Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತಸ್ತೀಕ್ ಮತ್ತು ವರ್ಷಾಸನ ಅನುದಾನದ ಬಳಕೆ...

ತಸ್ತೀಕ್ ಮತ್ತು ವರ್ಷಾಸನ ಅನುದಾನದ ಬಳಕೆ ಸರಳೀಕರಣ: ಸಚಿವೆ ಶಶಿಕಲಾ ಜೊಲ್ಲೆ

ವಾರ್ತಾಭಾರತಿವಾರ್ತಾಭಾರತಿ7 Jun 2022 7:34 PM IST
share
ತಸ್ತೀಕ್ ಮತ್ತು ವರ್ಷಾಸನ ಅನುದಾನದ ಬಳಕೆ ಸರಳೀಕರಣ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು, ಜೂ.7: ತಸ್ತೀಕ್ ಮತ್ತು ವರ್ಷಾಸನ ನಿಗದಿಯಾಗಿರುವ ಸಂಸ್ಥೆಗಳಲ್ಲಿ ಸೂಸೂತ್ರವಾಗಿ ಸಕಾಲದಲ್ಲಿ ಪೂಜಾ ಕಾರ್ಯಗಳನ್ನು ನೆರವೇರಿಸಲು ಅನುಕೂಲವಾಗಲು ನೀಡಲಾಗುವ ಭತ್ತೆಗಳನ್ನು ಸಕಾಲದಲ್ಲಿ ಪಾವತಿಸಬೇಕು ಹಾಗೂ ಈ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಬೇಕು ಎನ್ನುವ ಬಹು ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. 

ತಸ್ತೀಕ್ ಮತ್ತು ವರ್ಷಾಸನ ಅನುದಾನ ವೆಚ್ಚ ಭರಿಸುವ ಪ್ರಕ್ರಿಯೆಯನ್ನು ಸರಳಗೊಳಿಸಬೇಕು. ಅಲ್ಲದೇ, ನಾಲ್ಕು ಕಂತುಗಳಲ್ಲಿ ಬಿಡುಗಡೆಯಾಗುತ್ತಿದ್ದ ತಸ್ತಿಕ್ ಹಣವನ್ನು ಎರಡು ಕಂತುಗಳಲ್ಲಿ ಬಿಡುಗಡೆಗೊಳಿಸಬೇಕು. ಹಾಗೆಯೇ, ಈ ಹಣವನ್ನು ಪಡೆಯುವಂತಹ ಪ್ರಕ್ರಿಯೆ ಸರಳಗೊಳಿಸಬೇಕು ಎನ್ನುವ ಬೇಡಿಕೆಯನ್ನ ಹಲವಾರು ಬಾರಿ ಅರ್ಚಕರು ಹಾಗೂ ಅರ್ಚಕರ ಸಂಘದ ಪದಾಧಿಕಾರಿಗಳು ಮನವಿಯನ್ನು ಸಲ್ಲಿಸಿದ್ದರು ಎಂದು ಅವರು ಹೇಳಿದ್ದಾರೆ.

ಅಲ್ಲದೆ, ರಾಜ್ಯ ಸರಕಾರ ನೀಡುವ ತಸ್ತಿಕ್ ಹಣವನ್ನು ನಂಬಿಕೊಂಡು ಪೂಜಾಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ ಬಹಳಷ್ಟು ಅರ್ಚಕರ ಜೀವನ ಸುಧಾರಿಸಬೇಕು ಎನ್ನುವ ಮಹತ್ವದ ಉದ್ದೇಶ ನಮ್ಮದಾಗಿದೆ. ಈ ಹಿನ್ನಲೆಯಲ್ಲಿ ವಾರ್ಷಿಕ 48 ಸಾವಿರ ರೂಪಾಯಿಗಳಿಂದ 60 ಸಾವಿರ ರೂಪಾಯಿಗಳಿಗೆ ಏರಿಕೆ ಮಾಡಿ ಆಯವ್ಯಯದಲ್ಲಿ ಮುಖ್ಯಮಂತ್ರಿ ಮಾಡಿದ್ದ ಘೋಷಣೆ ಈಗಾಗಲೇ ಜಾರಿಯಾಗಿದೆ ಎಂದು ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.  

ಆದರೆ, ಆ ಹಣವನ್ನು ಪಡೆಯುವ ಪ್ರಕ್ರಿಯೆ ಬಹಳ ಕ್ಲಿಷ್ಟಕರವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವಂತೆ ಮುಜರಾಯಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡಲಾಗಿತ್ತು. ಈ ಸೂಚನೆಯ ಅನ್ವಯ ಇಂದು ಸುತ್ತೋಲೆಯನ್ನು ಹೊರಡಿಸಲಾಗಿದ್ದು, 2 ಕಂತುಗಳಲ್ಲಿ ತಸ್ತೀಕ್ ಮತ್ತು ವರ್ಷಾಸನವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅವರು ಹೇಳಿದ್ದಾರೆ.

ಅಲ್ಲದೇ, ಬಿಲ್ಲುಗಳಿಗೆ ಜಿಲ್ಲಾಧಿಕಾರಿಗಳ ಮೇಲು ಸಹಿ ಪಡೆಯುವುದಕ್ಕೂ ವಿನಾಯಿತಿ ನೀಡಲಾಗಿದೆ. ತಸ್ತೀಕ್ ಮತ್ತು ವರ್ಷಾಸನ ಅನುದಾನದ ಬಿಲ್ಲುಗಳನ್ನು ತಹಶೀಲ್ದಾರ್ ಹಂತದಲ್ಲಿ ತಯಾರಿಸಿ ಜಿಲ್ಲಾಧಿಕಾರಿಗಳ ಮೇಲು ಸಹಿ ಇಲ್ಲದೇ ನೇರವಾಗಿ ಖಜಾನೆಗೆ ಸಲ್ಲಿಸುವ ಮೂಲಕ ಅನುದಾನವನ್ನು ವಿಳಂಬಕ್ಕೆ ಆಸ್ಪದವಿಲ್ಲದೇ ವಿನಿಯೋಗಿಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ತಸ್ತೀಕ್ ಮೊತ್ತ ಆಯುಕ್ತರಿಂದ ಅನುದಾನ ಬಿಡುಗಡೆ ಮಾಡಿದ 15 ದಿನಗಳ ಒಳಗಾಗಿ ಖಜಾನೆಯಿಂದ ವಿನಿಯೋಗಿಸಿಕೊಳ್ಳಲು ಇಲಾಖೆ ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಲಾಗಿದೆ ಎಂದು ಶಶಿಕಲಾ ಜೊಲ್ಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X