Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶರಾವತಿ ಮುಳುಗಡೆ ಸಂತ್ರಸ್ತರ ಸಭೆ;...

ಶರಾವತಿ ಮುಳುಗಡೆ ಸಂತ್ರಸ್ತರ ಸಭೆ; ಲಿಂಗನಮಕ್ಕಿ ಅಣೆಕಟ್ಟೆ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ8 Jun 2022 8:50 PM IST
share
ಶರಾವತಿ ಮುಳುಗಡೆ ಸಂತ್ರಸ್ತರ ಸಭೆ; ಲಿಂಗನಮಕ್ಕಿ ಅಣೆಕಟ್ಟೆ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ನಿರ್ಧಾರ

ಶಿವಮೊಗ್ಗ, ಜೂ.08: ಮುಂದಿನ ವಿಧಾನಸಭೆ ಮುಂದಿನ ಚುನಾವಣೆಯೊಳಗೆ ಶರಾವತಿ  ಸಂತ್ರಸ್ತರು ಮತ್ತು ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವ  ಕಾರ್‍ಯವನ್ನು ಪೂರ್ಣಗೊಳಿಸದಿದ್ದರೆ ಲಿಂಗನಮಕ್ಕಿ ಅಣೆಕಟ್ಟೆ ಮುಂಭಾಗದಲ್ಲಿ ಶರಾವತಿ ಸಂತ್ರಸ್ತರ ಬೃಹತ್ ಪ್ರತಿಭಟನಾ ಸಭೆ ನಡೆಸಲಾಗುವುದು ಎಂದು ಶ್ರೀಕ್ಷೇತ್ರ ಸಿಗಂದೂರು ಧರ್ಮದರ್ಶಿ  ಡಾ.ರಾಮಪ್ಪನವರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಅವರು ಸೊರಬ ತಾಲೂಕು ಹೊಳೆಕೊಪ್ಪ ಶ್ರೀ ಧನಾಂಜನೇಯ ದೇವಸ್ಥಾನದ ಸಭಾ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಶರಾವತಿ ಸಂತ್ರಸ್ತರ ಸಭೆಯಲ್ಲಿ ಮಾತನಾಡಿದರು. ಸಂತ್ರಸ್ತರ ಸಮಸ್ಯೆ ನಿವಾರಣೆಗಾಗಿ ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ ಮಾಡಲು  ಸಿದ್ಧನಿದ್ದೇನೆ ಎಂದು ರಾಮಪ್ಪನವರು ಘೋಷಿಸಿದರು.

ಶರಾವತಿ ಹಿನ್ನೀರಿನಿಂದ ಸ್ಥಿರ ಮತ್ತು ಚರ  ಆಸ್ತಿ ಕಳೆದುಕೊಂಡವರು ತಾವು ಪುನರ್ವಸತಿ  ಪಡೆದ ಸ್ಥಳದಲ್ಲಿ ಹಕ್ಕುಪತ್ರವಿಲ್ಲದೆ ನಿರಾಶ್ರಿತರಾಗಿ  ಬದುಕುತ್ತಿದ್ದಾರೆ. ಸರಕಾರ ಅವರಿಗೆ ಹಕ್ಕುಪತ್ರ ನೀಡಲು ನೂರಾರು ಕಾನೂನಿನ ಸಬೂಬು ಹೇಳುತ್ತ  ದಿನ ದೂಡುತ್ತಿದೆ. ಇದರಿಂದ ಸಂತ್ರಸ್ತರು ತಮ್ಮ  ಜಮೀನನ್ನು ಅಭಿವೃದ್ಧಿ ಪಡಿಸಲು ಸಾಧ್ಯವಾಗದೆ  ನಿತ್ಯವೂ ಚಿಂತೆಯಿಂದ ಬದುಕಬೇಕಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ತೀ.ನಾ.ಶ್ರೀನಿವಾಸ ಮಾತನಾಡಿ, ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆ ಬಗ್ಗೆ ಶಾಸನ ಸಭೆಯಲ್ಲಿ ಶಾಸಕ ಹಾಲಪ್ಪ,ಕುಮಾರ್ ಬಂಗಾರಪ್ಪ ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಸಂತ್ರಸ್ತರಿಗೆ  ಹಕ್ಕುಪತ್ರ ನೀಡಲು ಇರುವ ತಾಂತ್ರಿಕ  ತೊಂದರೆಗಳನ್ನು ನಿವಾರಿಸಲು ಸರಕಾರ ಕೂಡಲೇ  ಕ್ರಮಕೈಗೊಳ್ಳಬೇಕು,ಇಲ್ಲವಾದಲ್ಲಿ ಹೆಂಗಸರು,ಮಕ್ಕಳು ಸೇರಿ ಸರ್ಕಾರಗಳ ವಿರುದ್ದ  ಪಕ್ಷಾತೀತವಾಗಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಹೋರಾಟ ಸಮಿತಿಯ ಜಿ. ಲೋಕೇಶ್ ಮಾತನಾಡಿ,  ಜಿಲ್ಲಾದ್ಯಂತ ಶರಾವತಿ ಸಂತ್ರಸ್ತರನ್ನು  ಸಂಘಟಿಸಿ ಬೃಹತ್ ನಡೆಸಲಾಗುವುದು ಎಂದು  ವಿವರಿಸಿದರು.
ಸಭೆಯಲ್ಲಿ ಹೂವಪ್ಪ, ರಘುಪತಿ ನಿಂಬೆ, ಸುಧೀರ್ ಸಂಕ್ಲಾಪುರ, ನೂರಾರು ಸಂತ್ರಸ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.ಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X