ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೋನ ಪಾಸಿಟಿವ್
![ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೋನ ಪಾಸಿಟಿವ್ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೋನ ಪಾಸಿಟಿವ್](https://www.varthabharati.in/sites/default/files/images/articles/2022/06/2/337364-1654156004.jpg)
Photo:PTI
ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೊರೋನ ಸೋಂಕಿಗೆ ಒಳಗಾಗಿದ್ದು ಸ್ವತಃ ಐಸೋಲೇಶನ್ ನಲ್ಲಿದ್ದಾರೆ. ‘ನ್ಯಾಷನಲ್ ಹೆರಾಲ್ಡ್’ ಪ್ರಕರಣದಲ್ಲಿ ವಿಚಾರಣೆಗಾಗಿ ಜೂನ್ 8 ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿದ್ದಾರೆ ಎಂದು ಪಕ್ಷ ಸ್ಪಷ್ಟಪಡಿಸಿದೆ.
"ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ. ಅವರಲ್ಲಿ ಸೌಮ್ಯ ಜ್ವರ ಹಾಗೂ ಕೆಲವು ರೋಗಲಕ್ಷಣಗಳು ಕಾಣಿಸಿಕೊಂಡಿವೆ. ಅವರು ತಮ್ಮನ್ನು ಪ್ರತ್ಯೇಕಿಸಿಕೊಂಡಿದ್ದಾರೆ. ಅವರಿಗೆ ಅಗತ್ಯವಾದ ವೈದ್ಯಕೀಯ ಆರೈಕೆಯನ್ನು ನೀಡಲಾಗಿದೆ. ಅವರು ಜೂನ್ 8ರಂದು ಈಡಿ ಮುಂದೆ ಹಾಜರಾಗಲಿದ್ದಾರೆ’’ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.
Next Story