Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರೀ ಹಿನ್ನಡೆಯ ಬಳಿಕ ಬಿಜೆಪಿಯ...

ಭಾರೀ ಹಿನ್ನಡೆಯ ಬಳಿಕ ಬಿಜೆಪಿಯ ಆತ್ಮಾವಲೋಕನ: 38 ತಪ್ಪಿತಸ್ಥ ನಾಯಕರ ಪೈಕಿ 27 ಜನರಿಗೆ ಎಚ್ಚರಿಕೆ; ವರದಿ

ವಾರ್ತಾಭಾರತಿವಾರ್ತಾಭಾರತಿ8 Jun 2022 3:08 PM IST
share
ಭಾರೀ ಹಿನ್ನಡೆಯ ಬಳಿಕ ಬಿಜೆಪಿಯ ಆತ್ಮಾವಲೋಕನ: 38 ತಪ್ಪಿತಸ್ಥ ನಾಯಕರ ಪೈಕಿ 27 ಜನರಿಗೆ ಎಚ್ಚರಿಕೆ; ವರದಿ

ಹೊಸದಿಲ್ಲಿ,ಜೂ.8: ಪ್ರವಾದಿ ಮುಹಮ್ಮದ್‌ರ ಕುರಿತು ಪಕ್ಷದ ನಾಯಕಿ ನೂಪುರ್ ಶರ್ಮಾರ ಅವಹೇಳನಕಾರಿ ಹೇಳಿಕೆಗಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಹಿನ್ನಡೆ ಮತ್ತು ಅವಮಾನದ ಬಳಿಕ ಎಚ್ಚೆತ್ತುಕೊಂಡಿರುವ ಆಡಳಿತಾರೂಢ ಬಿಜೆಪಿಯು ಹಾನಿ ನಿಯಂತ್ರಣಕ್ಕೆ ಮತ್ತು ತಪ್ಪನ್ನು ತಿದ್ದಿಕೊಳ್ಳಲು ಮುಂದಾಗಿದೆ‌ ಎಂದು Dainkbhaskar ವರದಿ ಮಾಡಿದೆ.

‌ಕಳೆದ ಎಂಟು ವರ್ಷಗಳಲ್ಲಿ ಅಲ್ಪಸಂಖ್ಯಾತರ ಧಾರ್ಮಿಕ ಭಾವನೆಗಳಿಗೆ ನೋವನ್ನುಂಟು ಮಾಡಿದ ನಾಯಕರ ಪಟ್ಟಿಯನ್ನು ಸಿದ್ಧಪಡಿಸುವಂತೆ ಬಿಜೆಪಿಯ ಉನ್ನತ ನಾಯಕತ್ವವು ತನ್ನ ಸಂಶೋಧನಾ ಘಟಕಕ್ಕೆ ನಿರ್ದೇಶ ನೀಡಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಪರಿಶೀಲನೆಯ ಬಳಿಕ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಆಗಾಗ್ಗೆ ನೋವನ್ನುಂಟು ಮಾಡಿದ್ದ 38 ನಾಯಕರನ್ನು ಬಿಜೆಪಿಯು ಗುರುತಿಸಿದೆ ಎಂದು ಪ್ರಮುಖ ಹಿಂದಿ ವೃತ್ತಪತ್ರಿಕೆ ‘ದೈನಿಕ ಭಾಸ್ಕರ್’ ತನ್ನ ವರದಿಯಲ್ಲಿ ಹೇಳಿದೆ.

ತಪ್ಪಿತಸ್ಥರೆಂದು ಗುರುತಿಸಲ್ಪಟ್ಟವರಲ್ಲಿ ಅನಂತಕುಮಾರ್ ಹೆಗಡೆ,‌ ಶೋಭಾ ಕರಂದ್ಲಾಜೆ, ಗಿರಿರಾಜ ಸಿಂಗ್, ತಥಾಗತ ರಾಯ್, ವಿನಯ ಕಟಿಯಾರ್, ಮಹೇಶ ಶರ್ಮಾ, ರಾಜಾ ಸಿಂಗ್,ಸಾಕ್ಷಿ ಮಹಾರಾಜ ಮತ್ತು ಸಂಗೀತ ಸೋಮ್ ಸೇರಿದ್ದಾರೆ. ಈ ಪೈಕಿ 27 ನಾಯಕರಿಗೆ ಎಚ್ಚರಿಕೆಯನ್ನು ನೀಡಿರುವ ಪಕ್ಷದ ವರಿಷ್ಠರು, ಸೂಕ್ಷ್ಮ ವಿಷಯಗಳ ಬಗ್ಗೆ ಯಾವುದೇ ಹೇಳಿಕೆಯನ್ನು ನೀಡುವ ಮುನ್ನ ನಾಯಕತ್ವದೊಂದಿಗೆ ಸಮಾಲೋಚಿಸುವಂತೆ ಸೂಚಿಸಿದೆ.

‘ದೈನಿಕ ಭಾಸ್ಕರ’ ತಿಳಿಸಿರುವಂತೆ ಬಿಜೆಪಿ ನಾಯಕತ್ವವು ತಪ್ಪಿತಸ್ಥರ ಪಟ್ಟಿಯನ್ನು ಸಿದ್ಧಪಡಿಸುವಲ್ಲಿ ನೆರವಾಗಲು ಐಟಿ ಸಂಸ್ಥೆಯೊಂದನ್ನೂ ನಿಯೋಜಿಸಿಕೊಂಡಿದೆ. ಬಿಜೆಪಿಯು ವಿಶ್ಲೇಷಣೆಯ ಬಳಿಕ ಕಳೆದ ಎಂಟು ವರ್ಷಗಳಲ್ಲಿ ತನ್ನ ನಾಯಕರು ನೀಡಿದ್ದ 5,200 ಹೇಳಿಕೆಗಳು ಅನಗತ್ಯವಾಗಿದ್ದವು ಮತ್ತು 2,700 ಹೇಳಿಕೆಗಳು ಸೂಕ್ಷ್ಮ ಶಬ್ದಗಳನ್ನು ಒಳಗೊಂಡಿದ್ದವು ಎಂಬ ನಿರ್ಧಾರಕ್ಕೆ ಬಂದಿದೆ.

ಟಿವಿ ಚರ್ಚೆಯೊಂದರ ಸಂದರ್ಭ ಶರ್ಮಾರ ಅವಮಾನಕಾರಿ ಹೇಳಿಕೆಯು ಮಧ್ಯಪ್ರಾಚ್ಯದಲ್ಲಿ ಸೃಷ್ಟಿಸಿರುವ ಆಕ್ರೋಶವು ಬಿಜೆಪಿಯ ಆತ್ಮಾವಲೋಕನಕ್ಕೆ ಕಾರಣವಾಗಿದೆ ಎಂದು ಪರಿಗಣಿಸಲಾಗಿದೆ.

ಅರಬ್ ದೇಶಗಳಲ್ಲಿಯ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಭಾರತ ವಿರೋಧಿ ಪ್ರಚಾರವನ್ನು ಶಮನಗೊಳಿಸುವ ಪ್ರಯತ್ನದಲ್ಲಿ ಬಿಜೆಪಿಯು ತನ್ನ ರಾಷ್ಟ್ರೀಯ ವಕ್ತಾರರಾಗಿದ್ದ ನೂಪುರ್ ಶರ್ಮಾರನ್ನು ಅಮಾನತು ಮತ್ತು ಪಕ್ಷದ ದಿಲ್ಲಿ ಘಟಕದ ಸಾಮಾಜಿಕ ಮಾಧ್ಯಮ ಘಟಕದ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ ಅವರ ಉಚ್ಚಾಟನೆಯನ್ನು ಮಾಡಿದೆಯಾದರೂ ಅಸಮಾಧಾನ ತಣ್ಣಗಾಗಿಲ್ಲ,ಅದು ಈಗ ದಕ್ಷಿಣ ಏಶ್ಯಾ ದೇಶಗಳಿಗೂ ಹಬ್ಬಿದೆ.

ವಿವಾದಾತ್ಮಕ ಹೇಳಿಕೆಗಳ ಕುರಿತು ಅರಬ್ ದೇಶಗಳು ಬಲವಾದ ಪ್ರತಿಭಟನೆಯನ್ನು ದಾಖಲಿಸಿದ ಬಳಿಕ ಮಾಲ್ದೀವ್ಸ್,ಲಿಬಿಯಾ ಮತ್ತು ಇಂಡೋನೇಶ್ಯಾದಂತಹ ಸಣ್ಣ ರಾಷ್ಟ್ರಗಳೂ ತಮ್ಮ ಅಧಿಕೃತ ಪ್ರತಿಭಟನೆಗಳನ್ನು ದಾಖಲಿಸಿದ್ದು ಇದು ಭಾರತವನ್ನು ಸಂದಿಗ್ಧತೆಯಲ್ಲಿ ಸಿಲುಕಿಸಿದೆ.

ಪ್ರವಾದಿಯವರ ಅವಮಾನಕ್ಕಾಗಿ ತೀವ್ರ ಅಸಮಾಧಾನ ಮತ್ತು ತಿರಸ್ಕಾರವನ್ನು ವ್ಯಕ್ತಪಡಿಸಿರುವ ಈ ಎಲ್ಲ ದೇಶಗಳು ಸರಕಾರದಿಂದ ಕ್ಷಮಾಯಾಚನೆಯನ್ನು ಆಗ್ರಹಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X