ಹಿಜಾಬ್ ವಿವಾದ; 24 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದ ಉಪ್ಪಿನಂಗಡಿ ಸರ್ಕಾರಿ ಕಾಲೇಜು

ಮಂಗಳೂರು: ತರಗತಿಯಲ್ಲಿ ನಿಗದಿಪಡಿಸಿದ ವಸ್ತ್ರಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು 24 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದೆ.
ತರಗತಿಯ ಒಳಗೆ ಹಿಜಾಬ್ ಧರಿಸಿದ್ದಕ್ಕಾಗಿ 24 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.
ಕರ್ನಾಟಕ ಹೈಕೋರ್ಟ್ ಜಾರಿಗೊಳಿಸಿದ ವಸ್ತ್ರಸಂಹಿತೆ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ. ವಿದ್ಯಾರ್ಥಿನಿಯರು ಹಿಜಾಬ್‍ನೊಂದಿಗೆ ತರಗತಿ ಪ್ರವೇಶಿಸಿದರೆ ಶಿಸ್ತುಕ್ರಮ ಕೈಗೊಳ್ಳುವಂತೆ ಪ್ರಾಧ್ಯಾಪಕರಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Next Story





