Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವರ್ತೂರು ಮೇಲ್ಸೇತುವೆ ಕೈಬಿಡಲು ಅಭಿಯಾನ

ವರ್ತೂರು ಮೇಲ್ಸೇತುವೆ ಕೈಬಿಡಲು ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ4 Jun 2022 11:12 PM IST
share

ಬೆಂಗಳೂರು, ಜೂ.4: ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಅನಾನುಕೂಲವಾಗುತ್ತಿರುವ ವರ್ತೂರು ಮೇಲ್ಸೇತುವೆ ಯೋಜನೆಯನ್ನು ಕೈಬಿಡಬೇಕು. ಆದ್ದರಿಂದ `ನಮ್ಮ ಊರು ನಮ್ಮ ಹಕ್ಕು' ಎಂಬ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ವರ್ತೂರು ನಾಗರಿಕ ಹಿತರಕ್ಷಣಾ ವೇದಿಕೆ ಒತ್ತಾಯಿಸಿತು.

ಶನಿವಾರ ಪ್ರೆಸ್‍ಕ್ಲಬ್‍ನಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಜಗದೀಶ್ ರೆಡ್ಡಿ ಅವರು, ಮಹದೇವಪುರ ವಿಧಾನಸಭಾ ಕ್ಷೇತ್ರದ ವರ್ತೂರಿನ ಕೆರೆ ಕೋಡಿ ಭಾಗದಿಂದ ವರ್ತೂರಿನ ವಿಶಾಲ್ ಮಾರ್ಟ್‍ವರೆಗೆ ನಿರ್ಮಿಸುವ ಉದ್ದೇಶಿಸಿರುವ 482 ಕೋಟಿ ರೂಪಾಯಿ ಮೊತ್ತದ ಎಲಿವೇಟೆಡ್ ಕಾರಿಡಾರ್ ಯೋಜನೆಯಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದರು.

ವೇದಿಕೆಯ ಮುಖಂಡ ಮಧುಸೂದನ್ ವರ್ತೂರು ಅವರು ಮಾತನಾಡಿ, ಈ ಮೇಲ್ಸೇತುವೆಯಿಂದ ವರ್ತೂರಿನ ಜನರ ವ್ಯಾಪಾರ, ವಹಿವಾಟು, ದೈನಂದಿನ ಬದುಕಿಗೆ ತೀವ್ರ ತೊಂದರೆಯಾಗಲಿದೆ. ತಲತಲಾಂತರದಿಂದ ನಡೆಸಿಕೊಂಡು ಬರುತ್ತಿರುವ ರಥೋತ್ಸವ, ಕರಗ ಮತ್ತಿತರ ಧಾರ್ಮಿಕ ಭಾವನೆಗಳ ಮೇಲೆ ಪ್ರಹಾರ ಮಾಡಿದಂತಾಗುತ್ತದೆ. ಆದ್ದರಿಂದ ಜನವಿರೋಧಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಕೈಬಿಟ್ಟು ಆದಷ್ಟು ಮಟ್ಟಿಗೆ ರಸ್ತೆ ಅಗಲೀಕರಣದಂತಹ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಮೇಲ್ಸೇತುವೆ ನಿರ್ಮಾಣದಿಂದ ಅಲ್ಲಿನ ಜಂಕ್ಷನ್‍ಗಳಲ್ಲಿ ಉಸಿರುಗಟ್ಟಿದ ವಾತಾವರಣ ನಿರ್ಮಾಣವಾಗಲಿದ್ದು, ವರ್ತೂರು, ಸೊರಹುಣಸೆ, ಬಳಗೆರೆ, ವಾಲೇಪುರ, ಮಧುರಾನಗರ, ಹಲಸಹಳ್ಳಿ, ಕತ್ರಿಗುಪ್ಪೆ ಗ್ರಾಮಗಳು ಆರ್ಥಿಕವಾಗಿ ಶಾಶ್ವತವಾಗಿ ತೊಂದರೆಗೆ ಒಳಗಾಗಲಿವೆ. ಮೆಟ್ರೋದಂತಹ ಪರಿಸರ ಸ್ನೇಹಿ ಸಮೂಹ ಸಾರಿಗೆ ವ್ಯವಸ್ಥೆಯಿಂದ ವಂಚಿತರಾಗುತ್ತೇವೆ. ಹೀಗಾಗಿ ಸರಕಾರವು ಗ್ರಾಮಸ್ಥರ ಮನವಿಗೆ ಮನ್ನಣೆ ನೀಡಿ ಜನಪರವಾದ ನಿರ್ಧಾರಗಳನ್ನು ಕೈಗೊಳ್ಳಬೇಕು. 

-ಮಧುಸೂದನ್, ವರ್ತೂರು ನಾಗರಿಕ ಹಿತರಕ್ಷಣಾ ವೇದಿಕೆಯ ಮುಖಂಡ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X