ಕಲಬುರಗಿ | ಮದುವೆ ದಿಬ್ಬಣದ ಬಸ್ ಪಲ್ಟಿ: ಇಬ್ಬರು ಮೃತ್ಯು, 15ಕ್ಕೂ ಹೆಚ್ಚು ಜನರಿಗೆ ಗಾಯ

ಸಾಂದರ್ಭಿಕ ಚಿತ್ರ
ಕಲಬುರಗಿ : ಮದುವೆ ದಿಬ್ಬಣದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಇಲ್ಲಿನ ತಾಲೂಕಿನ ಕಡಣಿ ಗ್ರಾಮದ ತಾಂಡಾಬಳಿ ನಡೆದಿದೆ.
ಹಾವನೂರ್ ಗ್ರಾಮದ ನಿವಾಸಿಗಳಾದ ಶಿವಕುಮಾರ್ ಹಾಗೂ ಇನ್ನೋರ್ವ ಮಹಿಳೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಆಳಂದ ತಾಲೂಕಿನ ರುದ್ರವಾಡಿ ಗ್ರಾಮದಲ್ಲಿ ಮದುವೆ ಮುಗಿಸಿಕೊಂಡು ವಾಪಸಾಗುವಾಗ ದುರ್ಘಟನೆ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಬಸ್ ಉರುಳಿದ್ದು ಐದು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಅವರೆಲ್ಲರಿಗೂ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬಸ್ಲ್ಲಿದ್ದ ಮಹಿಳೆಯರು, ಮಕ್ಕಳು ಸೇರಿ 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದ್ದುಬಂದಿದ್ದು, ಎಲ್ಲರನ್ನೂ ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಕಲಬುರಗಿ ಸಂಚಾರಿ ಒನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





