Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಲೆ ಆರಂಭವಾಗಿ 25 ದಿನವಾದರೂ ಮಕ್ಕಳಿಗೆ...

ಶಾಲೆ ಆರಂಭವಾಗಿ 25 ದಿನವಾದರೂ ಮಕ್ಕಳಿಗೆ ಪುಸ್ತಕ ನೀಡಿಲ್ಲ: ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್

ವಾರ್ತಾಭಾರತಿವಾರ್ತಾಭಾರತಿ1 Jun 2022 5:44 PM IST
share
ಶಾಲೆ ಆರಂಭವಾಗಿ 25 ದಿನವಾದರೂ ಮಕ್ಕಳಿಗೆ ಪುಸ್ತಕ ನೀಡಿಲ್ಲ: ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್

ಬೆಂಗಳೂರು, ಜೂ.1: ರಾಜ್ಯದಲ್ಲಿ ಶಾಲೆ ಆರಂಭವಾಗಿ 25 ದಿನವಾದರೂ ಮಕ್ಕಳಿಗೆ ಪುಸ್ತಕ, ಸಮವಸ್ತ್ರ, ಸೈಕಲ್ ನೀಡಿಲ್ಲ. ಸರಕಾರ ಈ ವಿಚಾರದ ಬಗ್ಗೆ ಗಮನಹರಿಸುವ ಬದಲು, ಪಠ್ಯ ಪುಸ್ತಕಗಳ ಕೇಸರೀಕರಣ ಮಾಡುವಲ್ಲಿ ನಿರತವಾಗಿದೆ ಎಂದು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಕಿಡಿಗಾರಿದರು.

ಬುಧವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರಕಾರ ಎಚ್ಚೆತ್ತುಕೊಳ್ಳದಿದ್ದರೆ ಜನರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದರು.

ರಾಜ್ಯದಲ್ಲಿ ಇಂದು ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಮಾಡಿರುವ ಅನಾಹುತ ವಿಕೋಪಕ್ಕೆ ಹೋಗಿದ್ದರೂ ಸರಕಾರ ನಿರ್ಲಕ್ಷ್ಯ ಧೋರಣೆ ತಾಳಿದೆ. ಈ ಸಮಿತಿಯ ಕಾರ್ಯವೈಖರಿ ಕುರಿತು ಸಾಹಿತಿಗಳು, ಮಠಾಧೀಶರು ಹಾಗೂ ಕನ್ನಡಪರ ಸಂಘಟನೆಗಳು ಹೋರಾಟ ಮಾಡಿದರೂ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವ ರೋಹಿತ್ ಚಕ್ರತೀರ್ಥ ಹಿನ್ನೆಲೆ ನೋಡಿದರೆ ಕನ್ನಡದ ಬಗ್ಗೆ ಇರುವ ಅಭಿಮಾನ, ಬಾವುಟದ ಬಗ್ಗೆ ಅವರು ಕೊಟ್ಟಿರುವ ಹೇಳಿಕೆಗಳು, ಸಾಹಿತಿಗಳ ಬಗ್ಗೆ ಹಾಗೂ ರಾಷ್ಟ್ರಕವಿ ಬಗ್ಗೆ ಮಾಡಿರುವ ಉದ್ಧಟತನ ಹಾಗೂ ಕೆಟ್ಟ ಅಭಿಪ್ರಾಯ ತೋರಿರುವ ಉದಾಹರಣೆ ಸಾಕಷ್ಟಿದೆ ಎಂದು ಅವರು ಕಿಡಿಗಾರಿದರು. 

ಇಂತಹ ಕೊಳಕು ಮನಸ್ಥಿತಿಯ ವ್ಯಕ್ತಿಯನ್ನು ಸಮಿತಿ ಅಧ್ಯಕ್ಷರನ್ನಾಗಿ ಮಾಡಿ ಪುಸ್ತಕ ಪರಿಷ್ಕರಣೆ ಮಾಡಿದರೆ ಆ ಸ್ಥಾನಕ್ಕೆ ಯಾವ ಬೆಲೆ ಸಿಗುತ್ತದೆ ಎಂಬ ವಿಚಾರವನ್ನು ಸರಕಾರ ಯಾಕೆ ಅರ್ಥ ಮಾಡಿಕೊಂಡಿಲ್ಲ ಎಂಬುದು ನಮ್ಮ ಪ್ರಶ್ನೆ ಎಂದು ಚಂದ್ರಶೇಖರ್ ಹೇಳಿದರು.

ಮೆಟ್ರೋದಲ್ಲಿ ಕನ್ನಡ ಬಳಕೆ, ಹಿಂದಿ ಹೇರಿಕೆ ವಿಚಾರ ಸಂದರ್ಭದಲ್ಲಿ ‘ನನ್ನ ಮೇಲೆ ಹೇರಿಕೆಯಾದ ಮೊದಲ ಭಾಷೆ ಕನ್ನಡ’ ಎಂದ ವ್ಯಕ್ತಿಯನ್ನು ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಕನ್ನಡ ಬಾವುಟ ಬೇಕು ಎಂಬ ವಿಚಾರ ಚರ್ಚೆ ನಡೆಯುತ್ತಿರುವಾಗ ಈತ ಹಗ್ಗದ ಮೇಲೆ ಇರುವ ಒಳಉಡುಪುಗಳನ್ನು ತೋರಿಸಿ ಇಲ್ಲಿಯೂ ಸಾಕಷ್ಟು ಬಾವುಟ ಹಾರಾಡುತ್ತಿವೆ ಎಂದು ಹೇಳಿ ನಾಡ ಬಾವುಟಕ್ಕೆ ಅಪಮಾನ ಮಾಡಿದ ಕೊಳಕು ಮನುಷ್ಯ ಈತ ಎಂದು ಅವರು ಕಿಡಿಗಾರಿದರು.

ಬಸವಣ್ಣ ಬಗ್ಗೆ ಮಾತನಾಡಿದ ಹಿನ್ನೆಲೆಯಲ್ಲಿ ಆ ಸಮಾಜದ ಸ್ವಾಮೀಜಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕುವೆಂಪು ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಿರ್ಮಲಾನಂದ ಶ್ರೀಗಳು ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ. ಈ ಸಮಿತಿಯಲ್ಲಿರುವ 9 ಸದಸ್ಯರ ಪೈಕಿ 7 ಮಂದಿ ಒಂದೇ ಕೋಮಿಗೆ ಸೇರಿದವರಾಗಿದ್ದಾರೆ. ಈ ಸಮಿತಿಯಲ್ಲಿ ಮಹಿಳೆಯರಿಗೆ, ಬೇರೆ ವರ್ಗದವರಿಗೆ ಯಾವುದೇ ಸ್ಥಾನ ನೀಡಿಲ್ಲ ಎಂದು ಅವರು ಹೇಳಿದರು. 

ಇನ್ನು ಈ ಸಮಿತಿ ಹೊಸದಾಗಿ ಸೇರಿಸಿರುವ 10 ಬರಹದಲ್ಲಿ 8 ಬರಹ ಒಂದೇ ಸಮುದಾಯಕ್ಕೆ ಸೇರಿದೆ. ಹಿಂದುಳಿದ ವರ್ಗಕ್ಕೆ ಸೇರಿದ ಪಿ.ಲಂಕೇಶ್, ಅರವಿಂದ ಮಾಲಗತ್ತಿ, ಸಾರಾ ಅಬೂಬಕರ್, ಎಲ್.ಬಸವರಾಜು, ಕೆ.ನೀಲಾ, ಬಿ.ಟಿ.ಲಲಿತಾನಾಯಕ್ ಅವರ ಬರಹ ಕೈಬಿಟ್ಟಿದ್ದಾರೆ. ಇಷ್ಟೆಲ್ಲಾ ಆದರೂ ಸಚಿವರಾಗಲಿ, ಮುಖ್ಯಮಂತ್ರಿಗಳಾಗಲಿ ಈ ಬಗ್ಗೆ ಗಮನಹರಿಸಿಲ್ಲ ಎಂದು ಅವರು ಚಂದ್ರಶೇಖರ್ ಆಕ್ಷೇಪ ವ್ಯಕ್ತಪಡಿಸಿದರು.

ಹಂಪಾ ನಾಗರಾಜಯ್ಯ, ಪ್ರೊ.ಎಸ್.ಜಿ.ಸಿದ್ದರಾಮಯ್ಯ ಸೇರಿದಂತೆ ಹಲವು ಸಾಹಿತಿಗಳು ತಮ್ಮ ಲೇಖನ ಹಿಂಪಡೆಯುತ್ತಿದ್ದಾರೆ. 10ನೆ ತರಗತಿ ಪ್ರಥಮ ಭಾಷೆ ಕನ್ನಡ ಪುಸ್ತಕದಲ್ಲಿ ಮಹಿಳೆಯರಿಗೆ ಕಳಂಕ ತರುವ ಪದ್ಯ ಸೇರಿಸಲಾಗಿದೆ ಎಂದು ಲೇಖಕಿಯೊಬ್ಬರು ತಮ್ಮ ಲೇಖನ ಹಿಂಪಡೆದಿದ್ದಾರೆ ಎಂದು ಚಂದ್ರಶೇಖರ್ ತಿಳಿಸಿದರು. 

ಅಂಬೇಡ್ಕರ್ ಅವರನ್ನು ‘ಜಗತ್ತಿನ ಜಲತಂತ್ರಜ್ಞ, ವಾಯುತಜ್ಞರು, ವೈದ್ಯರು, ಕಂಪ್ಯೂಟರ್ ತಜ್ಞರು, ಪ್ರಾಧ್ಯಾಪಕರು, ವಕೀಲರು, ರಾಕೆಟ್ ತಂತ್ರಜ್ಞರು, ಪ್ರಪಂಚದಲ್ಲಿ ಚಕ್ರ ಮತ್ತು ಬೆಂಕಿ ಉಪಯೋಗ ಕಂಡುಹಿಡಿದವರು’ ಎಂದು ಟ್ವಿಟರ್‍ನಲ್ಲಿ ಲೇವಡಿ ಮಾಡಿದ್ದಾರೆ. ಇಂತಹ ವಿಕೃತಿ ಮನಸ್ಥಿತಿಯ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ಹೇಗೆ ಮಾಡಿದರು? ಸಮಾಜದ ಪ್ರತಿ ವರ್ಗ ಈ ಸಮಿತಿ ವಿರುದ್ಧ ಧ್ವನಿ ಎತ್ತುತ್ತಿದ್ದರೂ ಸರಕಾರ ಮಾತ್ರ ಮೌನವಾಗಿದೆ ಎಂದು ಅವರು ಟೀಕಿಸಿದರು.

ಪಠ್ಯ ಪುಸ್ತಕ ರಾಜಕೀಯದಿಂದ ದೂರ ಇರಬೇಕಿತ್ತು. ಇದು ಜಾತಿ, ಧರ್ಮ ಹಾಗೂ ಲಿಂಗ ವೈರುಧ್ಯ ಇರದೇ ಎಲ್ಲರನ್ನು ಒಟ್ಟಾಗಿ ಪರಿಗಣಿಸಿ ಬಹು ಸಂಸ್ಕøತಿ ಒಳಗೊಂಡು ರಚನೆಯಾಗಬೇಕು. ವಿದ್ಯಾರ್ಥಿಗಳೇ ದೇಶದ ಭವಿಷ್ಯ. ಮಕ್ಕಳ ತಲೆಗೆ ಬುದ್ಧ, ಬಸವ, ಅಂಬೇಡ್ಕರ್ ಅವರ ಬಗ್ಗೆ ಋಣಾತ್ಮಕ ಅಂಶ ತುಂಬುವ ಪ್ರಯತ್ನ ಮಾಡುತ್ತಿದ್ದಾರೆ. ಭಗತ್ ಸಿಂಗ್ ಪಠ್ಯ ಬಿಡಲಾಗಿದೆ. ಈ ಎಲ್ಲದರ ಜವಾಬ್ದಾರಿಯನ್ನು ಸಮಿತಿ ಹಾಗೂ ಶಿಕ್ಷಣ ಸಚಿವರೇ ಹೊಣೆ ಹೊರಬೇಕು. ಅಲ್ಲದೆ, ಸಚಿವರು ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಹಳೇ ಪುಸ್ತಕವನ್ನೇ ಈ ವರ್ಷವೂ ಮುಂದುವರೆಸಬೇಕು. ಇನ್ನು ರೋಹಿತ್ ಚಕ್ರತೀರ್ಥ ಹಿರಿಯ ಬರಹಗಾರರ ನೈತಿಕತೆ ಪ್ರಶ್ನಿಸಿದ್ದು, ಈತ ಎಲ್ಲರಲ್ಲೂ ಕ್ಷಮೆ ಕೇಳಬೇಕು. ಈ ಸಮಿತಿ ಅಧ್ಯಕ್ಷನಾಗಬೇಕಾದರೆ, ಶಿಕ್ಷಣ ತಜ್ಞನಾಗಿರಬೇಕು, ಸಂಶೋಧನೆ ಮಾಡಬೇಕು. ಇಷ್ಟಾದರೂ ಸರಕಾರ ಮೌನವಾಗಿದ್ದರೆ ಇಡೀ ನಾಡಿನ ಜನರಿಗೆ ಮಾಡುವ ಅಪಮಾನ ಎಂದು ಚಂದ್ರಶೇಖರ್ ಹೇಳಿದರು.

ವಿರೋಧ ಪಕ್ಷವಾಗಿ ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಹೇಗೆ ತೆಗೆದುಕೊಂಡು ಹೋಗುತ್ತೀರಿ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ವಿಚಾರವನ್ನು ನಾವು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ. ಸರಕಾರ ಮುಂದಿನ ಒಂದು ವಾರದಲ್ಲಿ ತೀರ್ಮಾನ ಕೈಗೊಳ್ಳಲಿದ್ದರೆ ಕಾನೂನಾತ್ಮಕ ಹಾಗೂ ದೊಡ್ಡ ಹೋರಾಟ ಮಾಡಲಾಗುವುದು ಎಂದು ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X