Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಡುಬಿದ್ರಿ; ಕಂಚಿನಡ್ಕ ಮಿಂಚಿನಬಾವಿ ತಗಡು...

ಪಡುಬಿದ್ರಿ; ಕಂಚಿನಡ್ಕ ಮಿಂಚಿನಬಾವಿ ತಗಡು ಚಪ್ಪರ ವಿವಾದ : ಆಕ್ಷೇಪ ಹಿಂಪಡೆದ ಕುಟುಂಬಗಳು

ವಾರ್ತಾಭಾರತಿವಾರ್ತಾಭಾರತಿ4 Jun 2022 10:20 PM IST
share
ಪಡುಬಿದ್ರಿ; ಕಂಚಿನಡ್ಕ ಮಿಂಚಿನಬಾವಿ ತಗಡು ಚಪ್ಪರ ವಿವಾದ : ಆಕ್ಷೇಪ ಹಿಂಪಡೆದ ಕುಟುಂಬಗಳು

ಪಡುಬಿದ್ರಿ: ಇಲ್ಲಿನ ಕಂಚಿನಡ್ಕದ ಮಿಂಚಿನಬಾವಿ ಶ್ರೀ ಕೋಡ್ದಬ್ಬು ದೇವಸ್ಥಾನದ ಎದುರಲ್ಲಿ ಪಂಚಾಯತ್ ರಸ್ತೆಗೆ ತಗಡು ಚಪ್ಪರ ನಿರ್ಮಾಣಕ್ಕೆ ಸಂಬಂಧಿಸಿ ಸಮೀಪದಲ್ಲಿರುವ ಎರಡು ಮನೆಯವರು ಪಡುಬಿದ್ರಿ ಗ್ರಾಮ ಪಂಚಾಯತ್‍ಗೆ ಈ ಹಿಂದೆ ನೀಡಿರುವ ಆಕ್ಷೇಪಣೆಗಳನ್ನು ವಾಪಾಸು ಪಡೆದಿದ್ದಾರೆ.

ಮಿಂಚಿನಬಾವಿ ದೇವಸ್ಥಾನಕ್ಕೆ ಸಂಬಂಧಿಸಿ ತಗಡು ಚಪ್ಪರ ನಿರ್ಮಾಣಕ್ಕೆ ಸಮೀಪದಲ್ಲಿರುವ ಎರಡು ಕುಟುಂಬ ಸಾರ್ವಜನಿಕ ರಸ್ತೆಯಲ್ಲಿ ತಗಡು ಚಪ್ಪರ ನಿರ್ಮಾಣಕ್ಕೆ ಪಂಚಾಯಿತಿಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಆ ಬಳಿಕ ಕಂಚಿನಡ್ಕದಲ್ಲಿ ಉಂಟಾಗಿರುವ ಬೆಳವಣಿಗೆ ಸಂಬಂಧಿಸಿ ಶನಿವಾರ ಮಿಂಚಿನ ಬಾವಿ ಕ್ಷೇತ್ರದ ಬಳಿಯ ನಿವಾಸಿಗಳಾದ ಕಲಂದರ್ ಹಾಗೂ ರೆಹಾನಾ ಅವರು  ತಗಡು ಚಪ್ಪರ ನಿರ್ಮಾಣದ ಕುರಿತಾಗಿ ನೀಡಿರುವ ಆಕ್ಷೇಪಣೆಗಳನ್ನು ವಾಪಾಸು ಪಡೆಯುವ ಮನವಿಯನ್ನು ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ರವಿ ಶೆಟ್ಟಿ ಅವರಿಗೆ ನೀಡಿದ್ದಾರೆ.

ಆಕ್ಷೇಪ ಹಿಂಪಡೆದ ನಂತರ ಮಾತನಾಡಿದ ರೆಹಾನಾ, ಈ ಕ್ಷೇತ್ರದ  ಬಳಿಯ ನಿವಾಸಿಗಳಾದ ನಾವು 2004ರಿಂದ ಇಂದಿನವರೆಗೂ ಸೌಹರ್ದತೆಯನ್ನು ಕಾಪಾಡಿಕೊಂಡು ಬಂದಿದ್ದೇವೆ. ದೇವಸ್ಥಾನಕ್ಕೆ ಮೇಲ್ಛಾವಣಿ ಹಾಕುವುದಕ್ಕೆ ನಮ್ಮ ಆಕ್ಷೇಪ ಏನೂ ಇಲ್ಲ. ಸಾರ್ವಜನಿಕ ಹಿತಾಸಕ್ತಿ, ಮನೆ ಮಕ್ಕಳ ಸುರಕ್ಷತೆ, ವಿಶೇಷವಾಗಿ ಆ ಪ್ರದೇಶದಲ್ಲಿ ಬೀಸುವ ಬಲವಾದ ಗಾಳಿಯ ಒತ್ತಡಗಳನ್ನು ಪರಿಗಣಿಸಿ ಹಾಗೂ ಆ ರಸ್ತೆಯಲ್ಲಿ ಸಾಗುವ ಶಾಲಾ ವಾಹನ, ಘನವಾಹನಗಳನ್ನು ಗಮನದಲ್ಲಿಟ್ಟುಕೊಂಡು ಚಪ್ಪರದ ನಿರ್ಧಾರವನ್ನು ಆಕ್ಷೇಪ ವ್ಯಕ್ತಪಡಿಸಿದ್ದೇವೆ. ಇದರಲ್ಲಿ ಮುಸ್ಲಿಂ ಸಮುದಾಯವೆಲ್ಲವನ್ನೂ ಎಳೆದು ತರಬೇಡಿ. ಸಾರ್ವಜನಿಕ ರಸ್ತೆಯಾಗಿರುವುದರಿಂದ ಪಂಚಾಯತ್ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಪಂಚಾಯತ್ ಏನು ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಅದು ಅವರಿಗೆ ಬಿಟ್ಟ ವಿಚಾರ. ನಾಳೆ ಏನಾದರೂ ಅನಾಹುತ ಆದಲ್ಲಿ ಪಂಚಾಯಿತಿ ಹೊಣೆ ಎಂದು  ರೆಹಾನಾ ಹೇಳಿದರು.

ಮನವಿಯನ್ನು ಸ್ವೀಕರಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ ಶೆಟ್ಟಿ ಪಾದೆಬೆಟ್ಟು ಅವರು, ಚಪ್ಪರದ ಕುರಿತಾಗಿ ಆಕ್ಷೇಪಣೆಗಳನ್ನು ಮಿಂಚಿನಬಾವಿ ಕೋಡ್ದಬ್ಬು ದೇವಸ್ಥಾನದ ಬಳಿಯ ನಿವಾಸಿಗಳಾದ ಕಲಂದರ್ ಹಾಗೂ ರೆಹಾನಾ ವಾಪಾಸು ಪಡೆದಿರುವುದು ಸಂತಸ ತಂದಿದೆ. ಆಕ್ಷೇಪ ಮಾಡಿದರೆ ಯಾವುದೇ ಅನುಮತಿ ಕೊಡಲು ಆಗುವುದಿಲ್ಲ. ಪರಸ್ಪರ ಅನ್ಯೋನ್ಯತೆಯಿಂದ ಎಲ್ಲರೂ ತೀರ್ಮಾಣಕ್ಕೆ ಬಂದಿದ್ದು, ಗ್ರಾಮ ಪಂಚಾಯಿತಿ ಸಂತೋಷ ಪಡುತ್ತದೆ. ಪರಸ್ಪರ ಸಹಮತದಿಂದಲೇ ತಗಡು ಚಪ್ಪರದ ನಿರ್ಮಾಣವಾಗಲಿ. ಡೋರ್ ನಂಬರ್ ಇಲ್ಲವಾದ್ದರಿಂದ ಪಂಚಾಯತ್ ಮೂಲಕ ಯಾವುದೇ ಪರವಾನಿಗೆಯನ್ನು ನೀಡಲಾಗದು. ಪಡುಬಿದ್ರಿಯಲ್ಲಿ ಈ ಹಿಂದಿನಿಂದಲೂ ಮತೀಯ ಸಾಮರಸ್ಯ, ಸೌಹಾರ್ದತೆಯನ್ನು ಕಾಪಾಡಿಕೊಂಡು ಬಂದವರು ನಾವಾಗಿದ್ದೇವೆ ಎಂದು ಹೇಳಿದರು.

ಗ್ರಾಮ ಪಂಚಾಯತ್ ಕಾರ್ಯದರ್ಶಿ ರೂಪಲತಾ, ಸದಸ್ಯರಾದ ಸಂದೇಶ್ ಶೆಟ್ಟಿ ಪಾದೆಬೆಟ್ಟು, ಶೋಭಾ ಶೆಟ್ಟಿ ಪಾದೆಬೆಟ್ಟು, ಅಬ್ದುಲ್ ರಝಾಕ್, ನಝೀರ್, ಯೂಸುಫ್ ಕಂಚಿನಡ್ಕ, ಶೆಹನಾಝ್, ಆಸ್ಮಾ, ಆಶಾಬಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X