Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ...

ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವಿಸರ್ಜನೆ: ಸಿಎಂ ಬೊಮ್ಮಾಯಿ

ಬಸವಣ್ಣ ಪಠ್ಯ ಮರುಪರಿಷ್ಕರಣೆಗೆ ನಿರ್ಧಾರ ► ಆಕ್ಷೇಪಾರ್ಹ ವಿಷಯಗಳಿದ್ದರೆ ಮತ್ತೊಮ್ಮೆ ಪರಿಷ್ಕರಣೆ

ವಾರ್ತಾಭಾರತಿವಾರ್ತಾಭಾರತಿ3 Jun 2022 11:19 PM IST
share
ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವಿಸರ್ಜನೆ: ಸಿಎಂ ಬೊಮ್ಮಾಯಿ

ಬೆಂಗಳೂರು, ಜೂ.3: ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತೆ ಪರಿಷ್ಕರಿಸಲಾಗುತ್ತದೆ. ರಾಜ್ಯದಲ್ಲಿ ಹಲವು ಬಾರಿ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಈ ಹಿಂದೆ ಜಾರಿಯಲ್ಲಿದ್ದ ಕೆಲವು ಪಠ್ಯಪುಸ್ತಕಗಳಲ್ಲಿ ಹಲವು ಆಕ್ಷೇಪಾರ್ಹ ಅಂಶಗಳು ಇದ್ದ ಕಾರಣ ಸಮಾಜ ವಿಜ್ಞಾನ ಹಾಗೂ ಕನ್ನಡ ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಪಠ್ಯ ಪುಸ್ತಕಗಳ ಅಲ್ಪಪರಿಷ್ಕರಣೆಯನ್ನು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.  

ಹಾಲಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿದೆ ಎಂದು ಅವರು ಹೇಳಿದ್ದಾರೆ.

ಪಂಡಿತಾರಾಧ್ಯ ಸ್ವಾಮೀಜಿಗಳು ಹಾಗೂ ನಾಡಿನ ಇತರೆ ಸ್ವಾಮೀಜಿಗಳು ಪ್ರಸ್ತುತ ಪಠ್ಯ ಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಕೆಲವು ಆಕ್ಷೇಪಣೆಗಳನ್ನು ಮಾಡಿರುತ್ತಾರೆ. ಬಸವಣ್ಣನವರ ಇದೇ ವಿಷಯಾಂಶಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿಯಲ್ಲಿದ್ದ ಪ್ರೊ.ಬರಗೂರು ರಾಮಚಂದ್ರಪ್ಪ ಇವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳಿವೆ. ಪ್ರಸ್ತುತ ಪಠ್ಯಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶವನ್ನು ಯಾರ ಭಾವನೆಗೂ ಧಕ್ಕೆ ಆಗದಂತೆ ಪರಿಷ್ಕರಿಸಲಾಗುವುದು ಎಂದವರು ಹೇಳಿದ್ದಾರೆ.

ಆದಿಚುಂಚನಗಿರಿ ಪೀಠದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು ಹಾಗೂ ಇತರರ ಆಶಯದಂತೆ ರಾಷ್ಟ್ರಕವಿ ಕುವೆಂಪುರವರು ವಿರಚಿತ ನಾಡಗೀತೆಯನ್ನು ವಿಕೃತಗೊಳಿಸುವ ರೀತಿಯಲ್ಲಿ ನಾಡಗೀತೆಯ ದಾಟಿಯಲ್ಲಿ ಮೂಲ ಕವನವನ್ನು ಬರೆದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಸೈಬರ್ ಕ್ರೈಮ್ ಬೆಂಗಳೂರು ಇವರಿಗೆ ತನಿಖೆಯನ್ನು ನಡೆಸಲು ಸೂಚಿಸಲಾಗಿದೆ. ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧಿಸಿದಂತೆ ಬಂದಿರುವ ಆರೋಪ/ಆಕ್ಷೇಪಣೆಗಳಿಗೆ ಸ್ಪಷ್ಟೀಕರಣಗಳನ್ನು ಒಳಗೊಂಡ ಟಿಪ್ಪಣಿ ಲಗತ್ತಿಸಿದೆ. ಹಲವಾರು ಅಂಶಗಳಿಗೆ ವಾಸ್ತವ ಅಂಶಗಳಿಂದ ಸ್ಪಷ್ಟೀಕರಣವನ್ನು ಕೊಡಲಾಗಿದೆ. ಪ್ರಸ್ತುತ ಆಕ್ಷೇಪ ಮಾಡಿರುವಂತೆ ಮಹಾನ್ ವ್ಯಕ್ತಿಗಳ ಯಾವುದೇ ಪಾಠವನ್ನು ಕೈಬಿಡಲಾಗಿಲ್ಲ ಎಂದು ಬೊಮ್ಮಾಯಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸರಕಾರ ತೆಗೆದುಕೊಂಡ ನಿರ್ಧಾರಗಳು:

►ಪ್ರಸ್ತುತ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿದೆ.

►ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಯಾವಾದಾದರೂ ಆಕ್ಷೇಪಾರ್ಹ ವಿಷಯಗಳಿದ್ದಲ್ಲಿ ಅವುಗಳನ್ನು ಮತ್ತೊಮ್ಮೆ ಪರಿಷ್ಕರಿಸುವ ಮುಕ್ತ ಮನಸ್ಸನ್ನು ಸರ್ಕಾರವು ಹೊಂದಿದೆ. ಈ ಹಿನ್ನೆಲೆಯಲ್ಲಿ ಮೇಲೆ ತಿಳಿಸಿದಂತೆ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಸೂಕ್ತವಾಗಿ ಪರಿಷ್ಕರಿಸಲು ನಿರ್ಧಾರ ಮಾಡಲಾಗಿದೆ.

►ರಾಷ್ಟ್ರಕವಿ ಕುವೆಂಪುರವರ ನಾಡಗೀತೆಯನ್ನು ಆಕ್ಷೇಪಾರ್ಹವಾಗಿ ವಿಕೃತಿಗೊಳಿಸಿದ ಅಂಶವು ಪಠ್ಯಪುಸ್ತಕಗಳಲ್ಲಿ ಉಲ್ಲೇಖಗೊಳ್ಳದಿದ್ದರೂ, ಇದರ ಮೂಲಕವನ ಬರೆದ ವ್ಯಕ್ತಿಗಳ ಬಗ್ಗೆ ಕಾನೂನಾತ್ಮಕ ತನಿಖೆಯ ಕ್ರಮವನ್ನು ಸರ್ಕಾರವು ತೆಗೆದುಕೊಂಡಿದೆ.

►ಪ್ರೊ.ಬರಗೂರು ರಾಮಚಂದ್ರಪ್ಪರವರ ಅಧ್ಯಕ್ಷತೆಯ ಸಮಿತಿಯು ರಚಿಸಿದ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ರಾಷ್ಟ್ರಕವಿ ಕುವೆಂಪುರವರ ಕುರಿತಾದ 7 (ಏಳು) ಗದ್ಯ/ಪದ್ಯಗಳಿಗೆ ಸೀಮಿತವಾಗಿದ್ದನ್ನು, ಪ್ರಸ್ತುತ ಪರಿಷ್ಕರಣಾ ಸಮಿತಿ ರಚಿಸಿರುವ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ 10 (ಹತ್ತು) ಕ್ಕೇರಿಸಿದೆ.

►ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ನಾಡಪ್ರಭು ಕೆಂಪೇಗೌಡರ ಕುರಿತಾದ ಪಾಠವನ್ನು ಹೊಸದಾಗಿ ಸೇರ್ಪಡೆ ಮಾಡಿದೆ.

► ಈ ಹಿಂದಿನ ಪಠ್ಯಪುಸ್ತಕಗಳಲ್ಲಿ ಪರಿಚಯಿಸಲಾಗಿದ್ದ ಇಸ್ಲಾಂ ಮತ್ತು ಕ್ರೈಸ್ತ ಧರ್ಮದ ಜೊತೆ ಹಿಂದೂ ಧರ್ಮದ ವಿಷಯವನ್ನೂ ಸೇರ್ಪಡೆ ಮಾಡಿ ಪರಿಚಯಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    

share
ವಾರ್ತಾಭಾರತಿ
ವಾರ್ತಾಭಾರತಿ
Next Story
X