Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಆರೆಸ್ಸೆಸ್ ಬೆಂಬಲಿತ ವನವಾಸಿ ಕಲ್ಯಾಣ...

ಆರೆಸ್ಸೆಸ್ ಬೆಂಬಲಿತ ವನವಾಸಿ ಕಲ್ಯಾಣ ಸಂಸ್ಥೆಗೆ ಜಮೀನು ಮಂಜೂರಾತಿಗೆ ಸರಕಾರಕ್ಕೆ ಪ್ರಸ್ತಾವ

ಆರ್ಥಿಕ ಇಲಾಖೆಯ ವಿರೋಧ

ಜಿ.ಮಹಾಂತೇಶ್ಜಿ.ಮಹಾಂತೇಶ್2 Jun 2022 11:49 AM IST
share
ಆರೆಸ್ಸೆಸ್ ಬೆಂಬಲಿತ ವನವಾಸಿ ಕಲ್ಯಾಣ ಸಂಸ್ಥೆಗೆ ಜಮೀನು ಮಂಜೂರಾತಿಗೆ ಸರಕಾರಕ್ಕೆ ಪ್ರಸ್ತಾವ

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್)ದ ಬೆಂಬಲದೊಂದಿಗೆ ಮತ್ತು ಸಂಘ ಪರಿವಾರದ ಸಂಘಟನೆಯಾಗಿರುವ ವನವಾಸಿ ಕಲ್ಯಾಣ ಸಂಸ್ಥೆಯು ಜಮೀನು ಮಂಜೂರು ಮಾಡಿಸಿಕೊಳ್ಳಲು ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ಕಂದಾಯ ಇಲಾಖೆ ಮೂಲಕ ವನವಾಸಿ ಕಲ್ಯಾಣ ಸಂಸ್ಥೆಯು ಜಮೀನು ಮಂಜೂರಾತಿಗಾಗಿ ಪ್ರಸ್ತಾವ ಸಲ್ಲಿಸಿರುವ ಪ್ರಸ್ತಾವವನ್ನು ಆರ್ಥಿಕ ಇಲಾಖೆಯು ಈಗಾಗಲೇ ತಿರಸ್ಕರಿಸಿದ್ದರೂ ಸರಕಾರದ ಮೇಲೆ ಒತ್ತಡ ಹೇರಲಾರಂಭಿಸಿದೆ.

ರಾಷ್ಟ್ರೋತ್ಥಾನ ಪರಿಷತ್‌ಗೆ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಹುರಳಿಚಿಕ್ಕನಹಳ್ಳಿ ಗ್ರಾಮದಲ್ಲಿ 9 ಎಕರೆ ಗೋಮಾಳವನ್ನು ಕಾನೂನು ಇಲಾಖೆಯ ಆಕ್ಷೇಪದ ನಡುವೆಯೂ ಮಂಜೂರು ಮಾಡಿರುವ ಬೆನ್ನಲ್ಲೇ ವನವಾಸಿ ಕಲ್ಯಾಣ ಸಂಸ್ಥೆಯು ಜಮೀನು ಮಂಜೂರು ಮಾಡಿಸಿಕೊಳ್ಳಲು ಸಲ್ಲಿಸಿರುವ ಪ್ರಸ್ತಾವ ಮುನ್ನೆಲೆಗೆ ಬಂದಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಗ್ರಾಮದಲ್ಲಿರುವ 1 ಎಕರೆ ವಿಸ್ತೀರ್ಣದ ಜಮೀನನ್ನು ಮಂಜೂರು ಮಾಡಿಕೊಡಲು ಕೆಲ ದಿನಗಳ ಹಿಂದೆಯಷ್ಟೇ ವನವಾಸಿ ಕಲ್ಯಾಣ ಸಂಸ್ಥೆಯು ಕಂದಾಯ ಇಲಾಖೆಗೆ ಪ್ರಸ್ತಾವ ವನ್ನು (ಕಡತ ಸಂಖ್ಯೆ; ಆರ್‌ಡಿ 10 ಎಲ್‌ಜಿಎನ್) ಸಲ್ಲಿಸಿದೆ. ಈ ಪ್ರಸ್ತಾವ ಕುರಿತು ಆರ್ಥಿಕ ಇಲಾಖೆಯ ಅಭಿಪ್ರಾಯಕ್ಕಾಗಿ ಸಲ್ಲಿಕೆಯಾಗಿತ್ತು. ಆದರೆ ಆರ್ಥಿಕ ಇಲಾಖೆಯು ಈ ಪ್ರಸ್ತಾವವನ್ನು ತಿರಸ್ಕರಿಸಿದೆ ಎಂದು ತಿಳಿದು ಬಂದಿದೆ. ಈ ಕುರಿತು 2022ರ ಮೇ 6ರಂದು ಆರ್ಥಿಕ ಇಲಾಖೆಯು ತನ್ನ ಅಭಿಪ್ರಾಯ ವನ್ನು ಕಂದಾಯ ಇಲಾಖೆಗೆ ಕಳಿಸಿದೆ. ‘ಆಡಳಿತ ಇಲಾಖೆಯ ಪ್ರಸ್ತಾವವನ್ನು ಪರಿಶೀಲಿಸಲಾಗಿದೆ. ಪ್ರಸ್ತಾವಕ್ಕೆ ಸಂಬಂಧಿಸಿದಂತೆ, ವನವಾಸಿ ಕಲ್ಯಾಣ ಸಂಸ್ಥೆಯು ಖಾಸಗಿ ಸಂಸ್ಥೆಯಾಗಿರುವುದರಿಂದ ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969ರ ನಿಯಮ 22ಎ(2)ರ ಅನ್ವಯ ಖಾಸಗಿ ಸಂಸ್ಥೆ ಗಳಿಗೆ ನಗರ ಪೌರ ಸರಹದ್ದಿನೊಳಗಿರುವ ಜಮೀನನ್ನು ಮಂಜೂರು ಮಾಡಲು ಅವಕಾಶವಿಲ್ಲ. ಹೀಗಾಗಿ ಈ ಪ್ರಸ್ತಾವಕ್ಕೆ ಆರ್ಥಿಕ ಸಹಮತಿಯಿಲ್ಲ’ ಎಂದು ಕಂದಾಯ ಇಲಾಖೆಗೆ ತನ್ನ ಅಭಿಪ್ರಾಯವನ್ನು ತಿಳಿಸಿದೆ.

ವನವಾಸಿ ಕಲ್ಯಾಣ ಸಂಸ್ಥೆಯ ಹಿನ್ನೆಲೆ

ವನವಾಸಿ ಕಲ್ಯಾಣ ಸಂಸ್ಥೆಯನ್ನು ಆರೆಸ್ಸೆಸ್ ಪರಿವಾರ ಸಂಘಟನೆಯಾದ ಹಿಂದೂ ಸೇವಾ ಪ್ರತಿಷ್ಠಾನದ ಸಂಸ್ಥಾಪಕ ಅಜಿತ್ ಕುಮಾರ್ ಮತ್ತಿತರರು ಸ್ಥಾಪಿಸಿ ದರು. ಸಿದ್ದಿಗಳು ಸೇರಿದಂತೆ ಗಿರಿಜನರ ಕಲ್ಯಾಣಕ್ಕಾಗಿ ಆರಂಭವಾದ ಈ ಸಂಸ್ಥೆಯನ್ನು ಶೃಂಗೇರಿ ಮೂಲದ ಪ್ರಕಾಶ್ ಕಾಮತ್ ಎಂಬುವರು ಮುನ್ನೆಡೆಸಿದರು. ವನವಾಸಿ ಕಲ್ಯಾಣ ಆಶ್ರಮ ಎಂಬ ಸಂಘಟನೆಗೆ ಆರೆಸ್ಸೆಸ್ ಮಾತೃಸಂಸ್ಥೆ. ಆರೆಸ್ಸೆಸ್ ಸಿದ್ಧಾಂತ, ನಿಲುವುಗಳನ್ನು ಜಾರಿ ಮಾಡಲೆಂದೇ ಇರುವ ಹತ್ತಾರು ವಿಭಾಗ ಗಳ ಪೈಕಿ ವನವಾಸಿ ಕಲ್ಯಾಣ ಆಶ್ರಮವೂ ಒಂದು ಎಂದು ಹೇಳಲಾಗುತ್ತಿದೆ.

ಆರೆಸ್ಸೆಸ್‌ನ ಉಳಿದ ವಿಭಾಗಗಳು ತಮ್ಮ ಕಾರ್ಯ ನಿರ್ವಹಣೆಯಲ್ಲೇ ರಾಜಕೀಯ ಕಾರ್ಯಸೂಚಿ ಯನ್ನು ಬಹಿರಂಗಗೊಳಿಸುತ್ತದೆ. ಆದರೆ ವನವಾಸಿ ಕಲ್ಯಾಣ ಆಶ್ರಮವು ಆದಿವಾಸಿಗಳು, ಕಾಡಿನ ನಿವಾಸಿಗಳ ಮಧ್ಯೆ ಕೆಲಸ ಮಾಡುವಾಗ ತನ್ನ ರಾಜಕೀಯ ಸಿದ್ದಾಂತವನ್ನಾಗಲೀ, ಭವಿಷ್ಯದ ಕಾರ್ಯ ಸೂಚಿಯನ್ನಾಗಲೀ ಹೇಳುವುದಿಲ್ಲ. ಬದಲಾಗಿ ಶಿಕ್ಷಣ, ಸಂಸ್ಕಾರ, ಧರ್ಮ, ದೇವರು, ದೇಶ, ಕ್ರೀಡೆಯ ಹೆಸರಿನಲ್ಲಿ ಆದಿವಾಸಿ ವನವಾಸಿಗಳ ಮಧ್ಯೆ ಕೆಲಸ ಮಾಡುತ್ತಾ ಗುಪ್ತ ಅಜೆಂಡಾವನ್ನು ಜಾರಿ ಮಾಡುತ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ.

 ಬುಡಕಟ್ಟು, ವನವಾಸಿಗಳು ಅವರದ್ದೇ ಆದ ಸುಂದರ ಸಂಸ್ಕೃತಿ ಮತ್ತು ದೇವಾರಾಧನೆಯನ್ನು ಹೊಂದಿದ್ದಾರೆ. ಅದನ್ನು ನಿಧಾನಕ್ಕೆ ವೈದಿಕೀಕರಣಗೊಳಿಸುವ ಕೆಲಸವೇ ವನವಾಸಿ ಕಲ್ಯಾಣ ಸಂಸ್ಥೆಯು ಮೊದಲ ಕೆಲಸ. ಕಾಡಿನ ಮನೆಗಳಲ್ಲೂ ಸತ್ಯನಾರಾಯಣ ಪೂಜೆ ಮಾಡಿಸಿ ಆ ಕಾಡಿನ ಬಡ ಮಕ್ಕಳಿಂದಲೂ ದಕ್ಷಿಣೆ ಹಾಕಿಸುವುದೇ ನಾಗರಿಕತೆ ಎಂದು ವನವಾಸಿ ಕಲ್ಯಾಣ ಸಂಸ್ಥೆಯು ಸ್ಥಳೀಯರಲ್ಲಿ ಬಿತ್ತನೆ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವನವಾಸಿ ಕಲ್ಯಾಣ ಆಶ್ರಮ ತುಂಬಾ ಸಕ್ರೀಯವಾಗಿ ಕೆಲಸ ಮಾಡುತ್ತಿದೆ ಎಂದು ಗೊತ್ತಾಗಿದೆ. ಮುಖ್ಯವಾಗಿ ಪಶ್ಚಿಮ ಘಟ್ಟದ ವನವಾಸಿಗಳನ್ನು ಗುರಿಯಾರಿಸಿ ಕೊಂಡು ವನವಾಸಿ ಕಲ್ಯಾಣ ಆಶ್ರವು ಕೆಲಸ ಮಾಡುತ್ತದೆ.

ವನವಾಸಿಗಳ ಮಕ್ಕಳಿಗೆ ಶ್ಲೋಕ, ಬಿಲ್ವಿದ್ದೆ ಹೇಳಿಕೊಡುವ ಮೂಲಕ ಮತ್ತೊಂದು ಅಜ್ಞಾನದ ಕೂಪಕ್ಕೆ ತಳ್ಳುವ ಕೆಲಸವನ್ನು ವನವಾಸಿ ಕಲ್ಯಾಣ ಸಂಸ್ಥೆ ಯಶಸ್ವಿಯಾಗಿ ಮಾಡುತ್ತಿದೆ. ಈ ಮೂಲಕ ಸ್ವಲ್ಪವಾದರೂ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಿ ಹಕ್ಕು ಪಡೆಯುವ ಛಾತಿ ಹೊಂದಿರುವ ಅರಣ್ಯವಾಸಿಗಳನ್ನು ಗುಲಾಮಗಿರಿಗೆ ತಳ್ಳುವ ಕೆಲಸವನ್ನು ಮಾಡಲಾಗುತ್ತಿದೆ ಎಂಬ ಆರೋಪವೂ ಇದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X