Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು | ಕೀರ್ತಿಗಣೇಶ್ ಬಂಧನ...

ಬೆಂಗಳೂರು | ಕೀರ್ತಿಗಣೇಶ್ ಬಂಧನ ವಿರೋಧಿಸಿ ಪ್ರತಿಭಟನೆ; ಯುವಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ4 Jun 2022 11:03 PM IST
share
ಬೆಂಗಳೂರು | ಕೀರ್ತಿಗಣೇಶ್ ಬಂಧನ ವಿರೋಧಿಸಿ ಪ್ರತಿಭಟನೆ; ಯುವಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ

ಬೆಂಗಳೂರು, ಜೂ.4: ಕೇಸರಿಕರಣ ಹಾಗೂ ಕುವೆಂಪು ಅವರನ್ನು ಅವಹೇಳನಕಾರಿ ಆಗಿ ಬಿಂಬಿಸಿರುವ ಆರೋಪ ಹೊತ್ತಿರುವ ರೋಹಿತ್ ಚಕ್ರತೀರ್ಥ ಬಂಧನಕ್ಕೆ ಆಗ್ರಹಿಸಿ ಪ್ರತಿಭಟಿಸಿದ್ದ ಎನ್‍ಎಸ್‍ಯುಐ ರಾಜ್ಯಾಧ್ಯಕ್ಷ ಕೀರ್ತಿಗಣೇಶ್ ಬಂಧಿಸಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ಯುವಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶನಿವಾರ ಇಲ್ಲಿನ ಫ್ರೀಡಂ ಪಾರ್ಕ್‍ನ ಮೈದಾನದಲ್ಲಿ ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು, ಆರೆಸ್ಸೆಸ್ ಸಮವಸ್ತ್ರ ತೊಟ್ಟ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಆಗ ಮಧ್ಯ ಪ್ರವೇಶಿಸಿದ ಪೊಲೀಸರು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮುಹಮ್ಮದ್ ನಲಪಾಡ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.

ಇದಕ್ಕೂ ಮೊದಲು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿ.ವಿ.ಶ್ರೀನಿವಾಸ್, ಬಿಜೆಪಿ ಅವರು ಯಾರ ಮನೆಗೆ ಹೋಗಿ ಬೇಕಾದರೂ ಬೆಂಕಿ ಹಚ್ಚಬಹುದು. ಅವರಿಗೆ ಯಾವುದೇ ಕಾನೂನು ಇಲ್ಲ. ಆದರೆ ಕಾಂಗ್ರೆಸ್‍ನವರು ಚಡ್ಡಿ ಸುಟ್ಟಿದ್ದಕ್ಕೆ ಕಾನೂನು ಬೇಕಾ? ಎಂದು ಕೇಳಿದರು.

ಚಡ್ಡಿ ಏನು ರಾಷ್ಟ್ರಧ್ವಜವೇ, ಕೀರ್ತಿಗಣೇಶ್ ಏನು ರಾಷ್ಟ್ರಧ್ವಜ ಸುಟ್ಟಿದ್ದಾರಾ ಎಂದವರು, ಕೀರ್ತಿಗಣೇಶ್ ಬಿಡುಗಡೆ ಆಗಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟದ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮುಹಮ್ಮದ್ ನಲಪಾಡ್ ಮಾತನಾಡಿ, ಇಡೀ ಕರ್ನಾಟಕದ ಜಿಲ್ಲೆಗಳಲ್ಲಿ ಚಡ್ಡಿ ಸುಡುತ್ತೇವೆ. ಇವತ್ತು ಒಂದು ಚಡ್ಡಿ ಸುಟ್ಟಿದ್ದಕ್ಕೆ ಕೀರ್ತಿಗಣೇಶ್ ಬಂಧಿಸಿದ್ದೀರಿ. ನಾವು ಎಲ್ಲ್ಲ ಜಿಲ್ಲೆಗಳಲ್ಲಿ ಚಡ್ಡಿ ಸುಡುತ್ತೇವೆ ಆಗ ಎಷ್ಟು ಜನರನ್ನು ಬಂಧಿಸುತ್ತೀರಿ ನೋಡೋಣ ಎಂದರು.

ಅಲ್ಲದೆ, ಈ ಚಡ್ಡಿಯಲ್ಲಿ ಅಷ್ಟೊಂದು ಶಕ್ತಿ ಇದೆಯಾ ಎಂದ ಅವರು, ಈ ಚಡ್ಡಿಯೂ ಮೊದಲು ಮುಸ್ಲಿಮರನ್ನು ಹೊಡೆಯಿತು, ಆಮೇಲೆ ದಲಿತರನ್ನು, ಕ್ರೈಸ್ತ ಸಮಾಜವನ್ನು ಹೊಡೆದರು. ಇವರು ಬಸವಣ್ಣನ, ಕುವೆಂಪು ಅವರನ್ನು ಸಹ ಬಿಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X