Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತೇಪೆ ಕೆಲಸ ಬೇಡ, ಸಂಪೂರ್ಣವಾಗಿ...

ತೇಪೆ ಕೆಲಸ ಬೇಡ, ಸಂಪೂರ್ಣವಾಗಿ ಪರಿಷ್ಕರಣೆ ತಿರಸ್ಕರಿಸಿ: ಕರವೇ ಅದ್ಯಕ್ಷ ಟಿ.ಎ.ನಾರಾಯಣಗೌಡ

ವಾರ್ತಾಭಾರತಿವಾರ್ತಾಭಾರತಿ7 Jun 2022 5:40 PM IST
share
ತೇಪೆ ಕೆಲಸ ಬೇಡ, ಸಂಪೂರ್ಣವಾಗಿ ಪರಿಷ್ಕರಣೆ ತಿರಸ್ಕರಿಸಿ: ಕರವೇ ಅದ್ಯಕ್ಷ ಟಿ.ಎ.ನಾರಾಯಣಗೌಡ

ಬೆಂಗಳೂರು, ಜೂ. 7: ‘ರಾಜ್ಯ ಸರಕಾರ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪಠ್ಯಕ್ಕೆ ತಂದಿರುವ ಪರಿಷ್ಕರಣೆಗಳನ್ನು ಕೂಡಲೇ ಕೈಬಿಟ್ಟು ಹಿಂದಿನ ವರ್ಷದ ಪಠ್ಯಪುಸ್ತಕಗಳನ್ನೇ ನೀಡಬೇಕು. ಒಬ್ಬ ಕನ್ನಡ ವಿರೋಧಿಯು ಪರಿಷ್ಕರಣೆ ಮಾಡಿರುವ ಪಠ್ಯದಲ್ಲಿ ನೂರೆಂಟು ಹುಳುಕುಗಳಿವೆ. ಅವುಗಳನ್ನು ಕನ್ನಡದ ಮಕ್ಕಳು ಓದುವ ಅವಶ್ಯಕತೆ ಇಲ್ಲ' ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

ಮಂಗಳವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ‘ಸರಕಾರ ಕೆಲವು ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ ತಿದ್ದುಪಡಿ ಮಾಡುವ ಭರವಸೆ ನೀಡಿದೆ. ಆದರೆ, ಇಡೀ ಪರಿಷ್ಕರಣೆಯೇ ವಿಕೃತವಾಗಿದೆ. ಕನ್ನಡ ಬಾವುಟವಿದ್ದ ಚಿತ್ರವನ್ನು ತೆಗೆಯಲಾಗಿದೆ, ಕುವೆಂಪು, ದೇವನೂರ ಅವರ ಭಾವಚಿತ್ರಗಳನ್ನು ಕುತ್ಸಿತ ಮನಸ್ಥಿತಿಯಿಂದ ತೆಗೆಯಲಾಗಿದೆ. ಕನ್ನಡ ರಾಜ್ಯೋತ್ಸವದ ಪಾಠವನ್ನೇ ಕಿತ್ತುಹಾಕಲಾಗಿದೆ' ಎಂದು ಆರೋಪಿಸಿದ್ದಾರೆ.

‘ಕನ್ನಡ ನೆಲದ ವೀರರಾಣಿ ಅಬ್ಬಕ್ಕನ ಚರಿತ್ರೆಯನ್ನು ತೆಗೆದುಹಾಕಲಾಗಿದೆ. ಕನಕದಾಸರು, ಪುರಂದರ ದಾಸರು, ಶಿಶುನಾಳ ಶರೀಫರ ಮತ್ತು ಇತರ ಭಕ್ತಪಂಥದ ಮಹಾನುಭಾವರ ಪರಿಚಯವಿದ್ದ ಲೇಖನ ತೆಗೆಯಲಾಗಿದೆ. ಬಸವಣ್ಣನವರ ಚರಿತ್ರೆ ವಿರೂಪಗೊಳಿಸಲಾಗಿದೆ, ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಬಳಸಿದ್ದ ‘ಸಂವಿಧಾನಶಿಲ್ಪಿ' ಎಂಬ ಪದವನ್ನು ಕಿತ್ತುಹಾಕಲಾಗಿದೆ' ಎಂದು ಅವರು ಹೇಳಿದ್ದಾರೆ.

‘ಇಷ್ಟು ಸಾಲದು ಎಂಬಂತೆ ಆಡಿಸು ನೋಡು ಬೀಳಿಸಿ ನೋಡು ಎಂಬ ಚಿ.ಉದಯಶಂಕರ್ ಅವರ ಕವಿತೆಯನ್ನು ಬಳಸಿ, ಆರ್.ಎನ್.ಜಯಗೋಪಾಲ್ ಅವರ ಹೆಸರನ್ನು ಬಳಸಲಾಗಿದೆ. ಪರಿಷ್ಕರಣಾ ಸಮಿತಿಯವರ ಸ್ನೇಹಿತರೆಂಬ ಕಾರಣಕ್ಕೆ ವಿರೂಪಗೊಂಡ ಕೃತಿಚೌರ್ಯದ ಪದ್ಯ ಬಳಸಲಾಗಿದೆ. ಪಿ.ಲಂಕೇಶ್, ಸಾ.ರಾ.ಅಬೂಬಕರ್ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ನಾಡಿನ ಪ್ರಖ್ಯಾತ ಸಾಹಿತಿಗಳು, ಕವಿಗಳ ಲೇಖನ, ಪದ್ಯಗಳನ್ನು ಯಾವ ಕಾರಣವನ್ನೂ ಒದಗಿಸದೆ ಕಿತ್ತುಹಾಕಲಾಗಿದೆ. ಕನ್ನಡಿಗರಿಗೆ, ಕನ್ನಡ ಸಂಸ್ಕೃತಿಗೆ ಯಾವ ಸಂಬಂಧವೂ ಇಲ್ಲದ ಲೇಖಕರಿಗೆ ಮಣೆ ಹಾಕಲಾಗಿದೆ. ಕನ್ನಡಿಗರ ಇತಿಹಾಸವನ್ನು ಕುಬ್ಜಗೊಳಿಸುವ ಪ್ರಯತ್ನ ನಡೆದಿದೆ' ಎಂದು ನಾರಾಯಣಗೌಡ ಟೀಕಿಸಿದ್ದಾರೆ.

‘ಇಷ್ಟೆಲ್ಲ ಇದ್ದ ಮೇಲೆ, ಈ ಪರಿಷ್ಕರಣೆಗಳನ್ನು ಇಟ್ಟುಕೊಳ್ಳುವುದರಲ್ಲಿ ಯಾವ ಅರ್ಥವೂ ಇಲ್ಲ. ಎಷ್ಟು ತೇಪೆ ಹಾಕಿದರೂ ಅದರಿಂದ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ತೇಪೆ ಕೆಲಸ ಕೈಬಿಟ್ಟು ಇಡಿಯಾಗಿ ಪಠ್ಯ ಪರಿಷ್ಕರಣೆಯನ್ನು ಸರಕಾರ ತಿರಸ್ಕರಿಸಬೇಕು. ತಡಮಾಡದೇ ಈ ವರ್ಷ ವಿದ್ಯಾರ್ಥಿಗಳಿಗೆ ಹಳೆಯ ಪಠ್ಯವನ್ನೇ ನೀಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿವೇಕವುಳ್ಳವರು, ವಿಚಾರಶೀಲರು. ರಾಜ್ಯದ ಜನರು ಒಂದು ಧ್ವನಿಯಲ್ಲಿ ಈ ತಿರುಚಿದ ಪಠ್ಯವನ್ನು ವಿರೋಧಿಸುತ್ತಿದ್ದಾರೆ. ಜನರ ಧ್ವನಿಗೆ ಬೆಲೆ ಕೊಡುವುದು ಪ್ರಜಾಪ್ರಭುತ್ವವಾದಿ ಸರಕಾರದ ಕರ್ತವ್ಯ. ಸಿಎಂ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಕೋರುತ್ತೇನೆ' ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X