ಜೂ.14ರಿಂದ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ
ಮಂಗಳೂರು : ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಮತ್ತಿತರ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಅಥವಾ ನೌಕರರ ವಿರುದ್ದ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜೂ.೧೪ರಿಂದ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಪ್ರವಾಸ ಕೈಗೊಂಡಿದ್ದಾರೆ.
ಜೂ.೧೪ರಂದು ಪೂ.೧೧ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಮುಲ್ಕಿ ನಗರದ ಸಮುದಾಯ ಭವನದಲ್ಲಿ, ಜೂ.೧೬ರ ಪೂ.೧೧ರಿಂದ ಮಧ್ಯಾಹ್ನ ೧ರವರೆಗೆ ಸುಳ್ಯ ತಾಲೂಕಿನ ತಹಶೀಲ್ದಾರರ ಕಚೇರಿಯಲ್ಲಿ, ಜೂ.೨೧ರ ಪೂ.೧೧ ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರರ ಕಚೇರಿಯಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story