ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು, ಜೂ.8: ಆರೆಸೆಸ್ಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಇಬ್ಬರು ಪ್ರಮುಖ ಆರೋಪಿಗಳಾದ ಇರ್ಫಾನ್ ಪಾಷಾ ಮತ್ತು ಮೊಹಮದ್ ಮುಜೀಬುಲ್ಲಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ.
ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಇಬ್ಬರು ಆರೋಪಿಗಳು ಜಾಮೀನು ಮಂಜೂರು ಮಾಡುವಂತೆ ಕೋರಿದ್ದ ಅರ್ಜಿಗಳ ವಿಚಾರಣೆ ಅಂತಿಮಗೊಳಿಸಿದರು.
ಬೆಂಗಳೂರಿನ ಶಿವಾಜಿನಗರದಲ್ಲಿ ರುದ್ರೇಶ್ ಹತ್ಯೆಯಾಗಿತ್ತು. ಆರೆಸೆಸ್ಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದಲ್ಲಿ ಪೊಲೀಸರು 2016ರಲ್ಲಿ ಪ್ರಮುಖ ಆರೋಪಿಗಳಾದ ಇರ್ಫಾನ್ ಪಾಷಾ ಮತ್ತು ಮೊಹಮ್ಮದ್ ಮುಜೀಬುಲ್ಲಾರನ್ನು ಬಂಧಿಸಿದ್ದಾರೆ. ಬಳಿಕ ಕೋರ್ಟ್ ಆದೇಶದಂತೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
Next Story





