ರಾಜ್ಯದ ಆರೆಸ್ಸೆಸ್ ಕಚೇರಿಗಳಿಗೆ ಹೆಚ್ಚಿನ ಭದ್ರತೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ, ಜೂ, 07: ಆರೆಸ್ಸೆಸ್ ಕಚೇರಿಗಳ ಮೇಲೆ ದಾಳಿ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಎಲ್ಲಾ ಆರೆಸ್ಸೆಸ್ ಕಚೇರಿಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಎರಡು ಹಾಗೂ ಕರ್ನಾಟಕದ ನಾಲ್ಕು ಆರ್ ಎಸ್ ಎಸ್ ಕಚೇರಿಗಳನ್ನು ದ್ವಂಸ ಗೊಳಿಸುವುದಾಗಿ ವಾಟ್ಸಪ್ ಸಂದೇಶವೊಂದನ್ನು ತಮಿಳು ನಾಡಿನಿಂದ ವ್ಯಕ್ತಿಯೊಬ್ಬ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರಿಗೆ ಕಳಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲು ಮಾಡಲಾಗಿದೆ ಎಂದು ತಿಳಿಸಿದರು.
ಈ ಸಂಬಂಧ, ವಾಟ್ಸಪ್ ಸಂದೇಶ ಕಳಿಸಿದ ವ್ಯಕ್ತಿಯನ್ನು ಗುರುತಿಸಲಾಗಿದ್ದು, ಆರೋಪಿತ ಸೆಂಥಿಲ್ ಎಂಬವನನ್ನು ತಮಿಳು ನಾಡಿನಲ್ಲಿ ಬಂಧಿಸಲಾಗಿದೆ ಎಂದರು.
ಈ ರೀತಿಯಾಗಿ ಬೆದರಿಕೆ ಕರೆ ಅಥವಾ ಸಂದೇಶಗಳನ್ನು ಕಳಿಸುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
Next Story





