Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಸ್ಕಾಂ ಗ್ರಾಹಕರೇ ಆನ್ ಲೈನ್ ವಂಚನೆಕೋರರ...

ಬೆಸ್ಕಾಂ ಗ್ರಾಹಕರೇ ಆನ್ ಲೈನ್ ವಂಚನೆಕೋರರ ಬಗ್ಗೆ ಎಚ್ಚರ

ವಾರ್ತಾಭಾರತಿವಾರ್ತಾಭಾರತಿ8 Jun 2022 1:46 PM IST
share
ಬೆಸ್ಕಾಂ ಗ್ರಾಹಕರೇ ಆನ್ ಲೈನ್ ವಂಚನೆಕೋರರ ಬಗ್ಗೆ ಎಚ್ಚರ

ಬೆಂಗಳೂರು: ‘ಪ್ರಿಯಾ ಗ್ರಾಹಕರೇ, ನೀವು ನಿಮ್ಮ ವಿದ್ಯುತ್ ಬಿಲ್ ಅನ್ನು ಪಾವತಿಸದ ಕಾರಣ ನಿಮ್ಮ   ವಿದ್ಯುತ್ ಸಂಪರ್ಕವನ್ನು ಇಂದು ರಾತ್ರಿಯಿಂದಲೇ ಜಾರಿಗೆ ಬರುವಂತೆ ಕಡಿತಗೊಳಿಸಲಾಗುವುದು, ತಕ್ಷಣ ನಮ್ಮ ವಿದ್ಯುತ್ ಅಧಿಕಾರಿಯ ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ, ವಿದ್ಯುತ್ ಪಾವತಿಸಿ… ’ ಈ ರೀತಿಯ ಎಸ್ಎಂಎಸ್ ಗಳನ್ನು ಕಳುಹಿಸಿ ಬೆಸ್ಕಾಂ ಗ್ರಾಹಕರನ್ನು ವಂಚಿಸುವ ಆನ್ ಲೈನ್ ವಂಚನೆಕೋರರ ಜಾಲ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಬೆಸ್ಕಾಂನ ಗ್ರಾಹಕ ವ್ಯವಹಾರಗಳ ಪ್ರಧಾನ ವ್ಯವಸ್ಥಾಪಕ ಎಸ್. ಆರ್. ನಾಗರಾಜ ತಿಳಿಸಿದ್ದಾರೆ. 

ಈ ಆನ್ ಲೈನ್ ವಂಚನೆ ಬಗ್ಗೆ ಬೆಸ್ಕಾಂ ತನ್ನ ಗ್ರಾಹಕರಿಗೆ ಅರಿವು ಮೂಡಿಸುತ್ತಿದ್ದರೂ, ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತದೆ ಎಂಬ ಗಾಬರಿಗೆ ಒಳಗಾಗಿ ಆನ್ ಲೈನ್ ವಂಚನೆಕೋರರ ಬಲೆಗೆ ಸುಲಭ ತುತ್ತಾಗುತ್ತಿದ್ದಾರೆ. ಆನ್ ಲೈನ್ ವಂಚನೆಕೋರರ ಬಗ್ಗೆ ಬೆಸ್ಕಾಂ ಸೈಬರ್ ಪೋಲಿಸರ ಗಮನಕ್ಕೆ ತಂದಿದ್ದು,  ಗ್ರಾಹಕರಿಗೆ ನಿರಂತರ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ. 

ಬೆಸ್ಕಾಂ ತನ್ನ ಫೇಸ್ ಬುಕ್ ಮತ್ತು ಟ್ವಿಟರ್ ಖಾತೆಗಳಲ್ಲಿ, ಆನ್ ಲೈನ್ ವಂಚನೆ ಬಗ್ಗೆ ಗ್ರಾಹಕರಿಗೆ ಮಾಹಿತಿ ನೀಡುತ್ತಿದ್ದು, ಗ್ರಾಹಕರು ವಿದ್ಯುತ್ ಬಿಲ್ ಗಳನ್ನು ಬೆಸ್ಕಾಂ  ಸೂಚಿಸಿರುವ ಪಾವತಿ ಕೇಂದ್ರ,ಗಳಾದ ಬೆಂಗಳೂರು ಒನ್ , ಬೆಸ್ಕಾಂ ಮಿತ್ರ ಆ್ಯಪ್ , ಹತ್ತಿರದ ಬೆಸ್ಕಾಂ ಕಚೇರಿ, ಬೆಸ್ಕಾಂ ವೆಬ್ ಸೈಟ್ ಮತ್ತು ಗೂಗಲ್ ಆ್ಯಪ್ ಗಳಲ್ಲಿ ಮಾತ್ರ ಪಾವತಿಸಬಹುದಾಗಿದೆ.  ಗ್ರಾಹಕರಿಗೆ ವಿದ್ಯುತ್ ಬಿಲ್ ಗಳನ್ನು ಪಾವತಿಸಲು ಕರೆ ಅಥವಾ ಎಸ್ಎಂಎಸ್  ಬಂದಲ್ಲಿ ತಕ್ಷಣ ಬೆಸ್ಕಾಂ ಸಹಾಯವಾಣಿ 1912 ಗೆ ಕರೆ ಮಾಡಲು ಬೆಸ್ಕಾಂ ವಿನಂತಿಸಿದೆ. 

ಆನ್ ಲೈನ್ ವಂಚನೆಕೋರರು, ಗ್ರಾಹಕರಿಗೆ ಕರೆ ಮಾಡಿ ತಾವು ಸೂಚಿಸುವ ಮೊಬೈಲ್ ಗೆ ಫೋನ್ ಪೇ ಅಥವಾ ಗೂಗಲ್ ಪೇ ಮಾಡಿ ವಿದ್ಯುತ್ ಶುಲ್ಕವನ್ನು ಪಾವತಿಸಲು ಸೂಚಿಸುತ್ತಿದ್ದಾರೆ. ಇಂತಹ ಯಾವುದೇ ಬಿಲ್ ಪಾವತಿಸುವ ವ್ಯವಸ್ಥೆ ಬೆಸ್ಕಾಂನಲ್ಲಿಲ್ಲ. ಗ್ರಾಹಕರು ಇಂತಹ ಕರೆಗಳು ಬಂದ ತಕ್ಷಣ ಬೆಸ್ಕಾಂ ಸಹಾಯವಾಣಿಗೆ ಮಾಹಿತಿ ನೀಡಲು ಕೋರಲಾಗಿದೆ. 

ಆನ್ ಲೈನ್ ವಂಚನೆ ಬಗ್ಗೆ ಜನರಿಗೆ ನಾವು ಮಾಹಿತಿ ನೀಡುತ್ತಿದ್ದೇವೆ. ಬಿಲ್ ಪಾವತಿಸುವಂತೆ ಬೆಸ್ಕಾಂ ನಿಂದ ಗ್ರಾಹಕರಿಗೆ ಯಾವುದೇ ಕರೆ ಹೋಗುವುದಿಲ್ಲ ಅಲ್ಲದೆ ಬೆಸ್ಕಾಂ ಬಿಲ್ ಕಲೆಕ್ಟ್ ರ್ ಗೆ ಗ್ರಾಹಕರು ನಗದು ಪಾವತಿಸುವಂತಿಲ್ಲ. ಬೆಸ್ಕಾಂನ ಹತ್ತಿರದ ಪಾವತಿ ಕೇಂದ್ರ, ಬೆಸ್ಕಾಂ ವಿತ್ರ, ಮತ್ತು ಗೂಗಲ್ ಆ್ಯಪ್ ಗಳಲ್ಲಿ ಬಿಲ್ ಪಾವತಿಸಲು ಅನುಮತಿ ನೀಡಲಾಗಿದೆ. 

ಇಂತಹ ವಂಚನೆಗಳ ಬಗ್ಗೆ ಗ್ರಾಹಕರು ಎಚ್ಚರದಿಂದಿರಬೇಕು. ಬಿಲ್ ಪಾವತಿಗೆ ಬೆಸ್ಕಾಂ ಬಿಲ್ ನೀಡಿದ ದಿನದಿಂದ ಒಂದು ತಿಂಗಳ ಕಾಲಾವಕಾವಿರುತ್ತದೆ. ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತೇವೆ ಎಂಬ ಯಾವುದೇ ಎಸ್ಎಂಎಸ್ ಅನ್ನು ಬೆಸ್ಕಾಂ ಕಳುಹಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಪ್ರತಿ ತಿಂಗಳ ಮೂರನೇ ಶನಿವಾರದಂದು ಬೆಸ್ಕಾಂ ಉಪ-ವಿಭಾಗ ಕಚೇರಿಗಳಲ್ಲಿ ನಡೆಯುವ ಗ್ರಾಹಕರ ಸಂವಾದ ಸಭೆಗಳಲ್ಲಿ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡುತ್ತಾರೆ ಎಂದು ನಾಗರಾಜ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X