Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಸರ್ಜನೆ ಮಾಡಬೇಕಿರುವುದು ಪರಿಷ್ಕೃತ...

ವಿಸರ್ಜನೆ ಮಾಡಬೇಕಿರುವುದು ಪರಿಷ್ಕೃತ ಪಠ್ಯವನ್ನು: ಸಿದ್ದರಾಮಯ್ಯ

''ಚಕ್ರತೀರ್ಥರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದಲೂ ಕಿತ್ತುಹಾಕಬೇಕು''

ವಾರ್ತಾಭಾರತಿವಾರ್ತಾಭಾರತಿ4 Jun 2022 5:11 PM IST
share
ವಿಸರ್ಜನೆ ಮಾಡಬೇಕಿರುವುದು ಪರಿಷ್ಕೃತ ಪಠ್ಯವನ್ನು: ಸಿದ್ದರಾಮಯ್ಯ

ಬೆಂಗಳೂರು :ವಿಸರ್ಜನೆ ಮಾಡಬೇಕಾಗಿರುವು ಪರಿಷ್ಕೃತ ಪಠ್ಯವನ್ನು, ಈಗಾಗಲೇ ಅವಧಿ ಮುಗಿದಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ. ಪೂರ್ವಗ್ರಹ ಪೀಡಿತ ಅಧ್ಯಕ್ಷನನ್ನು ಕಿತ್ತುಹಾಕಿದ ಮೇಲೆ ಆ ಸಮಿತಿ ಶಿಫಾರಸು ಮಾಡಿರುವ ಪಠ್ಯವನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ?  ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಸಂಬಂಧ  ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ಜನತೆಯಲ್ಲಿ ಮೂಡಿರುವ ಗೊಂದಲವನ್ನು ಪರಿಹರಿಸುವಂತಹ ಸ್ಪಷ್ಟತೆ ರಾಜ್ಯದ ಮುಖ್ಯಮಂತ್ರಿ ಅವರ ಮಾತಿನಲ್ಲಿ ಇರಬೇಕು. ಇವರ ಮಾತು ಇನ್ನಷ್ಟು ಗೊಂದಲಗಳನ್ನು ಸೃಷ್ಟಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರು ಬೋಧಿಸಲಿರುವುದು ಹಳೆಯ ಪಠ್ಯವೇ? ಪರಿಷ್ಕೃತ ಪಠ್ಯವೇ? ಎಂದು ಪ್ರಶ್ನಿಸಿದ್ದಾರೆ.

ಬಸವಣ್ಣನವರ ವಿಚಾರವೂ ಸೇರಿದಂತೆ ಆಕ್ಷೇಪ ವ್ಯಕ್ತವಾಗಿರುವ ಅಂಶಗಳನ್ನು ಪರಿಷ್ಕರಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಹಾಗಿದ್ದರೆ ಈಗಿನ ಪರಿಷ್ಕೃತ ಪಠ್ಯವನ್ನು ಕೈಬಿಡಲಾಗುವುದೇ? ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ನಾಡಿನ ಹಲವಾರು ಹಿರಿಯ ಸಾಹಿತಿಗಳು ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಸೇರಿಸಲಾಗಿರುವ ತಮ್ಮ ಕೃತಿಗಳನ್ನು ವಾಪಸು ಪಡೆದಿದ್ದಾರೆ. ರಾಜ್ಯ ಬಿಜೆಪಿ ಸರಕಾರ  ತಮ್ಮ ಅಭಿಪ್ರಾಯವನ್ನು ಧಿಕ್ಕರಿಸಿದರೆ ಕಾನೂನು ಹೋರಾಟ ಮಾಡುವುದಾಗಿ ಈ ಸಾಹಿತಿಗಳು ಎಚ್ಚರಿಕೆ ನೀಡಿದ್ದಾರೆ. ಇಂತಹ ವಿವಾದಾತ್ಮಕ ಪಠ್ಯವನ್ನು ಬೋಧಿಸಲು ಹೇಗೆ ಸಾಧ್ಯ? ಎಂದು ಅವರು ಕೇಳಿದ್ದಾರೆ.

ಪಠ್ಯ ಪರಿಷ್ಕರಣಾ ಸಮಿತಿಗೆ ಅನರ್ಹರ ನೇಮಕ ಮತ್ತು ಅದರಿಂದ ಸೃಷ್ಟಿಯಾಗಿರುವ ವಿವಾದಕ್ಕೆ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಯಾವ ಪಠ್ಯವನ್ನು ಓದಬೇಕೆಂಬ ಬಗ್ಗೆ ವಿದ್ಯಾರ್ಥಿಗಳು, ಯಾವುದನ್ನು ಬೋಧಿಸಬೇಕೆಂದು ಶಿಕ್ಷಕರು ಗೊಂದಲಕ್ಕೀಡಾಗಿದ್ದಾರೆ.
ಇದಕ್ಕೆ ಏನು ಪರಿಹಾರ? ಮುಖ್ಯಮಂತ್ರಿ ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈಗಿನ ಗೊಂದಲಗಳಿಗೆ ಇರುವ ಏಕೈಕ ಪರಿಹಾರವೆಂದರೆ ನಾಡದ್ರೋಹಿ ಅಧ್ಯಕ್ಷನ ಸಮಿತಿ ಪರಿಷ್ಕರಿಸಿರುವ ಪಠ್ಯವನ್ನು ರದ್ದುಮಾಡಿ, ನೂತನ ಪರಿಷ್ಕೃತ ಪಠ್ಯ ರಚನೆಯಾಗುವ ವರೆಗೆ ಹಳೆಯ ಪಠ್ಯವನ್ನೇ ಮುಂದುವರಿಸುವುದು. ಮುಖ್ಯಮಂತ್ರಿ ಜಿದ್ದಿಗೆ ಬೀಳದೆ ಈ ನಿರ್ಧಾರ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ನಾಡಗೀತೆ ಮತ್ತು ರಾಷ್ಟ್ರಕವಿ ಕುವೆಂಪು ಅವರನ್ನು ಗೇಲಿಮಾಡಿರುವ, ಸಮಾಜ ಸುಧಾರಕರಾದ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ಮಾತ್ರವಲ್ಲ ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದಲೂ ಕಿತ್ತುಹಾಕಬೇಕು ಎಂದು ಅವರು ಆಗ್ರಹಿಸಿದ್ದಾರೆ. ನಾನು ಕಳೆದ ಹತ್ತು ವರ್ಷಗಳಿಂದ ಕನ್ನಡ ನುಡಿ, ಸಾಹಿತ್ಯ ಮತ್ತು ಸಾಹಿತಿಗಳನ್ನು ಗೇಲಿ ಮಾಡುತ್ತಾ ಬಂದಿರುವ, ಸಾಮಾಜಿಕ ಜಾಲತಾಣಗಳಲ್ಲಿ ವಿಕೃತಿಯ ಅಭಿಪ್ರಾಯಗಳನ್ನು ಹಂಚಿಕೊಂಡು ಸಾಮಾಜಿಕ ಆರೋಗ್ಯವನ್ನು ಹಾಳುಗೆಡಹುತ್ತಾ ಬಂದಿರುವ ರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ವಿಸರ್ಜನೆ ಮಾಡಬೇಕಾಗಿರುವು ಪರಿಷ್ಕೃತ ಪಠ್ಯವನ್ನು, ಈಗಾಗಲೇ ಅವಧಿ ಮುಗಿದಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ. ಪೂರ್ವಗ್ರಹ ಪೀಡಿತ ಅಧ್ಯಕ್ಷನನ್ನು ಕಿತ್ತುಹಾಕಿದ ಮೇಲೆ ಆ ಸಮಿತಿ ಶಿಫಾರಸು ಮಾಡಿರುವ ಪಠ್ಯವನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ? 1/8#SaveKarnataka

— Siddaramaiah (@siddaramaiah) June 4, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X