Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ...

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ: ಬಿ.ಎಸ್ ಯಡಿಯೂರಪ್ಪ

''ಇನ್ನೂ ಹತ್ತು ವರ್ಷ ಸಕ್ರೀಯ ರಾಜಕೀಯದಲ್ಲಿ ಇರುತ್ತೇನೆ''

ವಾರ್ತಾಭಾರತಿವಾರ್ತಾಭಾರತಿ8 Jun 2022 10:12 PM IST
share
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ: ಬಿ.ಎಸ್ ಯಡಿಯೂರಪ್ಪ

ವಿಜಯಪುರ: 'ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧಿಸಿ ಗೆಲ್ಲುತ್ತಾರೆ' ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಮೇಲ್ಮನೆ ಚುನಾವಣೆಗೆ ವಿಜಯೇಂದ್ರಗೆ ಟಿಕೆಟ್ ಕೊಡಿಸಲಾಗಲಿಲ್ಲ. ಬಿಜೆಪಿ ನನ್ನನ್ನು ಪಕ್ಕಕ್ಕೆ ಸರಿದಿದೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿಕೆ ಅರ್ಥವಿಲ್ಲ. ಒಂದೇ ಕುಟುಂಬದವರಿಗೆ ಟಿಕೇಟ್ ಕೊಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ‌ ತೀರ್ಮಾನ ತೆಗೆದುಕೊಂಡಿದ್ದು‌ ಎಲ್ಲರಿಗೂ  ಗೊತ್ತಿರೋದೇ. ಆದರೆ ವಿಧಾನಸಭಾ ಚುನಾವಣೆಗೆ ವಿಜಯೇಂದ್ರ ಸ್ಪರ್ಧಿಸಲಿದ್ದು, ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಗೆಲ್ಲಲಿದ್ದಾರೆ ಎಂದು ತಮ್ಮ ಮಗನ ರಾಜಕೀಯ ಸಾಮರ್ಥ್ಯದ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಬಿಜೆಪಿ ಪಕ್ಷ ಯಡಿಯೂರಪ್ಪ ಹಾಗೂ ಅವರ ಕುಟುಂಬವನ್ನು‌ ಪಕ್ಕಕ್ಕೆ ಸರಿಸಿದೆ‌ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಸಿದ್ದರಾಮಯ್ಯ ಅವರಿಂದ ನನಗೆ ಯಾವುದೇ ಸರ್ಟಿಫಿಕೇಟ್ ಬೇಕಿಲ್ಲ. ಬಿಜೆಪಿ‌ ನನಗೆ ಕೊಟ್ಟಿರುವ ಸ್ಥಾನಮಾನಗಳು  ಬೇರೆ ಯಾರಿಗೂ‌ ಸಿಕ್ಕಿಲ್ಲ. ಪಕ್ಷದ ರಾಜ್ಯಾಧ್ಯಕ್ಷನಾಗಿದ್ದೆ, ನಾಲ್ಕು ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ಹೀಗೆ ಎಲ್ಲಾ ಅವಕಾಶ ಸಿಕ್ಕಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ನಾನೇ ರಾಜೀನಾಮೆ‌ ಕೊಟ್ಟು ಬಂದವನು. ಆದರೂ ರಾಜ್ಯದ ಜನತೆ, ಪಕ್ಷ ನನ್ನ ಮೇಲೆ ಅದೇ, ಪ್ರೀತಿ, ವಿಶ್ವಾಸ, ಗೌರವ ಇರಿಸಿಕೊಂಡಿರುವುದು ನನಗೆ ಸಂತೃಪ್ತತೆ ನೀಡಿದೆ ಎಂದರು.

ಭವಿಷ್ಯದ ದಿನಗಳಲ್ಲಿ ಪಕ್ಷ ಬಹುಮತ ಪಡೆದು ಮತ್ತೆ ಅಧಿಕಾರಕ್ಕೆ ಬರಲು ಏನೇನು ಪ್ರಯತ್ನ ಮಾಡಬೇಕೋ ಅದನ್ನು ಮಾಡೇ ಮಾಡುತ್ತೇವೆ.
ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ  140 ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲುವ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ. ಆದರೆ ಸಿದ್ದರಾಮಯ್ಯ ತಾವು ಅಧಿಕಾರಕ್ಕೆ ಬರುತ್ತೇವೆಂದು ಭ್ರಮೆಯಲ್ಲಿದ್ದಾರೆ. ಅದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಕುಟುಕಿದರು.

ಇನ್ನೂ ಹತ್ತು ವರ್ಷ ಸಕ್ರೀಯ ರಾಜಕೀಯದಲ್ಲಿ ಇರುವುದಾಗಿ ಮಂಗಳವಾರ ಮೇಲ್ಮನೆ ಪ್ರಚಾರ ಸಭೆಯಲ್ಲಿ ನೀಡಿದ ಹೇಳಿಕೆಯನ್ನು ಪುನರುಚ್ಛರಿಸಿದ ಯಡಿಯೂರಪ್ಪ, ಪಕ್ಷದ ಸಂಘಟನೆಗಾಗಿ ರಾಜ್ಯದಲ್ಲಿ ಓಡಾಡಲು ನಿಶ್ಚಯಿಸಿದ್ದೇನೆ. ಹೀಗಾಗಿ ರಾಜ್ಯದ ಜನತೆಯ ಆಶೀರ್ವಾದದಿಂದ ಆರೋಗ್ಯ ಚೆನ್ನಾಗಿದ್ದರೆ ಇನ್ನೂ ಹತ್ತು ವರ್ಷ ಸಕ್ರೀಯ ರಾಜಕೀಯದಲ್ಲಿ ಇದ್ದು ಪಕ್ಷ ಸಂಘಡಿಸುತ್ತೇನೆ ಎಂದರು.

ರಾಜ್ಯದ ಉದ್ದಗಲಕ್ಕೂ‌ ಪ್ರವಾಸ ಮಾಡಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ. ವಿಧಾನಸಭೆಗೆ ನಡೆಯುವ ಚುನಾವಣೆಗೆ ಸಾಮೂಹಿಕ ನೇತ್ರತ್ವದಲ್ಲಿ ಜನತೆಯ ಮುಂದೆ ಹೋಗುತ್ತೇವೆ. ಎಲ್ಲರೂ ಒಟ್ಟಾಗಿ ಸೇರಿಕೊಂಡು ಕೆಲಸ ಮಾಡಿ‌,  ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X