Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪ್ರಧಾನಿ ಸಂಕಲ್ಪದಂತೆ 2024ಕ್ಕೆ ಪ್ರತಿ...

ಪ್ರಧಾನಿ ಸಂಕಲ್ಪದಂತೆ 2024ಕ್ಕೆ ಪ್ರತಿ ಮನೆಗೂ ಕುಡಿಯುವ ನೀರಿನ ವ್ಯವಸ್ಥೆ: ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ1 Jun 2022 4:41 PM IST
share
ಪ್ರಧಾನಿ ಸಂಕಲ್ಪದಂತೆ 2024ಕ್ಕೆ ಪ್ರತಿ ಮನೆಗೂ ಕುಡಿಯುವ ನೀರಿನ ವ್ಯವಸ್ಥೆ: ಸಿಎಂ ಬೊಮ್ಮಾಯಿ

ಉಡುಪಿ : ದೇಶದ ಪ್ರತಿಯೊಬ್ಬರ ಮನೆಗಳಿಗೂ ನೀರು ಕೊಡುವ  ಪ್ರಧಾನಿ ನರೇಂದ್ರ ಮೋದಿಯ ಯೋಜನೆಯ ಪ್ರೇರಣೆಯಿಂದ ರಾಜ್ಯದಲ್ಲಿ ಕಳೆದ ವರ್ಷ 25 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಈ ವರ್ಷ ಮತ್ತೆ 25 ಲಕ್ಷ ಮನೆಗಳಿಗೆ ಆ ವ್ಯವಸ್ಥೆ ಮಾಡಲಾಗುವುದು. ಹೀಗೆ 2024ಕ್ಕೆ ಪ್ರತಿಯೊಬ್ಬರ ಮನೆಗಳಿಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಒದಗಿಸಲಾಗುವುದು. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರ 50:50 ಹಣ ಕಾಸು ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಣಿಪಾಲ ಖಾಸಗಿ ಹೊಟೇಲಿನಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಎಂಟನೇ ವರ್ಷದ ಸಾಧನೆ ಕುರಿತು ಮಾಹಿತಿ ನೀಡಲು ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತಿದ್ದರು.

ದೇಶದಲ್ಲಿ ಶೇ.20 ಎಥೆನಾಲ್ ಬಳಕೆ ಮಾಡಬೇಕೆಂಬುದು ಮೋದಿ ಸಂಕಲ್ಪ ವಾಗಿದೆ. ಅದರಂತೆ ಕರ್ನಾಟಕ ಅತೀ ಹೆಚ್ಚು ಎಥೆನಾಲ್ ಉತ್ಪಾದಿಸಿ ದೇಶಕ್ಕೆ ಕೊಡುಗೆ ನೀಡುತ್ತಿದೆ. ಸೋಲಾರ್ ಸ್ಟೋರೆಜ್‌ನ ಹೊಸ ನೀತಿಯಂತೆ ಕರ್ನಾಟಕ ದಲ್ಲಿ ಅತಿ ಶೀಘ್ರದಲ್ಲಿ ಸೋಲಾರ್ ಸ್ಟೋರೇಜ್ ಯೋಜನೆಗಳನ್ನು ಮಾಡ ಲಾಗುವುದು. ಶರಾವತಿ ಯೋಜನೆಯಲ್ಲಿ ೫ ಸಾವಿರ ಕೋಟಿ ರೂ. ವೆಚ್ಚದಲ್ಲಿ ಸೋಲಾರ್ ಬಳಕೆ ಮಾಡಿ, ಕೆಳಗೆ ಬಿದ್ದ ನೀರನ್ನು ಮೇಲಕ್ಕೆ ಎತ್ತಿ ಮತ್ತೆ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ ಎಂದರು.

ಕೃಷಿ, ಉತ್ಪಾದನೆ ಹಾಗೂ ಸೇವಾ ವಲಯ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯ. ಹಸಿರು ಕ್ರಾಂತಿಯ ಮೂಲಕ ಕೃಷಿ ಅಭಿವೃದ್ಧಿ ಮಾಡಿದರೂ ರೈತರ ಪರಿಸ್ಥಿತಿ ಸುಧಾರಣೆ ಆಗಿಲ್ಲ. ಕೃಷಿಯೇ ದೇಶದ ಆರ್ಥಿಕತೆ ಭದ್ರ ಬುನಾದಿ ಯಾಗಿದೆ. ಕೃಷಿ ಉತ್ಪಾದನೆ ಹೆಚ್ಚಿದರೆ ಅದರ ಪರಿಣಾಮ ಉತ್ಪಾದನಾ ಮತ್ತು ಸೇವಾ ವಲಯದಲ್ಲೂ ಕಾಣಬಹುದು. ಆದುದರಿಂದ ಪ್ರಧಾನಿ ರೈತ ಮತ್ತು ಕೃಷಿಗೆ ಯೋಜನೆಗಳನ್ನು ಕೊಟ್ಟಿದ್ದಾರೆ ಎಂದು ಅವರು ತಿಳಿಸಿದರು.

ಮೀನುಗಾರಿಕೆ, ನೇಕಾರ, ಐಟಿಬಿಟಿ, ಫಾರ್ಮ ಸೇರಿದಂತೆ ಎಲ್ಲ ರಂಗದಲ್ಲೂ ಸ್ಟಾರ್ಟ್‌ ಅಪ್‌ಗಳು ಪ್ರಾರಂಭವಾಗಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯವಹಾರ ಮಾಡುವ ನಾಲ್ಕು ಸ್ಟಾರ್ಟ್‌ಅಪ್‌ಗಳ ಪೈಕಿ ಮೂರು ಕರ್ನಾಟಕದಲ್ಲಿದೆ. ಹೊಸ ಶಿಕ್ಷಣ ನೀತಿಗೆ ಬೇಕಾದ ಶಿಕ್ಷಕರಿಗೆ ತರಬೇತಿ, ಮೂಲಭೂತ ಸೌಕರ್ಯಗಳಿಗೆ ಕೇಂದ್ರ ಹಣಕಾಸು ನೆರವು ನೀಡುತ್ತಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ್, ಸುನೀಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಶಾಸಕ ರಾದ ರಘುಪತಿ ಭಟ್, ಲಾಲಾಜಿ ಆರ್.ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,  ಮಟ್ಟಾರು ರತ್ನಾಕರ ಹೆಗ್ಡೆ, ಉದಯ ಕುಮಾರ್ ಶೆಟ್ಟಿ, ಪ್ರಮೋದ್ ಮಧ್ವರಾಜ್, ಸುರೇಶ್ ಶೆಟ್ಟಿ ಗುರ್ಮೆ ಮೊದ ಲಾದವರು ಉಪಸ್ಥಿತರಿದ್ದರು.

ಸಮುದ್ರದ ನೀರಿನಿಂದ ಅಮೋನಿಯಮ್!

ಸಮುದ್ರ ನೀರನ್ನು ಬಳಕೆ ಮಾಡಿ, ಉಪ್ಪಿನಾಂಶ ಬೇರ್ಪಡಿಸಿ, ಹೈಡ್ರೋಜನ್, ಆಕ್ಸಿಜನ್‌ನಲ್ಲಿರುವ ಅಂಶಗಳನ್ನು ತೆಗೆದುಕೊಂಡು ಅಮೋನಿಯಮ್ ತಯಾರಿ ಸುವ ಚಿಂತನೆ ದೇಶದಲ್ಲಿ ನಡೆಯುತ್ತಿದೆ. ಈ ಮೂಲಕ ವಿದ್ಯುತ್ ಹಾಗೂ ಗೊಬ್ಬರಕ್ಕೆ ಸಾಕಷ್ಟು ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

ಈ ಯೋಜನೆ ಇನ್ನು ಪೂರ್ಣ ಪ್ರಮಾಣದಲ್ಲಿ ಆಗಿಲ್ಲ. ಆದರೆ ಮುಂದಿನ ದಿನಗಳ ಇದರ ಸಾಧ್ಯತೆ ಹೆಚ್ಚಿದೆ. ಇದು ಕಾರ್ಯಗತವಾದರೆ ದೊಡ್ಡ ಪ್ರಮಾಣ ದಲ್ಲಿ ಕ್ರಾಂತಿಯಾಗುತ್ತದೆ. ಭಾರತದ ಕರಾವಳಿಯಲ್ಲಿ ಕ್ಲೀನ್ ಆ್ಯಂಡ್ ಗ್ರೀನ್ ಎರ್ನಜಿ ಬಳಕೆ ಮಾಡಿ ದೊಡ್ಡ ಉತ್ಪಾದನಾ ವಲಯಗಳನ್ನು ಸ್ಥಾಪನೆ ಮಾಡ ಬಹುದಾಗಿದೆ. ಕೇಂದ್ರ ಇಂಧನ ಸಚಿವರೊಂದಿಗೆ ಚರ್ಚಿಸಿದಾಗ ಈ ವಿಚಾರ ತಿಳಿದುಬಂತು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X