ತನ್ನ ಕ್ಷೇತ್ರದ ವ್ಯಾಪ್ತಿಯ ಎಲ್ಲ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಶುಲ್ಕ ಪಾವತಿಸಿದ ಶಾಸಕ ಝಮೀರ್ ಅಹ್ಮದ್

ಬೆಂಗಳೂರು, ಜೂ.7: ಸುಪ್ರೀಂಕೋರ್ಟಿನ ತೀರ್ಪಿನ ಅನ್ವಯ ಎಲ್ಲ ದೇವಸ್ಥಾನ, ಮಸೀದಿ, ಚರ್ಚುಗಳಲ್ಲಿ ಧ್ವನಿವರ್ಧಕ ಬಳಸಲು ಪರವಾನಿಗೆ ಪಡೆಯಲು ಸರಕಾರದಿಂದ ಶುಲ್ಕ ನಿಗದಿಗೊಳಿಸಲಾಗಿದ್ದು, ಅದರಂತೆ ಶಾಸಕ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಚಾಮರಾಜಪೇಟೆ ವಿಧಾನಸಭಾ *ಕ್ಷೇತ್ರದ ವ್ಯಾಪ್ತಿಯಲ್ಲಿನ ಎಲ್ಲ ಧಾರ್ಮಿಕ ಸ್ಥಳಗಳಿಗೆ ತಮ್ಮ ಸ್ವಂತ ಖರ್ಚಿನಿಂದ* ಶುಲ್ಕ ಪಾವತಿಸಿದ್ದಾರೆ.
ಮಂಗಳವಾರ ಚಾಮರಾಜಪೇಟೆಯ ರಾಯಪುರಂನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲ ಮಸೀದಿ, ಚರ್ಚುಗಳು ಹಾಗೂ ದೇವಸ್ಥಾನಗಳ ಪ್ರಮುಖರನ್ನು ಆಹ್ವಾನಿಸಿ ಧ್ವನಿವರ್ಧಕ ಬಳಕೆಗೆ ಒದಗಿಸಲಾಗಿರುವ ಪರವಾನಿಗೆಯನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಅಯ್ಯೂಬ್ ಖಾನ್, ಸಿ.ಆರ್. ರವಿಪ್ರಸಾದ್, ಎಂ.ಶಾಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Next Story





