ಕಲ್ಕಟ್ಟ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಮಂಗಳೂರು : ಮಂಜನಾಡಿ ಗ್ರಾಮದ ಕಲ್ಕಟ್ಟ ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಅಚರಿಸಲಾಯಿತು.
ಪರಿಸರವಾದಿ ಬಿ.ಎಸ್. ಹಸನಬ್ಬ ಅಮ್ಮೆಂಬಳ ಗಿಡ ನೆಡುವ್ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು.
ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಎಂ. ಮುನೀರ್ ಕಲ್ಕಟ್ಟ ಅಧ್ಯಕ್ಷತೆ ವಹಿಸಿದ್ದರು. ಮಂಜನಾಡಿ ಗ್ರಾಪಂ ಸದಸ್ಯ ನೌಷಾದ್ ಕಲ್ಕಟ್ಟ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ನಿಸಾರ್ ಸಖಾಫಿ ತಟ್ಲ, ಮುಹಮ್ಮದ್ ಮದನಿ ಕಂಡಕ, ಅಂಗನಾಡಿ ಕಾರ್ಯಕರ್ತೆ ಸುಜಾತಾ, ದೈಹಿಕ ಶಿಕ್ಷಕಿ ಭಾರತಿ ಉಪಸ್ಥಿತರಿದರು. ಮುಖ್ಯ ಶಿಕ್ಷಕಿಯರಾದ ಮಾಲತಿ ಸ್ವಾಗತಿಸಿದರು. ಕಾವ್ಯಾ ವಂದಿಸಿದರು. ನಂದನಾ ಕಾರ್ಯಕ್ರಮ ನಿರೂಪಿಸಿದರು.
Next Story





