Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾರಿ ತಪ್ಪಿದ ಸರಕಾರದಿಂದ ಜನರನ್ನ ದಾರಿ...

ದಾರಿ ತಪ್ಪಿದ ಸರಕಾರದಿಂದ ಜನರನ್ನ ದಾರಿ ತಪ್ಪಿಸುವ ಹುನ್ನಾರ: ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ4 Jun 2022 6:57 PM IST
share
ದಾರಿ ತಪ್ಪಿದ ಸರಕಾರದಿಂದ ಜನರನ್ನ ದಾರಿ ತಪ್ಪಿಸುವ ಹುನ್ನಾರ: ಬಿ.ಕೆ.ಹರಿಪ್ರಸಾದ್

ಬೆಂಗಳೂರು, ಜೂ. 4: ‘ಪಠ್ಯ ಪರಿಷ್ಕರಣಾ ಸಮಿತಿಯನ್ನ ವಿಸರ್ಜನೆ ಮಾಡಿ ಪರಿಷ್ಕೃತ ಪಾಠಗಳನ್ನು ಉಳಿಸಿಕೊಳ್ಳುವ ಮೂಲಕ ತಾಂತ್ರಿಕ ತಂತ್ರಗಾರಿಕೆಯ ಗಿಮಿಕ್ ಅನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಮಾಡಿದ್ದಾರೆ. ಆ ಮೂಲಕ ಸಿಎಂ ರಾಜ್ಯದ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ' ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಟೀಕಿಸಿದ್ದಾರೆ.

ಶನಿವಾರ ನಗರದಲ್ಲಿ ಮಾತನಾಡಿದ ಅವರು, ‘ಇಂತಹ ‘ಕಲೆ' ನಾಗಪುರದವರಿಂದಲೇ ಕಲಿಯುತ್ತಿರಬೇಕು. ಒಬ್ಬ ನಿಕೃಷ್ಟ ಟ್ರೋಲರ್ ಗೆ ಪಠ್ಯ ಪರಿಷ್ಕರಣೆ ಅಧ್ಯಕ್ಷರನ್ನಾಗಿ ಮಾಡಿ ಸರಕಾರವೇ ಮಂಡಿಯೂರಿರುವುದಷ್ಟೇ ಅಲ್ಲ, ಹೊರಳಾಡುತ್ತಿರುವುದು ನಾಚಿಕೆಗೇಡಿತನದ ಪರಮಾವಧಿ. ಈ ನೆಲದ ಅಸ್ಮಿತೆಯಾಗಿರುವ ಬಸವಣ್ಣ, ನಾರಾಯಣಗುರು, ಕುವೆಂಪು ಅವರಾದಿಯಾಗಿ ಸ್ವಾತಂತ್ರ್ಯ ಹೋರಾಟಗಾರರು, ಸಾಮಾಜಿಕ ಸುಧಾರಕರ ಬಗ್ಗೆ ತುಚ್ಛಭಾವನೆಯಿಂದ ನೋಡಿದ್ದಲ್ಲದೆ, ಪಠ್ಯ ಪುಸ್ತಕದಲ್ಲಿ ನಾಗಪುರದ ಹಿಡನ್ ಅಜೆಂಡಾ ತುರುಕಿರುವುದು ಜಗಜ್ಜಾಹೀರಾಗುತ್ತಿದೆ' ಎಂದು ವಾಗ್ದಾಳಿ ನಡೆಸಿದರು.

‘ಒಬ್ಬ ಟ್ರೋಲರ್ ಕಡೆಯಿಂದ ಇಂತಹ ಕೆಲಸ ಮಾಡಿಸಿರುವ ಸರಕಾರದ ದಾರಿದ್ರ್ಯತನಕ್ಕೆ ರಾಜ್ಯದ ಸಾಕ್ಷಿ ಪ್ರಜ್ಞೆಯಂತಿರುವ ಸಾಹಿತಿಗಳು, ಸ್ವಾಮೀಜಿಗಳು, ಬರಹಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದ ಇತಿಹಾಸದಲ್ಲಿಯೇ ಈ ಮಟ್ಟದ ಆಕ್ರೋಶ ಎಂದೂ ಬಂದಿರಲಿಲ್ಲ. ಮುಖ್ಯಮಂತ್ರಿ ಒಬ್ಬ ಟ್ರೋಲರ್‍ನ ಪರವಾಗಿ ವಾದ ಮಂಡಿಸುವ ಮೂಲಕ ಸರಕಾರದ ಜಂಘಾಬಲವನ್ನೇ ಕುಸಿಯುವಂತೆ ಮಾಡಿದ್ದಾರೆ' ಎಂದು ಅವರು ದೂರಿದರು.

‘ರಾಷ್ಟ್ರಕವಿ ಕುವೆಂಪುರವರು ಬರೆದ ನಾಡಗೀತೆಗೆ ಅವಮಾನ ಮಾಡಿದ್ದಲ್ಲದೆ, ಬುರ್ಜ ಖಲೀಫಾ ಬಹುಮಾನ ಕೊಡುತ್ತೇನೆಂದು ಘೋಷಿಸಿದ್ದಾನೆ. ಮುಖ್ಯಮಂತ್ರಿಗಳೇ, ಅಪರಾಧ ಮಾಡಿದವನಿಗೆ ಬಹುಮಾನ ನೀಡುತ್ತೇನೆ ಎನ್ನುವುದು ಅಪರಾಧವೇ. ಕುವೆಂಪು ಅವಹೇಳನ ಮಾಡಿದ್ದೇ ನಿಮ್ಮ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ. ಚರ್ಚೆಗಾಗಿ ಆತನಲ್ಲ ಎಂದುಕೊಂಡರೂ ಕುವೆಂಪು ಅವಹೇಳನಕ್ಕೆ ಬಹುಮಾನ ಘೋಷಿಸಿ ಅಪರಾಧಕ್ಕೆ ಪ್ರೋತ್ಸಾಹಿಸಿದವನನ್ನು ಬಂಧಿಸಬೇಕಲ್ಲವೇ?' ಎಂದು ಹರಿಪ್ರಸಾದ್ ಪ್ರಶ್ನಿಸಿದರು.

‘ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳನ್ನ ಗೌರವಿಸಿ ಆಗಿರುವ ಪ್ರಮಾದಕ್ಕೆ ನಾಡಿನ ಕ್ಷಮೆ ಕೋರಿ ಈ ಟ್ರೋಲರ್ ಚಕ್ರತೀರ್ಥನನ್ನ ಬಂಧನ ಮಾಡಿ. ಬಸವಣ್ಣ, ಅಂಬೇಡ್ಕರ್, ಕುವೆಂಪು, ನಾರಾಯಣಗುರು ಸೇರಿದಂತೆ ಅನೇಕ ಮಹನೀಯರಿಗೆ ಅಪಮಾನಿಕರಿಸಿರುವ ಹೊಸ ಪಠ್ಯ ಪರಿಷ್ಕರಣೆಯನ್ನ ರದ್ದುಗೊಳಿಸಿ, ಹಿಂದೆಯಿದ್ದ ಪುಸ್ತಕಗಳನ್ನೇ ವಿದ್ಯಾರ್ಥಿಗಳಿಗೆ ಭೋದನೆ ಮಾಡಲು ಅನುವು ಮಾಡಿಕೊಡಬೇಕು. ನಿಮ್ಮ ಸರಕಾರದ ಮಂತ್ರಿ ಮಹಾಶಯರು ಸ್ವಾಮೀಜಿಗಳು, ಸಾಹಿತಿಗಳ ವಿರುದ್ಧ ನೀಡುತ್ತಿರುವ ಹೇಳಿಕೆಗಳಿಗೆ ಕಡಿವಾಣ ಹಾಕಿ.

ಶಾಲೆಗಳು ಆರಂಭವಾಗಿ ಇಪ್ಪತ್ತು ದಿನಗಳಿಗೂ ಹೆಚ್ಚಾಗಿದೆ. ಶಿಕ್ಷಣ ಸಚಿವರ ಸುಳ್ಳಿನ ಕಂತೆಗಳನ್ನ ದಿನಕ್ಕೊಂದು ಧಾರಾವಾಹಿಯಂತೆ ಬಿಚ್ಚಿಡುತ್ತಿದ್ದಾರೆ. ಈಗಲಾದರೂ ಹಾವಿನಪುರದವರ ಆದೇಶಕ್ಕಾಗಿ ಕಾಯದೆ ಆರೋಗ್ಯಕರ ಭವಿಷ್ಯತ್ತು ರೂಪಿಸಲಿರುವ ಮಕ್ಕಳ ಶಿಕ್ಷಣಕ್ಕಾಗಿ ಕಿಂಚಿತ್ತಾದರೂ ಪ್ರಮಾಣಿಕ ಪ್ರಯತ್ನ ಮಾಡಿ. ಇಲ್ಲದಿದ್ದರೆ ವರ್ತಮಾನದಲ್ಲಿ ನೀವು ಮಾಡಿರುವ ಪ್ರಮಾದಕ್ಕೆ ಇತಿಹಾಸ ಕ್ಷಮಿಸುವುದಿಲ್ಲ' ಎಂದು ಹರಿಪ್ರಸಾದ್ ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X