ರೆಸ್ ನ ಮನ್ಸೂರ್ ಖಾನ್ ಸ್ಪರ್ಧೆಯಿಂದ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಹಿನ್ನಡೆಯಾಗುವ ಸಾಧ್ಯತೆ ಇದ್ದು, ತಮ್ಮ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕಾಂಗ್ರೆಸ್ ನಾಯರೊಂದಿಗೆ ಜೆಡಿಎಸ್ ಮನವಿ ಮಾಡಿಕೊಂಡಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ, ನನಗೆ ಸಿದ್ದರಾಮಯ್ಯ ಅವರು ಬೆಂಬಲ ನೀಡುವ ವಿಶ್ವಾಸ ಇದೆ. ಸಿದ್ದರಾಮಯ್ಯ ಅವರಿಗೆ ನನ್ನ ನೋಡಿದರೆ ತುಂಬಾ ಪ್ರೀತಿ ಎಂದು ಹೇಳಿದ್ದಾರೆ.
ನಮ್ಮ ಪಕ್ಷದ ಶಾಸಕರು ನನಗೆ ಬೆಂಬಲ ಕೊಡ್ತಾರೆ. ಯಾವುದೇ ಅಡ್ಡ ಮತದಾನಕ್ಕೆ ಅವಕಾಶ ಇಲ್ಲ. ಪಕ್ಷದ ಎಲ್ಲ ಶಾಸಕರನ್ನು ಭೇಟಿಯಾಗಲಿದ್ದೇನೆ ಎಂದು ತಿಳಿಸಿದರು.
Next Story





