Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯ ಕಡಲತೀರದ ಸ್ವಚ್ಛತೆಗೆ...

ಉಡುಪಿ ಜಿಲ್ಲೆಯ ಕಡಲತೀರದ ಸ್ವಚ್ಛತೆಗೆ ಶಾಶ್ವತ ವ್ಯವಸ್ಥೆ: ಸಿಇಒ ಪ್ರಸನ್ನ

ವಾರ್ತಾಭಾರತಿವಾರ್ತಾಭಾರತಿ4 Jun 2022 9:26 PM IST
share
ಉಡುಪಿ ಜಿಲ್ಲೆಯ ಕಡಲತೀರದ ಸ್ವಚ್ಛತೆಗೆ ಶಾಶ್ವತ ವ್ಯವಸ್ಥೆ: ಸಿಇಒ ಪ್ರಸನ್ನ

ಉಡುಪಿ: ಜಿಲ್ಲೆಯ ಎಲ್ಲಾ ಕಡಲತೀರಗಳನ್ನು ಪ್ರತಿನಿತ್ಯ ಸ್ವಚ್ಛ ಮತ್ತು ಸುಂದರವಾಗಿ ಇರುವಂತೆ ಮಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಶಾಶ್ವತ ವ್ಯವಸ್ಥೆಯೊಂದನ್ನು ರೂಪಿಸುವಂತೆ ಕಡಲತೀರ ಮತ್ತು ನದಿ ತೀರಗಳ ವ್ಯಾಪ್ತಿಯ ಪಂಚಾಯತ್ ಅಭಿವೃಧ್ದಿ ಅಧಿಕಾರಿ(ಪಿಡಿಒ)ಗಳಿಗೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಎಚ್. ಸೂಚಿಸಿದ್ದಾರೆ.

ಶನಿವಾರ ಮಣಿಪಾಲದ ಜಿಪಂ ಸಭಾಂಗಣದಲ್ಲಿ, ಜಿಲ್ಲೆಯ ಕಡಲತೀರಗಳಲ್ಲಿ ತ್ಯಾಜ್ಯ ನಿರ್ವಹಣೆಯನ್ನು  ಸಮರ್ಪಕವಾಗಿ ಮಾಡುವ ಕುರಿತಂತೆ  ಗ್ರಾಪಂಗಳ ಪಿಡಿಓಗಳಿಗೆ ನಡೆದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ ಒಟ್ಟು ೮೦ಕಿ.ಮೀ. ಉದ್ದದ ಕಡಲತೀರ ಪ್ರದೇಶವಿದ್ದು, ಈ ಕಡಲತೀರಗಳ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳ ಮೂಲಕ ಬೀಚ್ ನಲ್ಲಿ  ಪ್ರತಿನಿತ್ಯ ಶಾಶ್ವತ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಬೇಕು. ಈ ಬಗ್ಗೆ ಶಾಶ್ವತ ವ್ಯವಸ್ಥೆಗಳನ್ನು ರೂಪಿಸಲು ಜಿಲ್ಲಾ ಪಂಚಾಯತ್‌ನಿಂದ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಲಾಗು ವುದು ಎಂದರು.

ಗ್ರಾಮ ಪಂಚಾಯತ್ ವ್ಯಾಪ್ತಿಯ  ಕಡಲತೀರಗಳ ಸ್ವಚ್ಚತೆಯನ್ನು ಸ್ಥಳೀಯ ಸಂಜೀವಿನಿ ಸ್ವಸಹಾಯ ಸಂಘಕ್ಕೆ ನೀಡುವ ಮೂಲಕ ಬೀಚ್‌ನಲ್ಲಿ ಸ್ವಚ್ಛತೆ ಕಾಪಾಡಬೇಕು. ತ್ಯಾಜ್ಯ ನಿರ್ವಹಣೆಯ ಜೊತೆಗೆ ಈ ಸಂಘದ ಮಹಿಳೆಯ ರಿಗೆ ಬೀಚ್‌ನಲ್ಲಿ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹ ಅವಕಾಶ ನೀಡಿ ಅವರಿಗೂ ಅರ್ಥಿಕ ಲಾಭ ದೊರೆಯುವಂತೆ ಮಾಡಬೇಕು. ತ್ಯಾಜ್ಯವನ್ನು ಸಮರ್ಪಕವಾಗಿ ವಿಂಗಡಿಸುವ ಕುರಿತಂತೆ ಇವರಿಗೆ ಅಗತ್ಯ ತರಬೇತಿಯನ್ನು ನೀಡಲಾಗುವುದು. ಬೀಚ್‌ಗಳಲ್ಲಿ ಹಸಿ ಮತ್ತು ಒಣಕಸಗಳನ್ನು ಹಾಕಲು ಪ್ರವಾಸೋದ್ಯಮ ಇಲಾಖೆಯಿಂದ ಅಗತ್ಯವಿರುವಷ್ಟು ಸಂಖ್ಯೆಯ ಡಸ್ಟ್ ಬಿನ್ ಗಳನ್ನು ಒದಗಿಸಲಾಗುವುದು ಎಂದರು.

ಕಡಲ ತೀರಗಳ ವ್ಯಾಪ್ತಿಯ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ತ್ಯಾಜ್ಯದಿಂದ ಆಗುವ ದುಷ್ಪರಿಣಾಮ ಗಳು ಮತ್ತು ಅದರ ಸೂಕ್ತ ನಿರ್ವಹಣೆ  ಕುರಿತಂತೆ ಜಾಗೃತಿ ಮೂಡಿಸಬೇಕು. ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರಿಗೆ ತ್ಯಾಜ್ಯ ನಿರ್ಮೂಲನೆ ಕುರಿತ ಅರಿವು ಮೂಡಿಸುವುದರ ಜೊತೆಗೆ ಗ್ರಾಮಗಳಲ್ಲಿ ಒಣಕಸ ಸಂಗ್ರಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಬೆಕು ಎಂದರು.

ಬೀಚ್‌ಗಳಲ್ಲಿ ತ್ಯಾಜ್ಯ ಹಾಕದಿರುವಂತೆ ಜಾಗೃತಿ ಮೂಡಿಸುವ ಹೋರ್ಡಿಂಗ್  ಅಳವಡಿಸಲು ಪ್ರವಾಸೋದ್ಯಮ ಇಲಾಖೆ ವತಿಯಿಂದ ಕ್ರಮ ಕೈಗೊಳ್ಳಲಾ ಗುವುದು. ಬೀಚ್‌ಗಳಲ್ಲಿ ತ್ಯಾಜ್ಯ ಬಿಸಾಡುವವರ ಕುರಿತು ನಿಗಾ ವಹಿಸುವಂತೆ ತಿಳಿಸಿದ ಅವರು, ತ್ಯಾಜ್ಯ ಎಸೆಯುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಈ ಕುರಿತಂತೆ ಪಿಡಿಓಗಳು ತಮಗೆ ನೀಡಿರುವ ಅಧಿಕಾರವನ್ನು ಸೂಕ್ತ ರೀತಿಯಲ್ಲಿ ಬಳಸುವಂತೆ ತಿಳಿಸಿದರು.

ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರು ಸಮುದ್ರದಲ್ಲಿ ಯಾವುದೇ ತ್ಯಾಜ್ಯವನ್ನು ಬಿಸಾಡದಂತೆ ಮತ್ತು ಹರಿದ ಮೀನಿನ ಬಲೆ ಸೇರಿದಂತೆ  ಅನುಪಯುಕ್ತ ವಸ್ತುಗಳನ್ನು ದಡಕ್ಕೆ ತಂದು ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಮೀನುಗಾರಿಕಾ ಇಲಾಖೆ ಮೂಲಕ ಜಾಗೃತಿ ಮೂಡಿಸಲಾ ಗುವುದು ಎಂದು ಪ್ರಸನ್ನ ತಿಳಿಸಿದರು.

ಸ್ವಚ್ಛ ಸಮುದ್ರ ತೀರದಿಂದ ಸಮುದ್ರಕ್ಕೆ ಸೇರುವ ತ್ಯಾಜ್ಯ ಇಲ್ಲದಂತಾಗಿ ಅಮೆಗಳು ಸೇರಿದಂತೆ ಅನೇಕ ಅಪರೂಪದ ವೈವಿಧ್ಯಮಯ ಜಲಚರಗಳ ಸಂತತಿ ವೃದ್ಧಿಯಾಗಲಿದೆ ಹಾಗೂ ಜಿಲ್ಲೆಯ ಪರಿಸರ ಸೂಕ್ಷ್ಮ ವಲಯದ ಉಳಿವು ಮತ್ತು ಬೆಳವಣಿಗೆ ಸಹ ಸಾಧ್ಯವಾಗಲಿದೆ ಎಂದರು.

ಜಿಲ್ಲೆಯಲ್ಲಿ 15 ದಿನಗಳ ಒಳಗೆ ಪೈಲಟ್ ಯೋಜನೆಯಾಗಿ ಯಾವುದಾ ದರೊಂದು ಕಡಲತೀರದ ಗ್ರಾಮ ಪಂಚಾಯತ್‌ನಲ್ಲಿ ತ್ಯಾಜ್ಯ ನಿರ್ವಹಣೆಗಾಗಿ ಶಾಶ್ವತ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಸನ್ನ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕ್ಲಿಫರ್ಡ್ ಲೋಬೋ, ವಿವಿಧ ಸ್ವಯ ಸೇವಾ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಜಿಲ್ಲೆಯ ಕಡಲತೀರ ವ್ಯಾಪ್ತಿಯ ಪಿಡಿಓಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X