ಮಂಗಳೂರು : ಬ್ಯಾರೀಸ್ ಪಬ್ಲಿಕ್ ಸ್ಕೂಲ್ ನಲ್ಲಿ ವಿಶ್ವ ಪರಿಸರ ದಿನಾಚರಣೆ

ಮಂಗಳೂರು : ಬ್ಯಾರೀಸ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗು ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಸೋಮವಾರ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಶಿಕ್ಷಕ-ರಕ್ಷಕ ಸಂಘದ ಸದಸ್ಯರಾದ ಝೈನ್ ಅವರು ಭಾಗವಹಿಸಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಖತೀಜತುಲ್ ಕುಬ್ರ ಅವರು ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ವಿವರಿಸಿದರು.
ಸ್ಥಳೀಯ ಕಾರ್ಪೊರೇಟರ್ ಸಂಧ್ಯಾ ಆಚಾರ್ಯ ಅವರೊಂದಿಗೆ ವಿದ್ಯಾರ್ಥಿಗಳು ಸೇರಿ ಲೇಡಿಹಿಲ್ ನಲ್ಲಿರುವ ಆಟೊ ರಿಕ್ಷಾ ನಿಲ್ದಾಣದ ರಸ್ತೆ ವಿಭಾಜಕದಲ್ಲಿ ಗಿಡಗಳನ್ನು ನೆಡಲಾಯಿತು. ಉರ್ವ ಠಾಣೆಯ ಪೊಲೀಸರು ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಉರ್ವ ಪೊಲೀಸ್ ಠಾಣೆಯ ಪಿಎಸ್‌ಐ ಭಾರತಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಶಿಕ್ಷಕಿಯರಾದ ವನಜಾ ಕಾರ್ಯಕ್ರಮ ನಿರೂಪಿಸಿ, ನೆಹಾ ವಂದಿಸಿದರು. ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Next Story