ಬೆಂಗಳೂರಿನಲ್ಲಿ ವಿಮಾನ ನಿಲ್ದಾಣ ಮಾದರಿಯ ಹೊಸ ರೈಲ್ವೇ ಟರ್ಮಿನಲ್ ಕಾರ್ಯಾರಂಭ

ಬೆಂಗಳೂರು: 314 ಕೋಟಿ ರೂ. ವೆಚ್ಚದಲ್ಲಿ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಮಾದರಿಯಯಲ್ಲಿ ಬೈಯಪ್ಪನಹಳ್ಳಿಯಲ್ಲಿ ನಿರ್ಮಿಸಲಾದ ರೈಲು ನಿಲ್ದಾಣ ನಿರ್ಮಾಣವಾದ ಸುಮಾರು ಒಂದು ವರ್ಷದ ಬಳಿಕ ರೈಲು ಸಂಚಾರ ಪ್ರಾರಂಭಗೊಂಡಿದೆ.
ನಗರದ ಮೆಜೆಸ್ಟಿಕ್, ಯಶವಂತಪುರ ನಿಲ್ದಾಣಗಳ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ನೈಋತ್ಯ ರೈಲ್ವೆ ಬೈಯಪ್ಪನಹಳ್ಳಿ ಬಳಿಯ ಬಾನಸವಾಡಿಯಲ್ಲಿ ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿರ್ಮಾಣ ಮಾಡಿದೆ. ಈ ಟರ್ಮಿನಲ್‌ನಿಂದ 50 ಜೋಡಿ ರೈಲುಗಳನ್ನು ಓಡಿಸುವ ಗುರಿಯನ್ನು ರೈಲ್ವೆ ಇಲಾಖೆ ಹೊಂದಿದೆ.
ಹೊಸ ಟರ್ಮಿನಲ್ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ 1.5 ಕಿ.ಮೀ, ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಿಂದ 1.2 ಕಿ.ಮೀ ದೂರವಿದ್ದು, ಮೆಟ್ರೋ ನಿಲ್ದಾಣ, ಮೆಜೆಸ್ಟಿಕ್, ಕೆಆರ್ ಪುರದಿಂದ ಬಿಎಂಟಿಸಿ ಬಸ್ ಸೇವೆ ಕಲ್ಪಿಸಲಾಗಿದೆ.
ನಿಲ್ದಾಣ ಇನ್ನೂ ಅಧಿಕೃತವಾಗಿ ಉದ್ಘಾಟನೆಯಾಗಿಲ್ಲ: ಪ್ರಧಾನಿ ನರೇಂದ್ರ ಮೋದಿ ರೈಲು ನಿಲ್ದಾಣ ಉದ್ಘಾಟನೆ ಮಾಡಲಿದ್ದು, ದಿನಾಂಕ ನಿಗದಿಯಾಗಿರಲಿಲ್ಲ.ಆದರೆ, ಮುಂದಿನ ದಿನಗಳಲ್ಲಿ ಅಧಿಕೃತ ಉದ್ಘಾಟನೆ ಮಾಡಲಿದ್ದು, (ಜೂ.6) ಸೋಮವಾರ ಸಂಜೆ 7ಕ್ಕೆ ಹೊರಡುವ ಬಾಣಸವಾಡಿ-ಎರ್ನಾಕುಲಂ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್(ರೈಲು ಸಂಖ್ಯೆ 12684) ರೈಲು ನೂತನ ಟರ್ಮಿನಲ್‌ನಿಂದ ಕಾರ್ಯಾಚರಣೆ ಮಾಡಿದೆ.







