Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಕ್ರತೀರ್ಥ ಸಮಿತಿಯಿಂದ ಪಿಯುಸಿ ಪಠ್ಯ...

ಚಕ್ರತೀರ್ಥ ಸಮಿತಿಯಿಂದ ಪಿಯುಸಿ ಪಠ್ಯ ಪರಿಷ್ಕರಣೆ ವರದಿ ಪಡೆಯುವುದಿಲ್ಲ: ಸಚಿವ ಬಿ.ಸಿ.ನಾಗೇಶ್

ವಾರ್ತಾಭಾರತಿವಾರ್ತಾಭಾರತಿ7 Jun 2022 8:16 PM IST
share
ಚಕ್ರತೀರ್ಥ ಸಮಿತಿಯಿಂದ ಪಿಯುಸಿ ಪಠ್ಯ ಪರಿಷ್ಕರಣೆ ವರದಿ ಪಡೆಯುವುದಿಲ್ಲ: ಸಚಿವ ಬಿ.ಸಿ.ನಾಗೇಶ್

ಬೆಂಗಳೂರು, ಜೂ. 7: ‘ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ವಿಸರ್ಜನೆ ಹಿನ್ನೆಲೆಯಲ್ಲಿ ಆ ಸಮಿತಿಯಿಂದ ಪಿಯುಸಿ ಪಠ್ಯ ಪರಿಷ್ಕರಣೆ ಸಂಬಂಧ ಯಾವುದೇ ವರದಿಯನ್ನು ಪಡೆಯುವುದಿಲ್ಲ' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸ್ಪಷ್ಟಣೆ ನೀಡಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ದ್ವಿತೀಯ ಪಿಯುಸಿ ಅಧ್ಯಾಯ 4.2ರಲ್ಲಿನ ‘ಹೊಸ ಧರ್ಮಗಳ ಉದಯ' ಪಠ್ಯವನ್ನು ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಗೆ ಸೂಚಿಸಲಾಗಿತ್ತು. ಆದರೆ, ಇದೀಗ ಆ ಸಮಿತಿಯನ್ನು ಮುಖ್ಯಮಂತ್ರಿಯವರೇ ವಿಸರ್ಜನೆ ಮಾಡಿರುವುದರಿಂದ, ಅವರಿಂದ ಪಿಯುಸಿ ಪಠ್ಯ ಪರಿಷ್ಕರಣೆ ವರದಿ ಪಡೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ' ಎಂದು ತಿಳಿಸಿದರು.

‘ದ್ವಿತೀಯ ಪಿಯುಸಿಯ ಯಾವುದೇ ಪಠ್ಯ ಕ್ರಮವನ್ನು ಪರಿಷ್ಕರಣೆ ಮಾಡುವುದಿಲ್ಲ. ಈ ಹಿಂದೆ ಇರುವ ದ್ವಿತೀಯ ಪಿಯು ಪಠ್ಯ ಪುಸ್ತಕಗಳನ್ನು ಮುಂದುವರಿಸಲಾಗುವುದು. ಈ ಕುರಿತು ಯಾವುದೇ ರೀತಿಯ ಗೊಂದಲಕ್ಕೆ ಅವಕಾಶವಿಲ್ಲ' ಎಂದು ವಿವರಣೆ ನೀಡಿದ ಅವರು, ‘ಸಮಾಜ ಸುಧಾಕರ ಬಸವಣ್ಣ ವಿಚಾರದ ಬಗ್ಗೆ ಪ್ರೊ.ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ನೀಡಿದ ಪಠ್ಯವನ್ನೇ ಮುಂದುವರೆಸಲಿದ್ದೇವೆ. ಅದರಲ್ಲಿರುವ ಬಗ್ಗೆ ಯಾರಿಗೂ ಆಕ್ಷೇಪವಿಲ್ಲ' ಎಂದು ತಿಳಿಸಿದರು.

‘ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪುಸ್ತಕ ಸಮಿತಿ ನೀಡಿದ ಬಸವಣ್ಣ ಪಠ್ಯ ಮುಂದುವರೆಯಲಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪಠ್ಯ ಸೇರಿದಂತೆ ಇತರೆ ಪಠ್ಯಗಳಲ್ಲಿನ ಲೋಪದೋಷಗಳನ್ನೂ ಸರಿಪಡಿಸುತ್ತೇವೆ' ಎಂದ ಸಚಿವ ನಾಗೇಶ್, ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಬಾರದು' ಎಂದು ಕೋರಿದರು.

ಲೋಪದೋಷಗಳಿದ್ದರೆ ಸರಿಪಡಿಸುತ್ತೇವೆ: ‘ಪರಿಷ್ಕೃತ ಪಠ್ಯ ಪುಸ್ತಕಗಳನ್ನು ಸಾರ್ವಜನಿಕರ ಚರ್ಚೆಗೆ ಇಡುತ್ತೇವೆ. ಒಂದು ವೇಳೆ ಏನಾದರೂ ಲೋಪದೋಷಗಳಿವೆ ಎಂದು ಜನರು ತಿಳಿಸಿದರೆ ಅದನ್ನು ಸರಿಪಡಿಸುತ್ತೇವೆ' ಎಂದು ಸಿಎಂ ನಿವಾಸದ ಬಳಿ ಸ್ಪಷ್ಟಪಡಿಸಿದ ಸಚಿವ ಬಿ.ಸಿ.ನಾಗೇಶ್, ‘ಕರ್ನಾಟಕ ಪಠ್ಯ ಪುಸ್ತಕ ಸೊಸೈಟಿ ವೆಬ್‍ಸೈಟ್‍ನಲ್ಲಿ ಪಠ್ಯ ಪರಿಷ್ಕøತ ಹಾಗೂ ಹಳೆಯ ಪಠ್ಯದ ವಿವರ ಹಾಕುತ್ತೇವೆ' ತಿಳಿಸಿದರು.

‘ಪ್ರೊ.ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಈ ಹಿಂದೆ ಹಲವು ಪಠ್ಯ ತೆಗೆದಿದ್ದಾರೆ. ಸಿದ್ದರಾಮಯ್ಯ ಇದರ ಬಗ್ಗೆ ಉತ್ತರ ಕೊಡಬೇಕಿತ್ತು. ಅದರ ವಿಚಾರಕ್ಕೆ ಸಿದ್ದರಾಮಯ್ಯ ಹೋಗಲೇ ಇಲ್ಲ. ನಾಡು-ನುಡಿ ಮೇಲೆ ಅಭಿಮಾನ ಹುಟ್ಟುವ ಪಾಠಗಳನ್ನೇ ಬರಗೂರು ಅವರು ಪಠ್ಯದಿಂದ ತೆಗೆದಿದ್ದರು' ಎಂದು ನಾಗೇಶ್ ಆರೋಪಿಸಿದರು.

‘ಸಿದ್ದರಾಮಯ್ಯ ನೇತೃತ್ವದ ಸರಕಾರದ ಅವಧಿಯಲ್ಲಿ ಪರಿಷ್ಕೃತ ಪಠ್ಯದಲ್ಲಿ ಏನು ಕೈಬಿಟ್ಟಿದ್ದರು, ಈಗ ನಾವೇನು ಸೇರಿಸಿದ್ದೇವೆ ಎಲ್ಲವನ್ನೂ ಜನರ ಮುಂದಿಡುತ್ತೇವೆ. ಜನರು ತಪ್ಪಿದೆ ಎಂದು ಹೇಳಿದರೆ ಅದನ್ನು ಬದಲಾಯಿಸುವ ಮನಸ್ಸಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಹೀಗಿರುವಾಗಿ ಆಕ್ಷೇಪಿಸುವುದರಲ್ಲಿ ಅರ್ಥವೇ ಇಲ್ಲ' ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X