ಮಂಗಳೂರು; ಮುಂದುವರಿದ ಹಿಜಾಬ್ ವಿವಾದ: ವಿದ್ಯಾರ್ಥಿನಿಯರು ಗೈರು
ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಿನಲ್ಲಿ ಕಳೆದೊಂದು ವಾರದಿಂದ ಕಾಣಿಸಿಕೊಂಡಿರುವ ಹಿಜಾಬ್ ವಿವಾದ ಮುಂದುವರಿದಿದ್ದು, ಬುಧವಾರವೂ ೧೦ಕ್ಕೂ ಅಧಿಕ ವಿದ್ಯಾರ್ಥಿನಿಯರು ತರಗತಿಗೆ ಗೈರಾಗಿದ್ದರು ಎಂದು ತಿಳಿದು ಬಂದಿದೆ.
ಹಿಜಾಬ್ ಧರಿಸುವ ವಿದ್ಯಾರ್ಥಿನಿಯರು ಸೋಮವಾರ ದ.ಕ. ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಹಿಜಾಬ್ ಧರಿಸಿ ತರಗತಿಗೆ ಪ್ರವೇಶಿಸಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದರು. ಆವಾಗ ಜಿಲ್ಲಾಧಿಕಾರಿ ಮಂಗಳೂರು ವಿವಿಯ ಸಿಂಡಿಕೇಟ್ ಸಭೆಯ ತೀರ್ಮಾನವನ್ನು ಪಾಲಿಸುವಂತೆ ಸೂಚಿಸಿದ್ದರು. ಆದಾಗ್ಯೂ ವಿದ್ಯಾರ್ಥಿನಿಯರು ಕಳೆದ ಎರಡು ದಿನದಿಂದ ಕಾಲೇಜಿಗೆ ಆಗಮಿಸಿಲ್ಲ ಎನ್ನಲಾಗಿದೆ.
Next Story





