Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​ನರಮೇಧದ ಹೊಣೆಯಿಂದ...

​ನರಮೇಧದ ಹೊಣೆಯಿಂದ ನುಣುಚಿಕೊಳ್ಳುತ್ತಿರುವ ಪಾಕಿಸ್ತಾನ: ಭಾರತದ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ3 Jun 2022 11:41 PM IST
share
​ನರಮೇಧದ ಹೊಣೆಯಿಂದ ನುಣುಚಿಕೊಳ್ಳುತ್ತಿರುವ ಪಾಕಿಸ್ತಾನ: ಭಾರತದ ವಾಗ್ದಾಳಿ

ವಿಶ್ವಸಂಸ್ಥೆ, ಜೂ.3: ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಜಮ್ಮು-ಕಾಶ್ಮೀರದ ವಿಷಯವನ್ನು ಎತ್ತಿರುವ ಪಾಕಿಸ್ತಾನವನ್ನು ತೀವ್ರ ತರಾಟೆಗೆತ್ತಿಕೊಂಡಿರುವ ಭಾರತ, ಒಂದು ದೇಶವು ನರಮೇಧ ಹಾಗೂ ಜನಾಂಗೀಯ ಶುದ್ಧೀಕರಣದಂತಹ ಗಂಭೀರ ಅಪರಾಧದಿಂದ ಯಾವ ರೀತಿ ತಪ್ಪಿಸಿಕೊಳ್ಳಬಹುದು ಎಂಬುದಕ್ಕೆ ಪಾಕಿಸ್ತಾನ ಜೀವಂತ ಉದಾಹರಣೆಯಾಗಿದೆ ಎಂದಿದೆ.

ಗಡಿಯಾಚೆಗಿನ ಭಯೋತ್ಪಾದನೆಗೆ ಪ್ರತ್ಯುತ್ತರ ನೀಡಲು ದೃಢ ಮತ್ತು ನಿರ್ಣಾಯಕ ಕ್ರಮಗಳನ್ನು ಕೈಗೊಳ್ಳುವುದನ್ನು ಭಾರತ ಮುಂದುವರಿಸಲಿದೆ ಎಂದು ಹೇಳಿದೆ. ಗುರುವಾರ ಭದ್ರತಾ ಸಮಿತಿಯಲ್ಲಿ ಮಾತನಾಡಿದ ವಿಶ್ವಸಂಸ್ಥೆಗೆ ಭಾರತದ ಕಾಯಂ ಪ್ರತಿನಿಧಿಯ ಕಾನೂನು ಸಲಹೆಗಾರರಾದ ಡಾ. ಕಾಜಲ್ ಭಟ್ ‘ಪಾಕ್ ಪ್ರತಿನಿಧಿ ಹರಡಿದ ಸುಳ್ಳು ಮತ್ತು ದುರುದ್ದೇಶಪೂರಿತ ಪ್ರಚಾರಕ್ಕೆ ಪ್ರತಿಕ್ರಿಯಿಸಲು ಈ ವೇದಿಕೆಯನ್ನು ಒತ್ತಾಯಪೂರ್ವಕ ಬಳಸಬೇಕಾಗಿದೆ ಎಂದರು. ಈದಿನ ಅಂತರಾಷ್ಟ್ರೀಯ ನಿಯಮಗಳ ಗಂಭೀರ ಉಲ್ಲಂಘನೆಗಾಗಿ ಉತ್ತರದಾಯಿತ್ವವನ್ನು ಬಲಪಡಿಸುವ ಬಗ್ಗೆ ಚರ್ಚೆ ನಡೆಸಿದ್ದೇವೆ. ವಿಪರ್ಯಾಸವೆಂದರೆ, ನರಮೇಧದ ನಾಚಿಕೆಗೇಡಿನ ಇತಿಹಾಸ ಹೊಂದಿರುವ ಪಾಕಿಸ್ತಾನ 50 ವರ್ಷದ ಹಿಂದೆ ಪೂರ್ವಪಾಕಿಸ್ತಾನ(ಈಗ ಬಾಂಗ್ಲಾದೇಶ)ದಲ್ಲಿ ಎಸಗಿದ ನರಮೇಧದ ಬಗ್ಗೆ ಕ್ಷಮೆ ಯಾಚನೆ ಅಥವಾ ಹೊಣೆ ಹೊರುವುದು ಹಾಗಿರಲಿ, ಅದನ್ನು ಒಪ್ಪಿಕೊಳ್ಳಲೂ ತಯಾರಿಲ್ಲ. ಕನಿಷ್ಟ ಈ ವೇದಿಕೆಯ ಘನತೆಗೆ ಧಕ್ಕೆ ಬರುವ ಕಾರ್ಯದಿಂದಾದರೂ ಅವರು ದೂರ ಇರಲಿ ಎಂದರು.

ಪಾಕಿಸ್ತಾನದ ಸೇನೆಯ ಆಪರೇಷನ್ ಸರ್ಚ್‌ಲೈಟ್ ಎಂಬ ಹೆಸರಿನ ಕಾರ್ಯಾಚರಣೆಯ ಮೂಲಕ ವ್ಯವಸ್ಥಿತ ನರಮೇಧ ಎಸಗಲಾಗುತ್ತಿದೆ. ಅಮಾಯಕ ಮಹಿಳೆಯರು, ಮಕ್ಕಳು, ಶಿಕ್ಷಣ ತಜ್ಞರು ಮತ್ತು ಬುದ್ಧಿಜೀವಿಗಳನ್ನು ಯುದ್ಧದ ಆಯುಧಗಳಂತೆ ಬಳಸಲಾಗುತ್ತಿದೆ ಎಂದರು. ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ತಥಾಕಥಿತ ಬದಲಾವಣೆಯ ಬಗ್ಗೆಯೂ ಪಾಕ್ ಪ್ರತಿನಿಧಿ ಮಾತನಾಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿನ ಧಾರ್ಮಿಕ ಅಲ್ಪಸಂಖ್ಯಾತ ಸದಸ್ಯರನ್ನು ಗುರಿಯಾಗಿಸಿಕೊಂಡಿರುವ ಪಾಕ್ ಬೆಂಬಲಿತ ಭಯೋತ್ಪಾದಕರು ಮಾತ್ರ ಜನಸಂಖ್ಯಾ ಬದಲಾವಣೆಯ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.

ಈ ಪ್ರದೇಶದಲ್ಲಿ ಶಾಂತಿ ನೆಲೆಸಲು ಪಾಕ್ ಮಾಡಬೇಕಿರುವ ಏಕೈಕ ಉಪಕಾರವೆಂದರೆ, ಭಾರತ ಮತ್ತದರ ಜನರನ್ನು ಗುರಿಯಾಗಿಸಿಕೊಂಡ ಉಗ್ರರನ್ನು ಬೆಂಬಲಿಸದೆ ಇರುವುದು ಎಂದ ಅವರು, ಜಮ್ಮು-ಕಾಶ್ಮೀರ ಮತ್ತು ಲಡಾಖ್ ಈ ಹಿಂದೆ, ಇಂದು ಮತ್ತು ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿಯಲಿದೆ . ಪಾಕ್ ಅಕ್ರಮವಾಗಿ ವಶದಲ್ಲಿ ಇರಿಸಿಕೊಂಡಿರುವ ಪ್ರದೇಶವೂ ಇದರಲ್ಲಿ ಸೇರಿದೆ ಎಂದರು.

ಇದಕ್ಕೂ ಮುನ್ನ ಸಭೆಯಲ್ಲಿ ಮಾತನಾಡಿದ್ದ ಭಾರತದ ವಿದೇಶ ವ್ಯವಹಾರ ಇಲಾಖೆಯ ಸಹಾಯಕ ಸಚಿವ ಡಾ.ರಾಜ್ ಕುಮಾರ್ ರಂಜನ್ ಸಿಂಗ್, ಹೊಣೆಗಾರಿಕೆ ಮತ್ತು ನ್ಯಾಯವನ್ನು ರಾಜಕೀಯ ಉದ್ದೇಶಗಳಿಗೆ ಜೋಡಿಸಲಾಗದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X