ನಿವೃತ್ತಿ ವಯೋಮಿತಿ 65ಕ್ಕೆ ಆಗ್ರಹಿಸಿದ್ದ ಅರ್ಜಿ ಹೈಕೋರ್ಟ್‍ನಿಂದ ವಜಾ

ಬೆಂಗಳೂರು, ಜೂ.8: ನಿವೃತ್ತಿ ವಯೋಮಿತಿಯನ್ನು 62 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸಬೇಕೆಂದು ಧಾರವಾಡ ಕೃಷಿ ವಿಜ್ಞಾನ ಕಾಲೇಜಿನ ಡೀನ್ ಡಾ.ಚಿದಾನಂದ ಪಿ ಮನ್ಸೂರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ಅರ್ಜಿಯನ್ನು ವಜಾಗೊಳಿಸಿದೆ.
ನಿವೃತ್ತಿ ವಯೋಮಿತಿಯನ್ನು 65 ವರ್ಷಕ್ಕೆ ಹೆಚ್ಚಿಸಬೇಕೆಂಬ ಮನವಿಯನ್ನು ಪರಿಗಣಿಸಿದರೆ, ಇತರರಿಗೆ ಉದ್ಯೋಗಾವಕಾಶಗಳ ಮೇಲೆ ಹಾಗೂ ರಾಜ್ಯದ ಬೊಕ್ಕಸದ ಮೇಲೆ ಪ್ರಭಾವ ಬೀರುತ್ತದೆ. ಅಲ್ಲದೆ, ಇಂಥ ನಿರ್ಧಾರಗಳನ್ನು ನ್ಯಾಯಾಲಯಗಳು ಸುಲಭವಾಗಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿತು.
Next Story





