ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಮಣಿಪಾಲ : ಸಾಲದ ಬಾಧೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಪರ್ಕಳ ಸರಸ್ವತಿ ನಗರದ ಆನಂದ(೬೬) ಎಂಬವರು ಜೂ.೩ರಂದು ಮನೆಯ ಬೆಡ್ ರೂಮಿನ ಮಹಡಿಯ ಕಬ್ಬಿಣದ ಕೊಂಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೈಲೂರು ವಾಸುಕಿ ನಗರದ ಮಣಿವಣ್ಣನ್ ಎಂಬವರ ಮಗ ಸುಮೇಶ್ ಎಂ.(33) ಎಂಬವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಜೂ.೩ರಂದು ಸಂಜೆ ಮನೆಯ ಅಡುಗೆ ಕೋಣೆಯ ಮಾಡಿನ ಮರದ ಜಂತಿಗೆ ನೇಣು ಬಿಗಿದು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story