ಯುವಕ ನಾಪತ್ತೆ
ಉಪ್ಪಿನಂಗಡಿ: ಮನೆಯಿಂದ ಕೆಲಸಕ್ಕೆಂದು ತೆರಳಿದ ಯುವಕನೋರ್ವ ನಾಪತ್ತೆಯಾದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗೋಳಿತೊಟ್ಟು ಗ್ರಾಮದ ಅಂಬೂಡೇಲು ನಿವಾಸಿ ವರ್ಗೀಸ್ (29) ನಾಪತ್ತೆಯಾದ ವ್ಯಕ್ತಿ. ಈತ ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ವ್ಯವಸ್ಥಾಪಕನಾಗಿದ್ದು, ಕಳೆದ ಮೇ 31ರಂದು ಮನೆಯಿಂದ ಹೊರಟು ಈ ತನಕ ಮನೆಗೆ ಬಾರದೇ ನಾಪತ್ತೆಯಾಗಿದ್ದಾನೆ ಎಂದು ಈತನ ಸಹೋದರ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ.
ಈತನ ಪತ್ತೆಯಾದಲ್ಲಿ ಉಪ್ಪಿನಂಗಡಿ ಠಾಣೆ (08251- 251055)ಯನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟನೆ ತಿಳಿಸಿದೆ.
Next Story