ನೂಪುರ್ ಶರ್ಮಾಗೆ ಕೊಲೆ ಬೆದರಿಕೆ: ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಿದ ದಿಲ್ಲಿ ಪೊಲೀಸರು
![ನೂಪುರ್ ಶರ್ಮಾಗೆ ಕೊಲೆ ಬೆದರಿಕೆ: ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಿದ ದಿಲ್ಲಿ ಪೊಲೀಸರು ನೂಪುರ್ ಶರ್ಮಾಗೆ ಕೊಲೆ ಬೆದರಿಕೆ: ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಿದ ದಿಲ್ಲಿ ಪೊಲೀಸರು](https://www.varthabharati.in/sites/default/files/images/articles/2022/06/6/337824-1654510783.jpg)
Photo: Facebook/Nupur Sharma
ಹೊಸದಿಲ್ಲಿ: ಕಳೆದ ತಿಂಗಳು ದೂರದರ್ಶನದ ಸುದ್ದಿ ಚರ್ಚೆಯ ಸಂದರ್ಭದಲ್ಲಿ ಪ್ರವಾದಿ ಮುಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಬೆದರಿಕೆ ಹಾಗೂ ಕಿರುಕುಳ ನೀಡಿದ ಆರೋಪದ ಮೇಲೆ ದಿಲ್ಲಿ ಪೊಲೀಸ್ ಸ್ಪೆಷಲ್ ಸೆಲ್ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿದೆ.
ಭಾರತೀಯ ದಂಡ ಸಂಹಿತೆಯ (ಐಪಿಸಿ) ಕ್ರಿಮಿನಲ್ ಬೆದರಿಕೆ, ಮಹಿಳೆಯ ನಮ್ರತೆಗೆ ಅವಮಾನ ಹಾಗೂ ಐಟಿ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ವಿಶೇಷ ಸೆಲ್ನ ಸೈಬರ್ ಸೆಲ್ ಘಟಕದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.,
"ನಾವು ತನಿಖೆಯನ್ನು ಆರಂಭಿಸಿದ್ದೇವೆ ಮತ್ತು ಶರ್ಮಾ ಅವರ ವೀಡಿಯೊದಲ್ಲಿ ಅಪರಿಚಿತ ವ್ಯಕ್ತಿಗಳು ಪೋಸ್ಟ್ ಮಾಡಿದ ಟ್ವೀಟ್ಗಳು ಹಾಗೂ ಕಾಮೆಂಟ್ಗಳನ್ನು ಪರಿಶೀಲಿಸುತ್ತಿದ್ದೇವೆ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story