ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷರಾಗಿ ಪಿ.ರವಿಕುಮಾರ್ ನೇಮಕ

ಪಿ.ರವಿಕುಮಾರ್
ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷರಾಗಿ ರಾಜ್ಯ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರನ್ನು ನೇಮಕಗೊಳಿಸಲಾಗಿದೆ.
ಮುಂದಿನ ಐದು ವರ್ಷದ ಅವಧಿಗೆ ಪಿ.ರವಿಕುಮಾರ್ ಆಯೋಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ರವಿಕುಮಾರ್ ಅವರು ಸೇವೆಯಲ್ಲಿ ಇದ್ದಾಗಲೇ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದರು. ಆ ಸಂದರ್ಭ ಅವರು ಆಯೋಗದ ಅಧ್ಯಕ್ಷರ ನೇಮಕ ಸಮಿತಿ ಸದಸ್ಯರೂ ಆಗಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ರವಿಕುಮಾರ್ ನೇಮಕ ಸಮಿತಿಗೆ ರಾಜೀನಾಮೆ ಸಲ್ಲಿಸಿದ್ದರು.
Next Story





