Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯಾವುದೇ ಕ್ಷಣದಲ್ಲಿ ಚುನಾವಣೆ ಎದುರಾದರೂ...

ಯಾವುದೇ ಕ್ಷಣದಲ್ಲಿ ಚುನಾವಣೆ ಎದುರಾದರೂ ಸಿದ್ಧರಾಗಿರಿ: ಕಾರ್ಯಕರ್ತರಿಗೆ ಸಿದ್ದರಾಮಯ್ಯ ಕರೆ

ಕಾಂಗ್ರಸ್ ನವ ಸಂಕಲ್ಪ ಚಿಂತನಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ2 Jun 2022 2:49 PM IST
share
ಯಾವುದೇ ಕ್ಷಣದಲ್ಲಿ ಚುನಾವಣೆ ಎದುರಾದರೂ ಸಿದ್ಧರಾಗಿರಿ: ಕಾರ್ಯಕರ್ತರಿಗೆ ಸಿದ್ದರಾಮಯ್ಯ ಕರೆ

ಬೆಂಗಳೂರು, ಜೂ.2: 2024ಕ್ಕೆ ಲೋಕಸಭಾ ಚುನಾವಣೆ ಇದೆ, ಕರ್ನಾಟಕದಲ್ಲಿ 2023ರಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡಯಲಿದೆ. ಇವುಗಳ ಜೊತೆಗೆ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಗಳಿಗೆ, ಮಹಾನಗರ ಪಾಲಿಕೆ ಚುನಾವಣೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ನವ ಸಂಕಲ್ಪ ಚಿಂತನಾ ಶಿಬಿರ ಆಯೋಜಿಸಲಾಗಿದೆ. ಪಕ್ಷ ಬೂತ್‌ ಮಟ್ಟದಿಂದ ಕೆಪಿಸಿಸಿ ಮಟ್ಟದ ವರೆಗೆ ಸಂಘಟಿತಗೊಂಡರೆ ಚುನಾವಣೆಗಳ ಗೆಲುವು ಕಷ್ಟದ ಕೆಲಸವಲ್ಲ. ಇಂತಹ ಹಲವು ಚುನಾವಣೆಗಳನ್ನು ಯಶಸ್ವಿಯಾಗಿ ಪಕ್ಷ ಈಗಾಗಲೇ ಎದುರಿಸಿದೆ ಕೂಡಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಿಸಿದ್ದಾರೆ.

ನವ ಸಂಕಲ್ಪ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ಪಕ್ಷವನ್ನು  ಬಲಪಡಿಸಲು ಅನೇಕ ಕ್ರಮಗಳನ್ನು ಎಐಸಿಸಿ ಹಾಗೂ ಕೆಪಿಸಿಸಿ ತೆಗೆದುಕೊಳ್ಳಲು ಆರಂಭ ಮಾಡಿದೆ. ಅದರ ಭಾಗವಾಗಿ ಈ ಸಭೆಯೂ ನಡೆಯುತ್ತಿದೆ. ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಗಳಿಗೆ ಚುನಾವಣೆ ನಡೆಸಬೇಕು ಎಂಬ ಆದೇಶವಾಗಿದೆ. ಸುಪ್ರೀಂ ಕೋರ್ಟ್‌ ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ಸರ್ಕಾರದ ಮೀಸಲಾತಿ ಬಗ್ಗೆ ಒಂದು ತೀರ್ಪನ್ನು ನೀಡಿದೆ. ತೀರ್ಪಿನ ಪ್ರಕಾರ ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡುವಾಗ ಒಂದು ನಂಬಿಕಾರ್ಹ ಮಾಹಿತಿ ಇರಬೇಕು ಮತ್ತು ಮೀಸಲಾತಿ ಪ್ರಮಾಣ 50% ಮೀರಬಾರದು ಎಂದು ಹೇಳಿದೆ. ಇದು 2021 ಏಪ್ರಿಲ್‌ ನಲ್ಲಿ ನೀಡಿದ ತೀರ್ಪಾಗಿದೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಈ ತೀರ್ಪು ಬಂದ ಮೇಲೆ ಯಾವ ಕ್ರಮ ಕೈಗೊಂಡಿಲ್ಲ, ಇತ್ತೀಚೆಗೆ ಭಕ್ತವತ್ಸಲಂ ಅವರ ಸಮಿತಿ ರಚನೆ ಮಾಡಿದೆ, ಆ ಸಮಿತಿ ಇನ್ನು ವರದಿ ನೀಡಿಲ್ಲ. ಹತ್ತು ವಾರದಲ್ಲಿ ಚುನಾವಣೆ ನಡೆಸಬೇಕು ಎಂದು ಕೋರ್ಟ್‌ ಹೇಳಿದೆ. ನಮ್ಮ ಪಕ್ಷವು ಸರ್ವ ಪಕ್ಷ ಸಭೆಯಲ್ಲಿ ಬಹಳ ಸ್ಪಷ್ಟವಾಗಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಇಲ್ಲದೆ ಚುನಾವಣೆ ನಡೆಸಬಾರದು ಎಂದು ಹೇಳಿದೆ. ಹಿಂದುಳಿದ ಜಾತಿಗಳಿಗೆ, ಮಹಿಳೆಯರಿಗೆ ಮೀಸಲಾತಿ ನೀಡಿದ್ದು ರಾಜೀವ್‌ ಗಾಂಧಿ ಅವರು ಸಂವಿಧಾನಕ್ಕೆ 73 ಹಾಗೂ 74ನೇ ತಿದ್ದುಪಡಿ ಮಾಡಿದ ನಂತರ. ಮಹಿಳೆಯರಿಗೆ 50%, ಹಿಂದುಳಿದ ಜಾತಿಗಳಿಗೆ 33% ಮೀಸಲಾತಿ ನೀಡಿದ್ದು. ಇದರಲ್ಲಿ ಅಲ್ಪಸಂಖ್ಯಾತರು ಹಾಗೂ ಇನ್ನಿತರೆ ಜಾತಿಗಳು ಸೇರುತ್ತವೆ. ಕಾಂಗ್ರೆಸ್‌ ಪಕ್ಷ ರಾಜಕೀಯ ಮೀಸಲಾತಿ ನೀಡಿದ್ದು ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು.

ಈಗ ತರಾತುರಿಯಲ್ಲಿ ಸರ್ಕಾರ ಚುನಾವಣೆ ನಡೆಸಬಹುದು. ಯಾಕೆಂದರೆ ಮಧ್ಯಪ್ರದೇಶದಲ್ಲಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಆದ್ದರಿಂದ ನಮ್ಮ ಕಾರ್ಯಕರ್ತರು ತಯಾರಾಗಬೇಕು. ನನಗಿರುವ ಮಾಹಿತಿ ಪ್ರಕಾರ ರಾಜ್ಯ ಸರ್ಕಾರಕ್ಕೆ ಈ ಚುನಾವಣೆಯನ್ನು ನಡೆಸಲಾಗಲೀ ಅಥವಾ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿ ನೀಡಲು ಒಲವಿಲ್ಲ. ಕಾಂಗ್ರೆಸ್‌ ಗೆ ಮಾತ್ರ ಈ ಬದ್ಧತೆ ಇರುವುದು. ಬಿಜೆಪಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ ಎಂದು ಸಿದ್ದರಾಮಯ್ಯ ನುಡಿದರು.

2023ರ ಎಪ್ರಿಲ್‌ - ಮೇ ಯಲ್ಲಿ ವಿಧಾನಸಭಾ ಚುನಾವಣೆ ಬರುತ್ತದೆ, ಈ ಚುನಾವಣೆಯನ್ನು ನಾವು ಗೆಲ್ಲಲೇಬೇಕು. ಇದು ನಮ್ಮ ಮುಂದಿರುವ ಸವಾಲು. ನಾವು ಅಧಿಕಾರಕ್ಕೆ ಬರಬೇಕು ಎನ್ನುವ ಕಾರಣಕ್ಕೆ ಚುನಾವಣೆ ಗೆಲ್ಲುವುದಲ್ಲ, ರಾಜ್ಯ ಮತ್ತು ಇಲ್ಲಿನ ಜನ ಉಳಿಯಬೇಕು ಎಂಬ ಕಾರಣಕ್ಕೆ ನಾವು ಗೆಲ್ಲಬೇಕಾಗಿದೆ. ಆದ್ದರಿಂದ ನಾವು ಈ ಸವಾಲನ್ನು ಸ್ವೀಕಾರ ಮಾಡಬೇಕು. ನಮ್ಮ ಪಕ್ಷ 6 ಕಮಿಟಿಗಳನ್ನು ಮಾಡಿದೆ, ಇವುಗಳು ಸುದೀರ್ಘ ಚರ್ಚೆ ನಡೆಸಿ ತನ್ನ ನಿರ್ಣಯಗಳನ್ನು ಮಾಡಿ, ಪಕ್ಷದ ನಿಲುವನ್ನು ಸ್ಪಷ್ಟಪಡಿಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
  

ಇಂದು ರಾಜ್ಯ ಮತ್ತು ದೇಶ ಸಾಲದ ಸುಳಿಯಲ್ಲಿ ಸಿಕ್ಕಿಕೊಂಡಿದೆ. 2014-15ರಲ್ಲಿ ಈ ದೇಶದ ಮೇಲಿದ್ದ ಒಟ್ಟು ಸಾಲ 53 ಲಕ್ಷ ಕೋಟಿ ರೂಪಾಯಿ. ಇಂದು ಈ ಸಾಲ 155 ಲಕ್ಷ ಕೋಟಿ ರೂಪಾಯಿ ಆಗಿದೆ. ನಿನ್ನೆಗೆ ನರೇಂದ್ರ ಮೋದಿ ಪ್ರಧಾನಿಯಾಗಿ 8 ವರ್ಷಗಳು ಆಯಿತು. ಅವರ ತಮ್ಮ 8 ವರ್ಷಗಳ ಆಡಳಿತದಲ್ಲಿ 100 ಲಕ್ಷ ಕೋಟಿ ರೂ.ಗೂ ಅಧಿಕ ಸಾಲವನ್ನು ಮಾಡಿದ್ದಾರೆ. ದೇಶದ ಪ್ರತಿಯೊಬ್ಬನ ಮೇಲೆ 1.70 ಲಕ್ಷ ರೂ. ಸಾಲ ಇದೆ. ಮಾರ್ಚ್‌ 2018 ರಲ್ಲಿ ಕರ್ನಾಟಕದ ಸಾಲ 2.42 ಲಕ್ಷ ಕೋಟಿ ರೂಪಾಯಿ ಇತ್ತು. 2023 ಮಾರ್ಚ್‌ ಗೆ 5.40 ಲಕ್ಷ ಕೋಟಿ ಸಾಲ ಆಗುತ್ತದೆ ಎಂದರು.

ಸದನದಲ್ಲಿ ಉತ್ತರಿಸುವಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಆರ್ಥಿಕತೆ ಉತ್ತಮ ಆಗುತ್ತಿದೆ ಎಂದು ಹೇಳಿದ್ದರು. ನಾವು ಈ ಬಾರಿ 71 ಸಾವಿರ ಕೋಟಿ ರೂ. ಸಾಲ ಮಾಡಬೇಕಾಗಿತ್ತು, ಅದನ್ನು 63 ಸಾವಿರ ಕೋಟಿ ರೂ.ಗೆ ಇಳಿಸಿದ್ದೀವಿ ಎಂದು ಅವರು ಹೇಳಿದರು. ಇದರರ್ಥ ನಾವು ಸಾಲ ಕಡಿಮೆ ಮಾಡುತ್ತಿದ್ದೇವೆ ಎಂದರು. ಸರ್ಕಾರ ನನಗೆ ನೀಡಿರುವ ಪ್ರಕಾರ ಈ ಸಾಲಿನಲ್ಲಿ 80 ಸಾವಿರ ಕೋಟಿ ರೂ. ಸಾಲ ಮಾಡಿದ್ದಾರೆ. ಮುಖ್ಯಮಂತ್ರಿ ಸದನಕ್ಕೆ ಸುಳ್ಳು ಹೇಳಿದ್ದಾರೆ. ರಾಜ್ಯದ ಜಿಡಿಪಿ ಬೆಳವಣಿಗೆ ಕಡಿಮೆಯಾಗಿದೆ, ಬೆಲೆಯೇರಿಕೆಯಿಂದ ಜನರ ಕೈಲಿ ಹಣವಿಲ್ಲ, 30% ಇಂದ 22% ಗೆ ಕಾರ್ಪೊರೇಟ್‌ ತೆರಿಗೆ ಇಳಿಸಿದ್ದಾರೆ, ಪರೋಕ್ಷ ತೆರಿಗೆ ಹೆಚ್ಚಿಸಿ ಕೆಳ ಮತ್ತು ಮಧ್ಯಮ ವರ್ಗದ ಜನರಿಂದ ಹಣ ಕಿತ್ತುಕೊಳ್ಳಲಾಗುತ್ತಿದೆ. ಯಾವಾಗ ಸಾಮಾನ್ಯ ಮತ್ತು ಕೆಳ ವರ್ಗದ ಜನರ ಕೈಲಿ ದುಡ್ಡಿರಲ್ಲ ಆಗ ಜಿಡಿಪಿ ಬೆಳವಣಿಗೆ ಆಗಲು ಸಾಧ್ಯವಿಲ್ಲ.

ನಾವು ಅಧಿಕಾರಕ್ಕೆ ಬರುವಾಗ ರಾಜ್ಯದ ಜಿಡಿಪಿ 6 ಲಕ್ಷ ಕೋಟಿ ಇತ್ತು. ನಾವು ಅಧಿಕಾರದಿಂದ ಇಳಿಯುವಾಗ 14 ಲಕ್ಷ ಕೋಟಿಗೆ ಏರಿಕೆಯಾಗಿತ್ತು. 2020-21 ರಲ್ಲಿ -5% ಬೆಳವಣಿಗೆ ಕಂಡಿದೆ. ಇದು ರಾಜ್ಯವನ್ನು ಸಾಲದ ಸುಳಿಗೆ ಸಿಕ್ಕಿಸಿ, ಆರ್ಥಿಕವಾಗಿ ದಿವಾಳಿ ಮಾಡಲಾಗುತ್ತಿದೆ ಎಂಬುದನ್ನು ತೋರಿಸುತ್ತದೆ. ಪೆಟ್ರೋಲ್, ಡೀಸೆಲ್‌, ಅಡುಗೆ ಅನಿಲ, ಗೊಬ್ಬರ, ಸಿಮೆಂಟ್‌ ಹೀಗೆ ಎಲ್ಲದರ ಬೆಲೆ ಗಗನಕ್ಕೇರಿದೆ. ಇದಕ್ಕೆ ಕಾರಣ ಕೇಂದ್ರ ಸರಕಾರ ಅನುಸರಿಸುತ್ತಿರುವ ತಪ್ಪು ಆರ್ಥಿಕ ನೀತಿ ಮತ್ತು ಅದನ್ನು ರಾಜ್ಯ ಸರಕಾರ ಅನುಸರಿಸುತ್ತಿರುವುದು.

ಜಿಎಸ್‌ಟಿ, ನೋಟು ರದ್ದತಿ, ಕೊರೋನ ಬಂದ ನಂತರ ದೇಶದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಹೋಗಿದೆ. ಇದರಿಂದ ರಾಜ್ಯದ ತೆರಿಗೆ ಪಾಲು ಕಡಿಮೆಯಾಗುತ್ತಿದೆ. 15ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ ರಾಜ್ಯಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ಶಿಫಾರಸು ಮಾಡಿತ್ತು, ಆದರೆ ಅಂತಿಮ ವರದಿಯಲ್ಲಿ ಅದನ್ನು ಕೈಬಿಡಲಾಯಿತು, ಇದರ ಹಿಂದೆ ರಾಜ್ಯದಿಂದ ರಾಜ್ಯಸಭೆಗೆ ಸ್ಪರ್ಧಿಸುತ್ತಿರುವ ನಿರ್ಮಲಾ ಸೀತಾರಾಮನ್‌ ಅವರ ಕೈವಾಡವಿದೆ. ಇದರಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ. ಜಿಎಸ್‌ಟಿ ಬರುವ ಮುಂಚೆ ರಾಜ್ಯದ ತೆರಿಗೆ ಬೆಳವಣಿಗೆ 14 – 15% ಇತ್ತು, ಜಿಎಸ್‌ಟಿ ಬಂದ ಮೇಲೆ 6%ಗೆ ಬಂದು ನಿಂತಿದೆ. ಜುಲೈ 1 ರಿಂದ ಜಿಎಸ್‌ಟಿ ಪರಿಹಾರ ನಿಲ್ಲಿಸುತ್ತಾರೆ, ಇದರಿಂದ ಪ್ರತಿ ವರ್ಷ ರಾಜ್ಯಕ್ಕೆ 19 ಸಾವಿರ ಕೋಟಿ ರೂಪಾಯಿ ಬರುವುದು ನಿಂತುಹೋಗುತ್ತದೆ. ಇವರಿಂದ ರಾಜ್ಯ ಉಳಿಯುತ್ತಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಕರ್ನಾಟಕ ಒಂದರಿಂದಲೇ ಆದಾಯ ತೆರಿಗೆ, ಕಾರ್ಪೊರೇಟ್‌ ತೆರಿಗೆ, ಪೆಟ್ರೋಲ್‌ - ಡೀಸೆಲ್ ಮೇಲಿನ‌ ಹೆಚ್ಚುವರಿ ಅಬಕಾರಿ ಸುಂಕ, ಅಬಕಾರಿ ಸುಂಕ, ಜಿಎಸ್‌ಟಿ ಹೀಗೆ ವಿವಿಧ ತೆರಿಗೆ ರೂಪದಲ್ಲಿ 3 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿದೆ, ಆದರೆ ನಮಗೆ ವಾಪಾಸು ಬರುವುದು 44 ಸಾವಿರ ಕೋಟಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದುರಾಡಳಿತದಿಂದ ಯುವಕರು, ಮಕ್ಕಳು, ರೈತರು ಸಮಸ್ಯೆಯಲ್ಲಿದ್ದಾರೆ. ಇವುಗಳನ್ನು ಮುಚ್ಚಿಡಲು ಧಾರ್ಮಿಕ ವಿಚಾರಗಳನ್ನು ಮುನ್ನೆಲೆಗೆ ತಂದಿದ್ದಾರೆ.

ಇಂದು ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರು ಆತಂಕದಲ್ಲಿ ಬದುಕುವಂತಾಗಿದೆ. ಚರ್ಚ್‌, ಮಸೀದಿಗಳ ಮೇಲೆ ದಾಳಿ, ಹಿಂದುಗಳನ್ನು ಅಲ್ಪಸಂಖ್ಯಾತರ ವಿರುದ್ಧ ಎತ್ತಿಕಟ್ಟುವ ಕೆಲಸ ದೇಶದ ಉದ್ದಗಲಕ್ಕೂ ನಡೀತಿದೆ. ಹೀಗಾಗಿ ಭಾರತೀಯ ಜನತಾ ಪಕ್ಷವನ್ನು ಅಧಿಕಾರದಿಂದ ತೆಗೆಯಬೇಕಾಗಿದೆ. ಸಂವಿಧಾನದ ಆಶಯಗಳಲ್ಲಿ ನಂಬಿಕೆ, ಬದ್ಧತೆ ಇಲ್ಲದವರು ದೇಶದ್ರೋಹಿಗಳು.

ಅನಗತ್ಯವಾಗಿ ಪಠ್ಯ ಪರಿಷ್ಕರಣೆಗೊಳಪಡಿಸಿ ಪಠ್ಯವನ್ನು ಕೇಸರೀಕರಣ ಮಾಡಲಾಗುತ್ತಿದೆ. ಯಾರೋ ರೋಹಿತ್ ಚಕ್ರತೀರ್ಥ ಎಂಬ ಆರ್.ಎಸ್.ಎಸ್ ಮೂಲದವನನ್ನು ಸಮಿತಿಗೆ ಅಧ್ಯಕ್ಷನನ್ನಾಗಿ ಮಾಡಿದ್ದಾರೆ. ಪಠ್ಯದಲ್ಲಿ ಭಗತ್‌ ಸಿಂಗ್‌, ನಾರಾಯಣ ಗುರು, ಕುವೆಂಪು ಇಂಥವರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ 10 ಮಂದಿ ಸಾಹಿತಿಗಳು ಪಠ್ಯ ಕ್ರಮದಿಂದ ತಮ್ಮ ಸಾಹಿತ್ಯಗಳನ್ನು ತೆಗೆದುಹಾಕಿ ಎಂದು ಹೇಳಿದ್ದಾರೆ.

ಜನರ ಈ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಹೋರಾಟಗಳನ್ನು ರೂಪಿಸಬೇಕಾಗುತ್ತದೆ. ಇದಕ್ಕೆ ಪಕ್ಷ ಮಾಡಿರುವ ಆರು ಕಮಿಟಿಗಳ ಸದಸ್ಯರು ತಮ್ಮ ಸಲಹೆ ನೀಡಬೇಕು. ನಾವೆಲ್ಲರೂ ಒಂದುಗೂಡಿ ಈ ದಿಸೆಯಲ್ಲಿ ಹೋರಾಟ ನಡೆಸೋಣ ಎಂದು ಸಿದ್ದರಾಮಯ್ಯ ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X