Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಜೆಪಿಯವರ 'ಕೇಂದ್ರ ಸರಕಾರದ ಕೊಡುಗೆ'...

ಬಿಜೆಪಿಯವರ 'ಕೇಂದ್ರ ಸರಕಾರದ ಕೊಡುಗೆ' ಜಾಹೀರಾತು ರಾಜ್ಯಕ್ಕೆ ಅವಮಾನ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ2 Jun 2022 11:44 AM IST
share
ಬಿಜೆಪಿಯವರ ಕೇಂದ್ರ ಸರಕಾರದ ಕೊಡುಗೆ ಜಾಹೀರಾತು ರಾಜ್ಯಕ್ಕೆ ಅವಮಾನ: ಸಿದ್ದರಾಮಯ್ಯ

ಬೆಂಗಳೂರು, ಜೂ.2: ಕೇಂದ್ರ ಸರಕಾರ ರಾಜ್ಯಕ್ಕೆ 'ಕೊಡುಗೆ' ನೀಡಿದೆ ಎಂದು ಬಿಜೆಪಿಯವರು ನೀಡುತ್ತಿರುವ ಜಾಹೀರಾತು ರಾಜ್ಯದ ಜನತೆಗೆ ಮಾಡುತ್ತಿರುವ ಅವಮಾನ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಕೊಡುಗೆ ಎಂಬ ಪದ ಬಳಸಿ ಜಾಹೀರಾತು ನೀಡುತ್ತಿರುವುದು ಸರಿಯಲ್ಲ ಎಂದಿದ್ದಾರೆ.

ಸಿದ್ದರಾಮಯ್ಯರ ಪತ್ರಿಕಾ ಹೇಳಿಕೆಯ ಪೂರ್ಣ ವಿವರ ಹೀಗಿದೆ.

ರಾಜ್ಯ ಮತ್ತು ಕೇಂದ್ರದ ಬಿಜೆಪಿಯವರು ನಮ್ಮ ರಾಜ್ಯದ ಜನರನ್ನೇನು ದಡ್ಡರು, ಯೋಚಿಸುವ ಶಕ್ತಿ ಇಲ್ಲದವರು  ಎಂದುಕೊಂಡಿದ್ದಾರಾ? ಈ ಬಿಜೆಪಿಯವರಿಗೆ ತಲೆ ಸರಿ ಇದೆಯಾ? 2014ರಿಂದ ಇದುವರೆಗೆ 8 ವರ್ಷಗಳಲ್ಲಿ ರಾಜ್ಯಕ್ಕೆ 1,29 ಲಕ್ಷ ಕೋಟಿ ರೂಗಳನ್ನು ನರೇಂದ್ರ ಮೋದಿಯವರು “ಕೊಡುಗೆ”ನೀಡಿದ್ದಾರೆ ಎಂದು ಪ್ರತಿ ನಿತ್ಯ ಜಾಹೀರಾತು ನೀಡಲಾಗುತ್ತಿದೆ. ಕೊಡುಗೆ ಎಂಬ ಪದ ಬಳಸಲು ಮೋದಿಯವರೋ ಇಲ್ಲ ಬಿಜೆಪಿಯವರೊ ಅವರ ಸ್ವಂತ ಮನೆಯಿಂದ ತೆಗೆದು ಖುಷಿಗೆ ಗಿಫ್ಟು ಕೊಡುವಂತೆ ಏನಾದರೂ ರಾಜ್ಯಕ್ಕೆ ಕೊಟ್ಟಿದ್ದಾರಾ?

ರಾಜ್ಯದ ಬಿಜೆಪಿ ಸರಕಾರಕ್ಕೆ ಏನಾದರೂ ಬೆನ್ನು ಮೂಳೆ ಇದ್ದರೆ ಮೊದಲು ಈ ಜಾಹೀರಾತಿಗೆ ವಿರೋಧ ವ್ಯಕ್ತಪಡಿಸಬೇಕಾಗಿತ್ತು. ಯಾಕೆಂದರೆ ಕಳೆದ 8 ವರ್ಷಗಳಲ್ಲಿ ಮೋದಿಯವರ ರಾಜ್ಯ ವಿರೋಧಿ ಧೋರಣೆಯಿಂದ ನಾವು ಬಹಳಷ್ಟನ್ನು ಕಳೆದುಕೊಂಡಿದ್ದೇವೆ. ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಈ 8 ವರ್ಷಗಳಲ್ಲಿ  ನಮ್ಮ ರಾಜ್ಯದಿಂದ ಕನಿಷ್ಠ ಎಂದರೂ 19 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ. ಒಂದರ್ಥದಲ್ಲಿ ದೋಚಿಕೊಂಡಿದೆ ಎಂದರೂ ಸರಿಯೆ. ಇಷ್ಟು ದೊಡ್ಡ ಮೊತ್ತವನ್ನು ಸಂಗ್ರಹಿಸಿ ಟಿಪ್ಸ್ ಕೊಟ್ಟಂತೆ ಕೆಲವು ಯೋಜನೆಗಳಿಗೆ ಕೊಟ್ಟಿರುವ 1.29 ಲಕ್ಷ ಕೋಟಿ ಅನುದಾನಗಳನ್ನು ಕೊಡುಗೆ ಎಂದು ಹೇಳಿ ರಾಜ್ಯದ ಸ್ವಾಭಿಮಾನವನ್ನು ದಿಲ್ಲಿಯ ಕಾಲ ಕೆಳಗೆ ಹಾಕಿರುವ ರಾಜ್ಯ ಬಿಜೆಪಿಗರಿಗೆ ಸ್ವಾಭಿಮಾನ ಎಂಬುದು ಏನಾದರೂ ಇದೆಯೆ? ಎಂಬ ಪ್ರಶ್ನೆಯನ್ನು ಈ ನಾಡಿನ ಪ್ರಜ್ಞಾವಂತರು ಕೇಳುತ್ತಿದ್ದಾರೆ.

ಇದರಲ್ಲಿ ನರೇಗ ಯೋಜನೆಯಲ್ಲಿ ಜನರು ಕೂಲಿ ಮಾಡಿದ ಹಣ 27418 ಕೋಟಿಗಳಷ್ಟಿದೆ. ಹಾಗೆಯೇ ಜನರ ವಿಮೆ ಹಣ ಮುಂತಾದವುಗಳೆಲ್ಲ ಈ ಕೊಡುಗೆಯಲ್ಲಿ ಸೇರಿವೆ. ನರೇಗಾ ಮುಂತಾದ ಯೋಜನೆಗಳಲ್ಲಿ ಜನರ ಬೆವರಿಗೆ ಕೊಡುವ ಪ್ರತಿಫಲವನ್ನು ಈ ಬಿಜೆಪಿಯವರು ಕೊಡುಗೆ ಎನ್ನುತ್ತಾರಲ್ಲ, ಇವರು ಮನುಷ್ಯರಾ ಎಂಬುದು ನನ್ನ ಅನುಮಾನ.

ಕರ್ನಾಟಕವು ದೇಶದ ಆರ್ಥಿಕತೆಗೆ ಅತಿದೊಡ್ಡ ಕೊಡುಗೆ ನೀಡುತ್ತಿರುವ ಎರಡನೇ ರಾಜ್ಯ. ಮಹಾರಾಷ್ಟ್ರದ ನಂತರ ಅತಿ ಹೆಚ್ಚು ಜಿಎಸ್‍ಟಿ ಪಾವತಿಸುತ್ತಿರುವ ರಾಜ್ಯ ನಮ್ಮದು. ಆದಾಯ ತೆರಿಗೆ, ಕಾರ್ಪೊರೇಟ್ ತೆರಿಗೆಯ ಪಾವತಿಯಲ್ಲೂ ಸಹ ನಮ್ಮ ರಾಜ್ಯವು ನಿರಂತರವಾಗಿ ಎರಡು ಅಥವಾ ಮೂರನೆ ಸ್ಥಾನದಲ್ಲಿದೆ. ನನ್ನ ಬಳಿ ಆದಾಯ ತೆರಿಗೆ ಇಲಾಖೆಯ 2018-19ರ ಅಧಿಕೃತ ದಾಖಲೆ ಇದೆ. ಅದರ ಪ್ರಕಾರ ಮಹಾರಾಷ್ಟ್ರ ರಾಜ್ಯವು 4.25 ಲಕ್ಷ ಕೋಟಿ ರೂಗಳಷ್ಟನ್ನು ನೇರ ತೆರಿಗೆಯ ರೂಪದಲ್ಲಿ ಪಾವತಿಸುತ್ತಿದೆ. ದಿಲ್ಲಿಯು 1.66 ಲಕ್ಷ ಕೋಟಿಗಳನ್ನು ಪಾವತಿಸಿತ್ತು. ನಮ್ಮ ರಾಜ್ಯದಿಂದ 1.20 ಲಕ್ಷ ಕೋಟಿಗಳನ್ನು ಕೇಂದ್ರವು ನೇರ ತೆರಿಗೆಯ ಮೂಲಕ ಸಂಗ್ರಹಿಸಿತ್ತು. ಪ್ರಸಕ್ತ ಕರ್ನಾಟಕವು 1.40 ಲಕ್ಷ ಕೋಟಿಗಳಷ್ಟು ನೇರ ತೆರಿಗೆಯನ್ನು [ಆದಾಯ ಮತ್ತು ಕಾರ್ಪೊರೇಟ್ ತೆರಿಗೆ] ಯನ್ನು ಪಾವತಿಸುತ್ತಿದೆ. ಉಳಿದಂತೆ ಗುಜರಾತ್ ಮಾಡೆಲ್ ಎಂದು ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿಯವರ ರಾಜ್ಯವಾದ ಗುಜರಾತ್ 2018-19ರಲ್ಲಿ ಪಾವತಿಸಿದ್ದು ಕೇವಲ 49 ಸಾವಿರ ಕೋಟಿ ಮಾತ್ರ. ಆಂಧ್ರ ಪ್ರದೇಶ 46 ಸಾವಿರ ಕೋಟಿ, ಮಧ್ಯಪ್ರದೇಶ 19.7 ಸಾವಿರ ಕೋಟಿ, ಬಿಹಾರ 6.2 ಸಾವಿರ ಕೋಟಿ, ರಾಜಸ್ತಾನ 21 ಸಾವಿರ ಕೋಟಿ, ಉತ್ತರ ಪ್ರದೇಶ 27 ಸಾವಿರ ಕೋಟಿ ಮಾತ್ರ. ತಮಿಳುನಾಡು 74.3 ಸಾವಿರ ಕೋಟಿ ಪಾವತಿಸಿತ್ತು.

2018-19 ರ ಮಾಹಿತಿಯ ಪ್ರಕಾರ ದೇಶದ ಬೊಕ್ಕಸಕ್ಕೆ ನೇರ ತೆರಿಗೆಯ ಮೂಲಕ 11.37 ಲಕ್ಷ ಕೋಟಿ ರೂ ತೆರಿಗೆ ಸಂದಾಯವಾಗಿದ್ದರೆ  ಮಹಾರಾಷ್ಟ್ರವೂ ಸೇರಿದಂತೆ ದಕ್ಷಿಣದ ಆರು ರಾಜ್ಯಗಳು ದೇಶದ ಬೊಕ್ಕಸಕ್ಕೆ 6.96 ಲಕ್ಷ ಕೋಟಿ ರೂ.ಗಳನ್ನು ಪಾವತಿಸಿದ್ದವು. ಇದು ಒಟ್ಟು ನೇರ ತೆರಿಗೆಯಲ್ಲಿ ಶೇ.62 ರಷ್ಟಾಗುತ್ತದೆ. ಜಿ.ಎಸ್.ಟಿ.ಯಲ್ಲಿ 2022ರ ಎಪ್ರಿಲ್ ತಿಂಗಳ ಉದಾಹರಣೆಯೊಂದನ್ನೆ ತೆಗೆದುಕೊಂಡರೆ ಮಹಾರಾಷ್ಟ್ರ ರೂ.27.5 ಸಾವಿರ ಕೋಟಿ, ಕರ್ನಾಟಕ ರೂ.11.82 ಸಾವಿರ ಕೋಟಿ, ಉತ್ತರ ಪ್ರದೇಶ ರೂ.8.5 ಸಾವಿರ ಕೋಟಿ, ರಾಜಸ್ತಾನ ರೂ.4.5 ಸಾವಿರ ಕೋಟಿ, ಮಧ್ಯಪ್ರದೇಶ ರೂ.3.3 ಸಾವಿರ ಕೋಟಿ, ಬಿಹಾರ ರೂ.1.4 ಸಾವಿರ ಕೋಟಿ, ಆಂಧ್ರ ಮತ್ತು ತೆಲಂಗಾಣಗಳೆರಡು ರೂ.9.00 ಸಾವಿರ ಕೋಟಿ ಮಾತ್ರ ಪಾವತಿಸಿವೆ. ಈ ವಿಚಾರದಲ್ಲೂ ಸರಿಸುಮಾರು ಶೇ.50ರಷ್ಟು ತೆರಿಗೆಯನ್ನು ದಕ್ಷಿಣದ ರಾಜ್ಯಗಳು 6 ರಾಜ್ಯಗಳು ಪಾವತಿಸುತ್ತಿವೆ.

ಕಳೆದ 8 ವರ್ಷಗಳಿಂದ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರವು ಕರ್ನಾಟಕ ರಾಜ್ಯವೊಂದರಿಂದಲೆ ಸುಮಾರು ರೂ.19 ಲಕ್ಷ ಕೋಟಿಗಳನ್ನು ನೇರ ಮತ್ತು ಪರೋಕ್ಷ ತೆರಿಗೆಗಳ ರೂಪದಲ್ಲಿ ಕೇಂದ್ರ ಸರಕಾರವು ಸಂಗ್ರಹಿಸಿದೆ. ಕಳೆದ ವರ್ಷ ಕೋವಿಡ್ ಸಂದರ್ಭದಲ್ಲೂ ಕೂಡಾ ಸುಮಾರು ರೂ.3 ಲಕ್ಷ ಕೋಟಿಗಳನ್ನು ಕೇಂದ್ರ ಸರ್ಕಾರ ನಮ್ಮ ರಾಜ್ಯದಿಂದ ಸಂಗ್ರಹಿಸಿದೆ. ಮನಮೋಹನಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ನಮ್ಮ ರಾಜ್ಯದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯಿಂದ 2012 ಮತ್ತು 2013ರ ಸಾಲಿನಲ್ಲಿ ಮೂರೂವರೆ ಸಾವಿರ ಕೋಟಿಗಳನ್ನು ಮಾತ್ರ ಸಂಗ್ರಹಿಸಿದ್ದರು. ಮೋದಿ ಪ್ರಧಾನಿಗಳಾದ ಮೇಲೆ ನಮ್ಮ ರಾಜ್ಯದಿಂದ ವರ್ಷಕ್ಕೆ 35,000ಗಳಿಂದ 40,000 ಕೋಟಿ ರೂ.ಗಳನ್ನು ಸಂಗ್ರಹಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಬಾಬ್ತಿನಿಂದಲೇ ಮೋದಿಯವರ ಸರಕಾರ ಕರ್ನಾಟಕ ರಾಜ್ಯದಿಂದ ಕನಿಷ್ಠವೆಂದರೂ 1,50,000 ಕೋಟಿ ರೂ.ಗಳನ್ನು ದೋಚಿಕೊಂಡಿದೆ.

ಇಷ್ಟಾದರೂ ರಾಜ್ಯ, ಕೇಂದ್ರ ಬಿಜೆಪಿ ಸರ್ಕಾರಗಳು ಬಿಡುಗಡೆ ಮಾಡಿರುವ ಜಾಹೀರಾತಿನಲ್ಲಿ 2014ರಿಂದ 2022ರವರೆಗೆ ರೂ.1,29,776 ಕೋಟಿ ರೂಗಳನ್ನು ಕೇಂದ್ರದ ವಿವಿಧ ಯೋಜನೆಗಳಿಗಾಗಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದು ರಾಜ್ಯವು ಪಾವತಿಸಿದ ಒಟ್ಟು ತೆರಿಗೆಯಲ್ಲಿ ಶೇ.6.8ರಷ್ಟು ಮಾತ್ರ ನಮ್ಮ ರಾಜ್ಯದಲ್ಲಿ ಖರ್ಚು ಮಾಡಿದ್ದಾರೆ ಎಂದು ಅರ್ಥ.

ಇದರ ನಂತರ ರೂ.2,14,603/ ಕೋಟಿಗಳನ್ನು ತೆರಿಗೆ ಪಾಲಿನ ರೂಪದಲ್ಲಿ ಹಂಚಿಕೆ ಮಾಡಿದ್ದಾರೆ. ಇದು ರಾಜ್ಯದಿಂದ ಸಂಗ್ರಹಿಸಿದ ತೆರಿಗೆಯಲ್ಲಿ ಶೇ.11.29 ರಷ್ಟು ಮಾತ್ರ.

ಈ ರೂ.19 ಲಕ್ಷ ಕೋಟಿಗಳಲ್ಲಿ ತೆರಿಗೆ ಹಂಚಿಕೆ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಹಾಗೂ ಇತರೆ ಯೋಜನಾ ಆಯೋಗದ ಅನುದಾನಗಳ ರೂಪದಲ್ಲಿ (ಕೇಂದ್ರ ಇಲಾಖೆಗಳು ತೆಗೆದುಕೊಳ್ಳುವ ಕಾಮಗಾರಿಗಳು, ಕಾರ್ಯಕ್ರಮಗಳನ್ನು ಹೊರತುಪಡಿಸಿ) ನಮಗೆ ಬರಬೇಕಾಗಿದ್ದ ಅನುದಾನ ಶೇ.42ರ ಅನುಪಾತದಲ್ಲಿ ರೂ.8 ಲಕ್ಷ ಕೋಟಿ ರೂಗಳಷ್ಟಾಗಬೇಕು. ಇದಲ್ಲದೆ, ರಾಜ್ಯಗಳಿಗೆ ಹಂಚಿಕೆ ಮಾಡಿದ ನಂತರ ಕೇಂದ್ರವೆ ತನ್ನ ಬಳಿ ಉಳಿಸಿಕೊಳ್ಳುವ ಶೇ.58ಕ್ಕೂ ಹೆಚ್ಚಿನ ಅನುದಾನವಿದೆಯಲ್ಲ, ಅದರಲ್ಲಿ ಅದರ ಇಲಾಖೆಗಳ ಮೂಲಕ ರಾಜ್ಯಕ್ಕೆ ಬೇರೆ ಬೇರೆ ಯೋಜನೆಗಳಿಗಳಿಗಾಗಿ ಬಿಡುಗಡೆ ಮಾಡಿದ್ದೆ ಈ 1.29 ಲಕ್ಷ ಕೋಟಿ. ಇದನ್ನೆ ಅವರು ಜಾಹೀರಾತಿನಲ್ಲಿ ಹೇಳಿಕೊಳ್ಳುತ್ತಿರುವುದು. ರಾಜ್ಯದ ಮೇಲಿನ ಬಿಜೆಪಿಯವರ ಕ್ರೌರ್ಯವನ್ನು ಯಾವ ಮಾತುಗಳಲ್ಲಿ ವಿವರಿಸಬೇಕು ಹೇಳಿ.

ಜಿಎಸ್‍ಟಿಯಂಥ ಅಪಕ್ವ ಯೋಜನೆಯನ್ನು ಅನುಷ್ಠಾನ ಮಾಡುವುದಕ್ಕೆ ಮೊದಲು ನಮ್ಮ ರಾಜ್ಯದ ತೆರಿಗೆ ಸಂಗ್ರಹದ ಪ್ರಮಾಣ ಶೇ.14 ರಿಂದ ಶೇ.15ರಷ್ಟಿತ್ತು.

2015-16 ರಲ್ಲಿ ನಮ್ಮ ಒಟ್ಟು ತೆರಿಗೆ ಸಂಗ್ರಹ ರೂ.1,18,817 ಕೋಟಿಗಳಷ್ಟಿತ್ತು. ಇದು ಶೇ.14 ರ ಪ್ರಮಾಣದಲ್ಲಿ ಬೆಳವಣಿಗೆಯಾಗಿದ್ದರೆ ಈ ವರ್ಷ ನಮ್ಮ ತೆರಿಗೆ ಸಂಗ್ರಹದ ಪ್ರಮಾಣ ರೂ.297,315 ಕೋಟಿಗಳಷ್ಟಿರಬೇಕಿತ್ತು. ಆದರೆ ಈ ವರ್ಷ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ರೂ.1,89,887 ಕೋಟಿಗಳಷ್ಟು ತೆರಿಗೆ ಸಂಗ್ರಹವಾಗಬಹುದು ಎಂದು ಅಂದಾಜಿಸಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರದ ಅಡ್ಡ ಕಸುಬಿ ಆರ್ಥಿಕ ನೀತಿಗಳಿಂದಾಗಿ ರಾಜ್ಯವು ಈ 8 ವರ್ಷಗಳಲ್ಲಿ ಕಳೆದುಕೊಂಡದ್ದು ರೂ.2,96,000 ಕೋಟಿ ರೂ.ಗಳಷ್ಟು. ಕಳೆದ 8 ವರ್ಷಗಳ ಸರಾಸರಿ ತೆರಿಗೆ ಸಂಗ್ರಹ ಪ್ರಮಾಣ ಶೇ.6ರಷ್ಟು ಮಾತ್ರ ಇದೆ. ಇದರಿಂದಾಗಿ ರಾಜ್ಯದ ಆರ್ಥಿಕತೆ ಸಂಕಷ್ಟದ ಸುಳಿಗೆ ಸಿಲುಕಿ ಸಾಲಗಾರ ರಾಜ್ಯವಾಗುತ್ತಿದೆ. ಇದರ ಜೊತೆಗೆ ಬಿಜೆಪಿಯವರ 40 ಪರ್ಸೆಂಟ್ ಕಮಿಷನ್‍ನಿಂದಾಗಿ ರಾಜ್ಯ ದಿವಾಳಿಯಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X