ಬಸ್ಸಿನಲ್ಲಿ ಯುವತಿಗೆ ಕಿರುಕುಳ: ಆರೋಪಿ ಸೆರೆ

ಸಾಂದರ್ಭಿಕ ಚಿತ್ರ
ಮಂಗಳೂರು, ಜೂ.8: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇರೆಗೆ ಬಿ.ಸಿ.ರೋಡ್ ನಿವಾಸಿ ಮುಹಮ್ಮದ್ ಮುಸ್ತಫಾ ಎಂಬಾತನನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಯುವತಿಯು ಸಂದರ್ಶನಕ್ಕಾಗಿ ಮಂಗಳವಾರ ಮಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಬರುತ್ತಿದ್ದು, ಪಕ್ಕದ ಸೀಟಿನಲ್ಲಿ ಕುಳಿತಿದ್ದ ಆರೋಪಿಯು ಮುಂಜಾನೆ ಸುಮಾರು 5ಕ್ಕೆ ಆಕೆಗೆ ಕಿರುಕುಳ ನೀಡತೊಡಗಿ ಎನ್ನಲಾಗಿದೆ. ಬೇಸತ್ತ ಯುವತಿ ಪ್ರಶ್ನಿಸಿದಾಗ ಆರೋಪಿಯು ಪಂಪ್ವೆಲ್ ಬಳಿ ಬಸ್ಸಿನಿಂದ ಇಳಿದು ಪರಾರಿಯಾಗಿದ್ದ ಎಂದು ಹೇಳಲಾಗಿದೆ.
ಸಂದರ್ಶನ ಮುಗಿಸಿದ ಬಳಿಕ ಯುವತಿಯು ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Next Story