Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. "ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ...

"ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಇರಲಿ"

ವಾರ್ಡನ್‌ಗಳಿಗೆ ಸಿಇಓ ಪ್ರಸನ್ನ ಎಚ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ8 Jun 2022 8:21 PM IST
share
ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಇರಲಿ

ಉಡುಪಿ : ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾ ಗಿರುವ ವಾತಾವರಣವನ್ನು ಕಲ್ಪಿಸಿ ಅವರು ಉತ್ತಮ ಶಿಕ್ಷಣ ಪಡೆಯುವಂತೆ ನೋಡಿಕೊಳ್ಳುವುದು ಆಯಾ ವಾರ್ಡ್‌ನ್‌ಗಳ ಜವಾಬ್ದಾರಿಯಾಗಿದೆ ಎಂದು ಉಡುಪಿ ಜಿಲ್ಲಾ ಪಂಚಾಯತ್‌ನ ಸಿಇಓ ಪ್ರಸನ್ನ ಎಚ್. ಹೇಳಿದ್ದಾರೆ. 

ಬುಧವಾರ ಸಂಜೆ ಮಣಿಪಾಲದಲ್ಲಿರುವ ಜಿಲ್ಲಾಪಂಚಾಯತ್ ಸಭಾಂಗಣ ದಲ್ಲಿ ನಡೆದ ಜಿಲ್ಲೆಯ ಎಲ್ಲಾ ಹಾಸ್ಟೆಲ್ ವಾರ್ಡನ್‌ಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. 

ಸರಕಾರ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಹಾಗೂ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಮೂಲಕ  ವಿದ್ಯಾರ್ಥಿ ನಿಲಯಗಳ ಸೌಲಭ್ಯವನ್ನು ಕಲ್ಪಿಸಿ ಉತ್ತಮ ಶಿಕ್ಷಣ ಪಡೆಯಲು ಅವಕಾಶ ಮಾಡಿಕೊಟ್ಟಿದೆ. ಇದರ ಸದುಪಯೋಗ ಆಗಬೇಕು ಎಂದವರು ತಿಳಿಸಿದರು.

ಶ್ರೀಮಂತ ವರ್ಗದವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಕೊಡಿಸಲು ಸಾಕಷ್ಟು ಹಣವನ್ನು ಖರ್ಚು ಮಾಡಿ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೇರಿಸಿ  ಸಂಸ್ಥೆಯವರು ವಿಧಿಸುವ ಎಲ್ಲಾ ರೀತಿಯ ಕಠಿಣ ಷರತ್ತಿಗೆ ಬದ್ಧರಾಗಿ ಶಿಕ್ಷಣ ಕೊಡಿಸುತ್ತಾರೆ. ಸರಕಾರ ಸಹ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಊಟ, ಪಠ್ಯಪುಸ್ತಕ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದೆ. ಆದರೆ ಇಲ್ಲಿನ ವಿದ್ಯಾರ್ಥಿಗಳು ನಿರೀಕ್ಷಿತ ಪ್ರಮಾಣದಲ್ಲಿ ಶಿಕ್ಷಣವಂತರಾಗುತ್ತಿಲ್ಲ. ಹೀಗಾಗದಂತೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳ ಬೇಕೆಂದು ಅವರು ವಾರ್ಡನ್‌ಗಳಿಗೆ ಸೂಚನೆಗಳನ್ನು ನೀಡಿದರು.

ಸರಕಾರ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ  ಉದ್ದೇಶದಿಂದ ಅನೇಕಮಾರ್ಗಸೂಚಿಗಳು ಹಾಗೂ ನಿಯಮಗಳನ್ನು ರೂಪಿಸಿದೆ. ಇವುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡದಂತೆ ಕಟ್ಟೆಚ್ಚರ ವಹಿಸಬೇಕು ಎಂದರು.

ವಿದ್ಯಾರ್ಥಿಗಳು ಪ್ರತಿದಿನ ಶಾಲಾ ಕಾಲೇಜುಗಳಿಗೆ ಹಾಜರಾಗುವ ಬಗ್ಗೆ ಮತ್ತು  ವಿಶೇಷವಾಗಿ ಕಾಲೇಜು ವಿದ್ಯಾರ್ಥಿ ಗಳು ತರಗತಿಗಳಿಗೆ ಗೈರು ಹಾಜರಾಗುತ್ತಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಖುದ್ದಾಗಿ ಪರಿಶೀಲಿಸಬೇಕು ಎಂದರು.

ಹಾಸ್ಟೆಲ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಪ್ರಾಮಾಣಿಕವಾಗಿ ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಿದ್ದಲ್ಲಿ, ವಿದ್ಯಾರ್ಥಿಗಳನ್ನು ನಿಯಂತ್ರಿಸಿ ವಿದ್ಯಾಭ್ಯಾಸ ಕಡೆಗೆ ಹೆಚ್ಚಿನ ಆಸಕ್ತಿ ವಹಿಸುವಂತೆ ನೋಡಿ ಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ವಿದ್ಯಾರ್ಥಿನಿಲಯಗಳಿಗೆ ದಾಖಲಾತಿ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪೋಷಕ ರುಗಳಿಗೆ, ವಿದ್ಯಾರ್ಥಿನಿಲಯದ ನಿಯಮಗಳ ಬಗ್ಗೆ ಮತ್ತು ಅವುಗಳ ಪಾಲನೆ ಬಗ್ಗೆ ಲಿಖಿತ ಒಪ್ಪಿಗೆಯನ್ನು ಪಡೆಯಬೇಕು. ವಿದ್ಯಾರ್ಥಿಗಳು ಗೈರು ಹಾಜರಾ ಗದಂತೆ ಪೋಷಕರು ಸಹಕರಿಸಬೇಕೆಂದು ತಿಳಿಸುವುದು ಸೂಕ್ತ ಎಂದರು.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಸ್ಟೆಲ್‌ಗಳಲ್ಲಿ ಇರುವ ಗಣಕಯಂತ್ರಗಳ ಸಮರ್ಪಕ ಬಳಕೆಯ ಬಗ್ಗೆ ಅವರಿಗೆ ಸೂಕ್ತ ತರಬೇತಿಯನ್ನು ನೀಡಬೇಕು. ಮುಂದಿನ ದಿನಗಳಲ್ಲಿ ಅವರುಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿ ಸಲು ಪೂರಕವಾಗುವ ತರಬೇತಿಗಳನ್ನು ನೀಡುವ ಚಿಂತನೆ ಇದೆ. ತಾನು ವಿದ್ಯಾರ್ಥಿ ನಿಲಯಗಳಿಗೆ ಆಗಿಂದಾಗ್ಗೆ ಅನಿರೀಕ್ಷಿತ ಭೇಟಿ ನೀಡುತ್ತೇನೆ ಎಂದು ಪ್ರಸನ್ನ ತಿಳಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಅನಿತಾ ಮಡ್ಲೂರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸಚಿನ್ ಕುಮಾರ್, ಸವಗ್ರ ಗಿರಿಜನ ಅಭಿವೃಧ್ದಿ ಯೋಜನಾಧಿಕಾರಿ ದೂದ್‌ಪೀರ್ ಹಾಗೂ ಜಿಲ್ಲೆಯ ವಿವಿಧ ಹಾಸ್ಟಲ್‌ಗಳ ವಾರ್ಡನ್‌ಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X