ಸರಕಾರಿ ಅಭಿಯೋಜಕರ ನೇಮಕ: ಫಲಿತಾಂಶ ಪ್ರಕಟಿಸಲು ಕಾಲಾವಕಾಶ ನೀಡಿದ ಹೈಕೋರ್ಟ್

ಬೆಂಗಳೂರು, ಜೂ.7: ಖಾಲಿ ಇರುವ 205 ಸಹಾಯಕ ಸರಕಾರಿ ಅಭಿಯೋಜಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರು ವಾರಗಳಲ್ಲಿ ಪೂರ್ಣಗೊಳಿಸಿ, ಫಲಿತಾಂಶ ಪ್ರಕಟಿಸಬೇಕೆಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.
ಕರ್ನಾಟಕ ರಾಜ್ಯದ ನ್ಯಾಯಾಲಯಗಳಲ್ಲಿ ಖಾಲಿ ಇರುವ ಸಹಾಯಕ ಸರಕಾರಿ ಅಭಿಯೋಜಕರ ಕೊರತೆ ವಿಚಾರಕ್ಕೆ ಸಂಬಂಧಿಸಿದಂತೆ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.
ಸಹಾಯಕ ಸರಕಾರಿ ಅಭಿಯೋಜಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆ ನಡೆಸಲು ಹಾಗೂ ಫಲಿತಾಂಶಗಳನ್ನು ಪ್ರಕಟಿಸಲು ಆರು ವಾರಗಳ ಕಾಲಾವಕಾಶವನ್ನು ನೀಡಿದೆ ಎಂದು ನ್ಯಾಯಪೀಠವು ತಿಳಿಸಿದೆ.
ಶೇ.40ರಷ್ಟು ಅಭಿಯೋಜಕರ ಹುದ್ದೆ ಖಾಲಿ ಇರುವುದರಿಂದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಈ ಅರ್ಜಿಯ ವಿಚಾರಣೆಯನ್ನು ಆರಂಭಿಸಲಾಗಿದೆ.
Next Story





