ಮುಂಬೈನಲ್ಲಿ ವಸತಿ ಕಟ್ಟಡ ಕುಸಿತ, ಓರ್ವ ಬಲಿ, 16 ಮಂದಿಗೆ ಗಾಯ

ಮುಂಬೈ: ಮುಂಬೈನ ಬಾಂದ್ರಾ ಪಶ್ಚಿಮದ ಶಾಸ್ತ್ರಿ ನಗರದಲ್ಲಿ ಬುಧವಾರ ರಾತ್ರಿ ಜಿ+2 ಕಟ್ಟಡ ಕುಸಿದು ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ತಿಳಿಸಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
"ಶಾಸ್ತ್ರಿ ನಗರದಲ್ಲಿನ ಜಿ+2 ಮನೆ ಕುಸಿತದಲ್ಲಿ ದುರದೃಷ್ಟವಶಾತ್ ಒಬ್ಬರು ಸಾವನ್ನಪ್ಪಿದ್ದಾರೆ . 16 ಜನರನ್ನು ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಗಾಯಗೊಂಡವರ ವರದಿಗಳಿಗಾಗಿ ಕಾಯಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಗಳು ಇನ್ನೂ ಮುಂದುವರೆದಿದೆ " ಎಂದು ಬಿಎಂಸಿ ಟ್ವೀಟ್ ಮಾಡಿದೆ.
Next Story