Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಸ್ವಾಭಾವಿಕ ಲೈಂಗಿಕತೆಗೆ ಒತ್ತಾಯ: ಪತಿ...

ಅಸ್ವಾಭಾವಿಕ ಲೈಂಗಿಕತೆಗೆ ಒತ್ತಾಯ: ಪತಿ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ1 Jun 2022 7:27 PM IST
share
ಅಸ್ವಾಭಾವಿಕ ಲೈಂಗಿಕತೆಗೆ ಒತ್ತಾಯ: ಪತಿ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು, ಜೂ.1: ಪತ್ನಿಯನ್ನು ಅಸಹಜ ಲೈಂಗಿಕತೆಗೆ ಒತ್ತಾಯಿಸಿದ ಹಾಗೂ ಆಕೆಯ ತಂದೆಗೆ ಅಶ್ಲೀಲ ಚಿತ್ರಗಳನ್ನು ಕಳುಹಿಸಿದ ಕುರಿತು ಪತ್ನಿ ದೂರು ಸಲ್ಲಿಸಿದ್ದರೂ, ಅವುಗಳನ್ನು ಕೈಬಿಟ್ಟು, ದೌರ್ಜನ್ಯ ಆರೋಪದಡಿಯಷ್ಟೇ ತನಿಖೆ ನಡೆಸಿ ದೋಷಾರೋಪಣೆ ಸಲ್ಲಿಸಿದ್ದ ಪೊಲೀಸರ ಕ್ರಮವನ್ನು ನಿರ್ಲಕ್ಷ್ಯದ ತನಿಖೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಆರೋಪಿ ವಿರುದ್ಧ ಸೂಕ್ತ ತನಿಖೆ ನಡೆಸಿ ಹೆಚ್ಚುವರಿ ದೋಷಾರೋಪಪಟ್ಟಿ ಸಲ್ಲಿಸುವಂತೆ ಆದೇಶಿಸಿದೆ.

ಪತ್ನಿಯ ದೂರಿನ ಮೇರೆಗೆ ವಿವೇಕನಗರ ಠಾಣೆ ಪೊಲೀಸರು ದಾಖಲಿಸಿರುವ ಕಿರುಕುಳ ಪ್ರಕರಣ ರದ್ದುಪಡಿಸುವಂತೆ ಸಾಫ್ಟ್‍ವೇರ್ ಉದ್ಯೋಗಿಯಾಗಿರುವ ಆರೋಪಿ ಪತಿ ಸಲ್ಲಿಸಿದ್ದ ಅರ್ಜಿ ಹಾಗೂ ತನ್ನ ದೂರಿನ ಮೇರೆಗೆ ಪೊಲೀಸರು ಸೂಕ್ತ ತನಿಖೆ ನಡೆಸಿಲ್ಲ. ಹೀಗಾಗಿ ಸೂಕ್ತ ತನಿಖೆ ನಡೆಸುವಂತೆ ನಿರ್ದೇಶಿಸಬೇಕು ಎಂದು ಕೋರಿ ಪತ್ನಿ ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ತೀರ್ಪು ನೀಡಿದೆ.

ಛತ್ತೀಸ್‍ಗಢದ ರಾಯಪುರ ಮೂಲದ ಮಹಿಳೆ ಹಾಗೂ ಬೆಂಗಳೂರಿನ ವ್ಯಕ್ತಿಯ ಮಧ್ಯೆ 2013ರಲ್ಲಿ ಮುಂಬೈನ ಪ್ರತಿಷ್ಠಿತ ಐಐಟಿಯಲ್ಲಿ ಓದುವಾಗ ಪ್ರೇಮಾಂಕುರವಾಗಿತ್ತು. 2015ರಲ್ಲಿ ಪಿಹೆಚ್‍ಡಿ ಅಧ್ಯಯನದ ವೇಳೆ ಇಬ್ಬರೂ ವಿವಾಹವಾಗಿದ್ದರು. ಮದುವೆ ಬಳಿಕ ಬೆಂಗಳೂರಿನಲ್ಲೇ ವಾಸವಿದ್ದರು. ಕೆಲ ಸಮಯದ ಬಳಿಕ ಅಸ್ವಾಭಾವಿಕ ಲೈಂಗಿಕತೆಗೆ ಪತಿ ಒತ್ತಾಯಿಸುತ್ತಿದ್ದನೆಂಬ ಕಾರಣಕ್ಕೆ ಪತ್ನಿ ತವರಿಗೆ ಹೋಗಿದ್ದರು. ಹಾಗೆ ನಡೆದುಕೊಳ್ಳುವುದಿಲ್ಲ ಎಂಬ ಭರವಸೆ ಮೇರೆಗೆ ವಾಪಸ್ ಬಂದಿದ್ದರು. ಆದರೆ, ಪತಿಯ ನಡವಳಿಕೆ ಸರಿಹೋಗದ ಕಾರಣಕ್ಕೆ 2016ರಲ್ಲಿ ಮತ್ತೆ ತವರಿಗೆ ವಾಪಸಾಗಿದ್ದರು. 

ಮನೆ ಬಿಟ್ಟುಹೋದ ಬಳಿಕ ಪತಿ ಆಕೆಯ ತಂದೆಗೆ ಮಗಳ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗುತ್ತಿದೆ. ನಂತರ, ಪತ್ನಿಯ ಕೆಲವು ಅಶ್ಲೀಲ ಚಿತ್ರಗಳನ್ನು ಆಕೆಯ ತಂದೆ ಮತ್ತು ಆಕೆಯ ಸ್ನೇಹಿತರಿಗೆ ಕಳುಹಿಸಿದ್ದ ಎಂದು ಛತ್ತೀಸ್‍ಗಢದಲ್ಲಿ ಪೊಲೀಸರಿಗೆ ಮಹಿಳೆ ದೂರು ನೀಡಿದ್ದರು.

ರಾಯಪುರ ಪೊಲೀಸರು ಆರೋಪಿ ಪತಿ ವಿರುದ್ಧ ಐಪಿಸಿ ಸೆಕ್ಷನ್ 498ಎ(ಪತಿ ಕುಟುಂಬದಿಂದ ದೌರ್ಜನ್ಯ), 377(ಅಸ್ವಾಭಾವಿಕ ಲೈಂಗಿಕತೆ) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ-2000ದ ಸೆಕ್ಷನ್ 66ಇ, 67 ಅಡಿ ಎಫ್‍ಐಆರ್ ದಾಖಲಿಸಿ ಬೆಂಗಳೂರು ಪೆÇಲೀಸರಿಗೆ ಪ್ರಕರಣವನ್ನು ವರ್ಗಾವಣೆ ಮಾಡಿದ್ದರು. 

ವಿವೇಕನಗರ ಠಾಣೆ ಪೊಲೀಸರು ತನಿಖೆ ನಡೆಸಿ 498ಎ ಅಡಿ ಮಾತ್ರ ವಿಚಾರಣಾ ನ್ಯಾಯಾಲಯಕ್ಕೆ ದೋμÁರೋಪಪಟ್ಟಿ ಸಲ್ಲಿಸಿದ್ದರು. ದೋಷಾರೋಪಣೆ ಸಲ್ಲಿಸಿದ ನಂತರ ಪ್ರಕರಣ ರದ್ದು ಕೋರಿ ಪತಿ ಅರ್ಜಿ ಸಲ್ಲಿಸಿದ್ದರು. ಆದರೆ, ತನ್ನ ದೂರಿನ ಅನ್ವಯ ಪೆÇಲೀಸರು ತನಿಖೆ ನಡೆಸಿಲ್ಲ ಎಂದು ಪತ್ನಿ ಆರೋಪಿಸಿದ್ದರು. ಜತೆಗೆ ತನ್ನ ದೂರಿನ ಅನ್ವಯ ತನಿಖೆ ನಡೆಸುವಂತೆ ಪೆÇಲೀಸರಿಗೆ ನಿರ್ದೇಶನ ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. 

ಎರಡೂ ಅರ್ಜಿಗಳನ್ನು ವಿಚಾರಣೆ ನಡೆಸಿದ ಪೀಠ, ದೂರಿನಲ್ಲಿರುವ ವಿವರಗಳು ಮತ್ತು ಪೊಲೀಸರು ದಾಖಲಿಸಿರುವ ವಿಷಯಗಳನ್ನು ತನಿಖಾಧಿಕಾರಿಗಳು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ. 

ತನಿಖೆ ವೇಳೆ ವಶಪಡಿಸಿಕೊಂಡು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾದ ಆಕೆಯ ತಂದೆಯ ಮೊಬೈಲ್ನ್‍ ಪೋನ್ ಲ್ಲಿರುವ ವಿಷಯಗಳ ಬಗ್ಗೆ ಚಾರ್ಜ್‍ಶೀಟ್‍ನಲ್ಲಿ ಯಾವುದೇ ಉಲ್ಲೇಖವಿಲ್ಲ. ಅಲ್ಲದೆ, ಈ ತನಿಖೆ ನಿರ್ಲಕ್ಷ್ಯದ ತನಿಖೆ ಎಂದು ಅಭಿಪ್ರಾಯಪಟ್ಟಿರುವ ಪೀಠ, ಎರಡು ತಿಂಗಳಲ್ಲಿ ಪೊಲೀಸರು ಸೂಕ್ತ ತನಿಖೆ ನಡೆಸಿ ಹೆಚ್ಚುವರಿ ದೋಷಾರೋಪಣೆ ಸಲ್ಲಿಸಬೇಕು. ಅಲ್ಲಿವರೆಗೂ ವಿಚಾರಣಾ ನ್ಯಾಯಾಲಯ ವಿಚಾರಣೆ ಮುಂದುವರೆಸಬಾರದು ಎಂದು ಆದೇಶಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X