Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತೃತೀಯ ರಂಗದ ಸುಳಿವು ನೀಡಿದ ಜೆಡಿಎಸ್...

ತೃತೀಯ ರಂಗದ ಸುಳಿವು ನೀಡಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ3 Jun 2022 9:17 PM IST
share
ತೃತೀಯ ರಂಗದ ಸುಳಿವು ನೀಡಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ

ತುಮಕೂರು,ಜೂ.03: ರಾಜ್ಯದಲ್ಲಿ ಹಾಗೂ ದೇಶದಲ್ಲಿ ಯಾವುದೇ ರಾಜಕೀಯ ಪಕ್ಷ ಸುಧೀರ್ಘವಾಗಿ ಆಡಳಿತ ನಡಸಿಲ್ಲ. ಹಾಗಾಗಿ ಪ್ರಾದೇಶಿಕ ಪಕ್ಷಗಳೆಲ್ಲಾ ಒಗ್ಗೂಡಿ ಆಡಳಿತ ನಡೆಸುವ ಕಾಲ ಒಂದಲ್ಲ,ಒಂದು ದಿನ ಬಂದೇ ಬರುತ್ತದೆ ಎಂದು ಹೇಳುವ ಮೂಲಕ ಜೆಡಿಎಸ್ ವರಿಷ್ಸ ಹೆಚ್.ಡಿ.ದೇವೇಗೌಡ ತೃತೀಯ ರಂಗದ ಸುಳಿವನ್ನು ಬಿಚ್ಚಿಟ್ಟಿದ್ದಾರೆ.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಳ್ಳಗೆರೆ ಗ್ರಾಮದ ಶ್ರೀಚಿಕ್ಕಮ್ಮದೇವಿ ಅಮ್ಮನವರ ನೂತನ ದೇವಾಲಯ ಮತ್ತು ಮೂಲಶಿಲಾಬಿಂಬ ಪ್ರತಿಷ್ಟಾಪನೆ ಹಾಗೂ ವಿಮಾನಗೋಪುರ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮದಲ್ಲಿ ದೇವಾಲಯದ ಲೋಕಾರ್ಪಣೆ ಮಾಡಿ ಮಾತನಾಡುತಿದ್ದ ಅವರು, ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಇದೆ.ರಾಜಧಾನಿಯಲ್ಲಿ ಏನೇನು ನಡೆಯುತ್ತಿದೆ ಎಂಬ ವಿದ್ಯಾಮಾನಗಳ ಅರಿವಿದೆ.ಇದುವರೆಗೂ ರಾಜ್ಯದ ಮತದಾರರು ನಮಗೆ ಪೂರ್ಣ ಬಹುಮತ ನೀಡಿಲ್ಲ. ಹಾಗಿದ್ದೂ ಸಹ ಸಿದ್ದರಾಮಯ್ಯನ ವಿರೋಧದ ನಡುವೆಯೂ 25 ಸಾವಿರ ಕೋಟಿ ಸಾಲ ಮನ್ನಾ ಮಾಡುವ ಮೂಲಕ ಈ ರಾಜ್ಯದ ರೈತರ ಬೆನ್ನಿಗೆ ನಿಂತಿದ್ದೇವೆ ಎಂದರು.

ಸಿದ್ದರಾಮಯ್ಯ ಅಹಿಂದ ಸೋಗಿನಲ್ಲಿ ಜನರಲ್ಲಿ ವಿಷ ಬೀಜ ಬಿತ್ತುತಿದ್ದಾರೆ.ನಾವು ಎಲ್ಲಾ ಜನಾಂಗದವರಿಗೂ ಒಳ್ಳೆಯ ಕೆಲಸವನ್ನೇ ಮಾಡಿದ್ದೇವೆ.ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದವರಿಗೆ ಮೀಸಲಾತಿ ಕೊಟ್ಟಿದು ನಾನು ಪ್ರಧಾನಿಯಾಗಿದ್ದಾಗ. ಸಿದ್ದರಾಮಯ್ಯ ಅದನು ತಿರುಚಿ ಹಿಂದುಳಿದವರನ್ನು ನಮ್ಮ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ.ಹಿಂದುಳಿದವರಿಗೂ ಮಹಿಳೆಯರಿಗೂ ಮೀಸಲಾತಿ ಕಲ್ಪಸಿದು ಇದೇ ದೇವೇಗೌಡರು ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಗೆ ತಿರುಗೇಟ್ಟು ನೀಡಿದರು.

ರಾಜ್ಯದಿಂದ 16 ಸೀಟು ಗೆದ್ದು ರಾಷ್ಟ್ರದ ಪ್ರಧಾನಿಯಾದೆ ,ಪ್ರಧಾನಿ ಹಾಗೂ ರಾಜ್ಯದ ಮುಖ್ಯಮಂತ್ರಿಯಾದಾಗ ನೀರಿನ ವಿಚಾರದಲ್ಲಿ ಹಲವು ಕೆಲಸಗಳನ್ನು ರಾಜ್ಯದ ಪರ ಮಾಡಿದೇನೆ,ಅಲಮಟ್ಟಿ,ನಾರಾಯಣಪುರ ಬಲ್ದಂಡೆ,ಕೆ ಆರ್ ಎಸ್ ನೀರಿನ ಬಗ್ಗೆ ಹೋರಾಟ ಮಾಡಿದೇನೆ.ಕಾಂಗ್ರೆಸ್‍ನ ಮೇಕಾದಾಟು ಹೋರಾಟ ರಾಜಕೀಯ ಲಾಭಕಷ್ಠೇ ,ಅವರಿಗೆ ಬದ್ದತೆ ಇಲ್ಲ ಎಂದರು.
ಪಕ್ಕದ ತಮಿಳುನಾಡಿನಲ್ಲಿ  ಐಕ್ಯತೆ ಇದೇ ಪ್ರಧಾನಿಗಳು ಅಲ್ಲಿಗೆ ಹೋಗಿ ಸೇಲಂ ನಲ್ಲಿ ಏತನೀರಾವರಿಗೆ ಚಾಲನೆ ಕೋಟ್ಟು ಬರುತ್ತಾರೆ.ಅಲ್ಲಿನ ಜನ ಡಿ ಎಮ್ ಕೆ ಮತ್ತು ಅಣ್ಣ ಡಿಎಮ್ ಕೆ ಪ್ರಾದೇಶಿಕ ಪಕ್ಷಗಳಿಗೆ ಮತ ನೀಡಿ ರಾಷ್ಟ್ರೀಯ ಪಕ್ಷಗಳನ್ನು ತೆರೆಯ ಮರೆಗೆ ಸರಿಸಿದ್ದಾರೆ.ಈ ರೀತಿಯ ಐಕ್ಯತೆ ನಮ್ಮರಾಜ್ಯದಲ್ಲೂ ಬರಬೇಕು ಎಂದರು.

ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದ ವಹಿಸಿದ್ದ ಆದಿಚುಂಚನಗಿರಿ ಮಠದ ಶ್ರೀಶ್ರೀನಿರ್ಮಲಾನಂದಸ್ವಾಮೀಜಿ ಮಾತನಾಡಿ,ರಾಜ್ಯದ ರೈತರು, ಬಡವರ ಪರವಾಗಿ ನಿರಂತರವಾಗಿ ಕೆಲಸ ಮಾಡುತ್ತಿರುವ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡ ರಾಜ್ಯಕ್ಕಾಗಿ ಎಲ್ಲವನ್ನು ತ್ಯಾಗ ಮಾಡಿದ್ದಾರೆ. ರಾಜ್ಯದ ಜನತೆ ಅವರ ಪರವಾಗಿ ನಿಲ್ಲಬೇಕಿದೆ.ಹಾಗೆಯೇ ಹಲವಾರು ಯೋಜನೆಗಳ ಮೂಲಕ ತುಮಕೂರು ಗ್ರಾಮಾಂತರ ಕ್ಷೇತ್ರ ಅಬ್ಯುದಯಕ್ಕೆ ದುಡಿಯುತ್ತಿರುವ ಚನ್ನಿಂಗಪ್ಪ ಅವರ ಪುತ್ರ ಶಾಸಕ ಡಿ.ಸಿ.ಗೌರಿಶಂಕರ್ ಎತ್ತರಕ್ಕೆ ಬೆಳೆಯಲು ನೀವುಗಳು ಸಹಕಾರ ನೀಡಬೇಕೆಂದರು.

ವಿದ್ಯಾ ಚೌಡೇಶ್ವರಿ ಸಂಸ್ಥಾನ ಮಠದ ಶ್ರೀಬಾಲಮಂಜುನಾಥ ಮಹಾಸ್ವಾಮಿಗಳು ಉಪಸ್ಥಿತರಿದ್ದರು.ವೇದಿಕೆಯಲ್ಲಿ  ಶಾಸಕ  ಗೌರಿಶಂಕರ್,ಮಾಜಿ ಶಾಸಕ ಎಮ್ ಟಿ ಕೃಷ್ಣಪ್ಪ,ಜಿಲ್ಲಾಧ್ಯಕ್ಷ ಆರ್ ಸಿ ಅಂಜನಪ್ಪ,ಗೌರವಾಧ್ಯಕ್ಷ ಟಿಆರ್ ನಾಗರಾಜು, ಮುಖಂಡರಾದ ಕೃಷ್ಣಪ್ಪ, ನರಸೇಗೌಡ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X