ಇಡಿಯಿಂದ ಪಿಎಫ್ಐ ಬ್ಯಾಂಕ್ ಖಾತೆಗಳ ಮುಟ್ಟುಗೋಲು

ಹೊಸದಿಲ್ಲಿ, ಜೂ. 1: ಅಕ್ರಮ ಹಣ ವರ್ಗಾವಣೆ ಪ್ರಕರಣಗಳ ತನಿಖೆಯ ಭಾಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮತ್ತು ಅದರೊಂದಿಗೆ ನಂಟು ಹೊಂದಿರುವ ರೆಹಾಬ್ ಇಂಡಿಯಾ ಫೌಂಡೇಶನ್ ಎಂಬ ಸಂಸ್ಥೆಗೆ ಸೇರಿದ ಕನಿಷ್ಠ 33 ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿದೆ.
ಈ ಖಾತೆಗಳಲ್ಲಿ 68 ಲಕ್ಷ ರೂ.ಗಿಂತಲೂ ಅಧಿಕ ಹಣವಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಮ್ಎಲ್ಎ)ಯಡಿ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕುವ ಆದೇಶಗಳನ್ನು ಹೊರಡಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದರು.ಪಿಎಫ್ಐ ದಿಲ್ಲಿಯಲ್ಲಿ ಪ್ರಧಾನ ಕಚೇರಿ ಹೊಂದಿದೆ. ರಿಹಾಬ್ ಇಂಡಿಯಾ ಫೌಂಡೇಶನ್ ಮೂಲಕ ಸಾಮಾಜಿಕ ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ.
Next Story





