ಪ್ರವಾದಿ (ಸ) ವಿರುದ್ಧ ಹೇಳಿಕೆ ನೀಡಿದ ಬಿಜೆಪಿ ವಕ್ತಾರರ ಕ್ರಮ ಖಂಡನೀಯ: ಎಸ್.ವೈ.ಎಸ್
ಮಂಗಳೂರು : ಪ್ರವಾದಿ ಮುಹಮ್ಮದ್ (ಸ) ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ವಕ್ತಾರರ ಕ್ರಮವು ಖಂಡನೀಯ. ಅವರನ್ನು ಪಕ್ಷದಿಂದ ಅಮಾನತು ಮಾಡಿದ್ದಾಗಿ ಬಿಜೆಪಿ ಹೇಳಿಕೊಂಡಿದೆ, ಇದರಿಂದ ಯಾವುದೇ ಪ್ರಯೋಜನ ಇಲ್ಲ. ಅವರನ್ನು ಶೀಘ್ರವಾಗಿ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರ ಮುಂದೆ ಬರಬೇಕೆಂದು ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಆಗ್ರಹಿಸಿದೆ.
ಇಂತಹ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿವೆ. ಇಂತಹ ಮತಾಂಧ ವ್ಯಕ್ತಿಗಳಿಂದ ಇಡೀ ವಿಶ್ವದಲ್ಲೇ ಭಾರತದ ಕೀರ್ತಿಗೆ ಹಾನಿಯಾಗಿದೆ. ಹಲವು ರಾಷ್ಟ್ರಗಳು ಇದನ್ನು ತೀವ್ರವಾಗಿ ಖಂಡಿಸಿವೆ. ವಿಕೃತ ಮನಸ್ಸಿನವ ರನ್ನು ಜೈಲಿಗೆ ಅಟ್ಟುವ ಮೂಲಕ ಕೇಂದ್ರ ಸರ್ಕಾರ ತನ್ನ ಬದ್ಧತೆಯನ್ಮು ಪ್ರದರ್ಶಿಸಬೇಕೆಂದು ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘದ ರಾಜ್ಯಾಧ್ಯಕ್ಷ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story